AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಕಡೆ ತುಂತುರು ಮಳೆಯಾಗುವ ಸಾಧ್ಯತೆ

Karnataka Weather: ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಜೊತೆಗೆ ಚಳಿ ಮುಂದುವರಿಯಲಿದೆ. ಮುಂದಿನ ಮೂರು ದಿನಗಳಲ್ಲಿ ಕೆಲವು ಕಡೆ ಮಳೆ ಮತ್ತು ಚಳಿ ಹೆಚ್ಚಾಗುವ ಸಂಭವವಿದೆ. ಸಂಕ್ರಾಂತಿ ಸಮಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಕಡೆ ತುಂತುರು ಮಳೆಯಾಗುವ ಸಾಧ್ಯತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jan 03, 2026 | 6:43 AM

Share

ಬೆಂಗಳೂರು, ಜ.3: ಇಂದು ಕರ್ನಾಟಕದ ಹಲವು (Karnataka Weather Forecast)  ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಮಿಶ್ರ ವಾತಾವರಣ ಇರಲಿದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27°C (81°F) ಮತ್ತು ಕನಿಷ್ಠ ತಾಪಮಾನ 18°C ​​(64°F) ಇರಲಿದೆ ಎಂದು ಹೇಳಲಾಗಿದೆ. ಕರಾವಳಿ ಕರ್ನಾಟಕ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಹಾಗೂ ಮಂಗಳೂರು ಮತ್ತು ಉಡುಪಿ ನಗರದಲ್ಲಿ ಬೆಚ್ಚಗಿನ, ಚಳಿ ಹೆಚ್ಚಿರಲಿದೆ.

ಇನ್ನು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿ ಒಣ ಹವಾಮಾನ ಮುಂದುವರಿಯಲಿದೆ. ಕಲಬುರಗಿ,ಬೀದರ್, ಮತ್ತು ಬಾಗಲಕೋಟೆಯಲ್ಲಿ ಸಾಮಾನ್ಯ ಚಳಿ ಇದ್ದು, ಗರಿಷ್ಠ 29°C ಮತ್ತು ರಾತ್ರಿ ಇದರ ತಾಪಮಾನ ಕಡಿಮೆ ಇರುತ್ತದೆ. ದಾವಣಗೆರೆ,ಚಿತ್ರದುರ್ಗ, ಮತ್ತು ಬಳ್ಳಾರಿ ಇಂದು ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ಮುಂದಿನ 3 ದಿನಗಳಲ್ಲಿ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಚಳಿ ಮುಂದುವರಿಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಬಿಗ್​​ ಶಾಕ್​​​​​: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ವಿಜಯನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಬೀದರ್, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಗದಗ, ಕಲಬುರಗಿ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರಿನಲ್ಲಿ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಹೇಳಿದೆ. ಸಂಕ್ರಾಂತಿ ಸಮಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:25 am, Sat, 3 January 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ