ಬೆಂಗಳೂರು: ಕರ್ನಾಟದಲ್ಲಿ 10 ದಿನಕ್ಕೂ ಹೆಚ್ಚು ಕಾಲ ಸುರಿದ ಭಾರೀ ಮಳೆಯಿಂದ (Heavy Rains) ಹಲವು ಕಡೆ ಜನ ಜೀವನ ಅಸ್ತವ್ಯಸ್ತವಾಗಿತ್ತು. ಕೆಲ ಜಿಲ್ಲೆಗಳಲ್ಲಿ ಮಳೆಯಿಂದ ಅವಾಂತರವೇ ಸೃಷ್ಟಿಯಾಗಿದೆ. ರೈತರು ಬೆಳೆದ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕಂಗಾಲಾಗಿದ್ದಾರೆ. ಮಲೆನಾಡು, ಬೆಳಗಾವಿ, ಉತ್ತರ ಕನ್ನಡದ ಹಲವು ಕಡೆ ಮನೆಗಳು ಜಲಾವೃತಗೊಂಡು ಜನರು ಮನೆ ಬಿಟ್ಟು ಕಾಳಜಿ ಕೆಂದ್ರಕ್ಕೆ ಶಿಫ್ಟ್ ಆಗಿದ್ದರು. ಸದ್ಯ ರಾಜ್ಯದಲ್ಲಿ ನಿನ್ನೆಯಿಂದ ವರುಣನ ಆರ್ಭಟ ಕಡಿಮೆಯಾಗಿದೆ. ಆದರೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು (Weather Report) ತಿಳಿಸಿವೆ.
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಜೊತೆಗೆ ಅಲ್ಲಲ್ಲಿ ಉತ್ತಮ ಮಳೆ ಮಳೆಯಾಗುತ್ತದೆ. ಮಲೆನಾಡು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುತ್ತದೆ ಎಂದು ಹವಾಮಾನ ವರದಿಗಳು ಹೇಳಿವೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದರಿಂದ ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ, ಕೋಲಾರ ಹಾಗೂ ತುಮಕೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಅಲ್ಲದೇ ಉತ್ತರ ಒಡನಾಡಿನಲ್ಲೂ ಹಗುರ ಮಳೆಯಾಗುವುದರಿಂದ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ವಿಜಯನಗರ, ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.
ಇನ್ನು ಮಲೆನಾಡು ಭಾಗದಲ್ಲೂ ಸಾಧಾರಣ ಮಳೆಯಾಗುತ್ತದೆ ಎಂದು ಹವಮಾನ ವರದಿಗಳು ತಿಳಿಸಿದ್ದು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಕೊಂಚ ಮಳೆಯಾಗಬಹುದು.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧರಣ ಮಳೆ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. pic.twitter.com/Xk29pp9X4z
— KSNDMC (@KarnatakaSNDMC) July 27, 2021
ಇದನ್ನೂ ಓದಿ
ಬೆಳಗಾವಿ ನೆರೆ ಸಂತ್ರಸ್ತರ ಅಳಲು ಆಲಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
(Karnataka Weather Report light rainfall in karavali and malnad)
Published On - 9:41 am, Wed, 28 July 21