Karnataka Rains: ರಾಜ್ಯದಲ್ಲಿ ಮುಂದಿನ 5 ದಿನಗಳ ತನಕ ಮಳೆ ಮುಂದುವರೆಯುವ ಸಾಧ್ಯತೆ

ಇಂದು ಮುಂಜಾನೆ ಮಲೆನಾಡು ಭಾಗದಲ್ಲಿ ಸೂರ್ಯನ ಕಿರಣಗಳು ಹೊರಗೆ ಹೊರಟಿದ್ದು ಮಳೆಯ ಅಬ್ಬರ ಕೊಂಚ ಇಳಿಮುಖವಾಗಿದೆ. ಆದರೆ, ಮುಂದಿನ ಐದು ದಿನಗಳ ಕಾಲ ರಾಜ್ಯದ ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆ ಇದ್ದು, ಕೃಷಿಕರು ಚಿಂತಾಕ್ರಾಂತರಾಗಿದ್ದಾರೆ.

Karnataka Rains: ರಾಜ್ಯದಲ್ಲಿ ಮುಂದಿನ 5 ದಿನಗಳ ತನಕ ಮಳೆ ಮುಂದುವರೆಯುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Skanda

Updated on: Jul 25, 2021 | 11:14 AM

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಅಬ್ಬರಿಸಿರುವ ಮಳೆಯಿಂದಾಗಿ (Karnataka Rains) ಜನಜೀವನ ಅಸ್ತವ್ಯಸ್ತವಾಗಿದೆ. ಎಡೆಬಿಡದೆ ಸುರಿದ ಧಾರಾಕಾರ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಭಾರೀ ಮಳೆಗೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿಪಾತ್ರದ ಜನರಿಗೆ ಪ್ರವಾಹ (Flood) ಭೀತಿ ಎದುರಾಗಿದೆ. ಆದರೆ, ನಿನ್ನೆ ಸಂಜೆಯಿಂದ ಮಳೆಯ ಆರ್ಭಟ ಕೊಂಚ ತಗ್ಗಿದ್ದು, ಪರಿಸ್ಥಿತಿ ಸುಧಾರಿಸಲಿ ಎಂದು ಜನರು ಪ್ರಾರ್ಥಿಸುತ್ತಿದ್ದಾರೆ. ಕರ್ನಾಟಕದಲ್ಲಿ ಮುಂಗಾರು (Monsoon 2021) ಆರಂಭವಾದಾಗಿನಿಂದ ಇಲ್ಲಿಯ ತನಕ ಸರಾಸರಿ 501.6 ಮಿ.ಮೀ ಮಳೆಯಾಗಿದೆ. ಪ್ರತೀ ವರ್ಷ ಸಾಧಾರಣವಾಗಿ 403.8 ಮಿ.ಮೀ ಮಳೆಯಾಗುತ್ತಿತ್ತು. ಆದರೆ, ಈ ಬಾರಿ ಶೇ.24ರಷ್ಟು ಹೆಚ್ಚುವರಿ ಮಳೆ ಸುರಿದಿದೆ. ಬೆಂಗಳೂರಿನಲ್ಲಿ (Bengaluru Rain) ಶನಿವಾರ ರಾತ್ರಿ 8.30ರ ತನಕ ದಾಖಲಾದ ವರದಿ ಪ್ರಕಾರ 24.4 ಮಿ.ಮೀ. ಮಳೆಯಾಗಿದೆ. ಹೆಚ್​ಎಎಲ್​ ಏರ್​ಪೋರ್ಟ್​​ ಒಂದರಲ್ಲೇ 16.6 ಮಿ.ಮೀ ಮಳೆಯಾಗಿರುವುದು ತಿಳಿದು ಬಂದಿದೆ.

ಭಾರೀ ಮಳೆಯಿಂದ ಈಗಾಗಲೇ ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ವರ್ಷ ಕರ್ನಾಟಕದಲ್ಲಿ ಮಳೆಯ ರೌದ್ರಾವತಾರಕ್ಕೆ ಸಿಲುಕಿ 9 ಮಂದಿ ದುರ್ಮರಣಕ್ಕೀಡಾಗಿದ್ದು, ಮೂರು ಜನ ನಾಪತ್ತೆಯಾಗಿದ್ದಾರೆ. ಕಳೆದ 3 ದಿನಗಳಿಂದ ರಾಜ್ಯಾದ್ಯಂತ ಮಳೆಯಬ್ಬರ ಹೆಚ್ಚಾಗಿದ್ದು, ಒಟ್ಟು 8 ಕಡೆ ಭೂ ಕುಸಿತ ಸಂಭವಿಸಿರುವುದು ದಾಖಲಾಗಿದೆ. ಅಪಾಯಕಾರಿ ಪ್ರದೇಶಗಳಲ್ಲಿ ಸಿಲುಕಿದ್ದ ಸುಮಾರು 9 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.

ಪ್ರವಾಹ ಪಡೀತ ಪ್ರದೇಶಗಳ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸರಣಿ ಸಭೆ ಹಾಗೂ ವಿಡಿಯೋ ಕಾನ್ಫರೆನ್ಸ್​​ ನಡೆಸುತ್ತಿದ್ದಾರೆ. ಮುಖ್ಯವಾಗಿ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಮತ್ತು ಧಾರಾವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಪರಿಸ್ಥಿತಿ ಬಗ್ಗೆ ಅವಶ್ಯಕ ಮಾಹಿತಿ ಪಡೆದಿದ್ದಾರೆ. ಸದ್ಯ ಬೆಳಗಾವಿಯಲ್ಲಿ ಉಂಟಾಗಿರುವ ನೆರೆ ಹಾನಿಯನ್ನು ಪರಿಶೀಲಿಸಲು ತೆರಳಿರುವ ಬಿ.ಎಸ್.ಯಡಿಯೂರಪ್ಪ, ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.

ಭಾರೀ ಮಳೆಯಿಂದಾಗಿ ಕೃಷ್ಣಾ, ಕಾವೇರಿ, ತುಂಗಭದ್ರಾ, ಭೀಮಾ, ಕಪಿಲಾ ಸೇರಿದಂತೆ ಮೊದಲಾದ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿವೆ. ಸುಮಾರು 131 ಗ್ರಾಮಗಳು, 18 ತಾಲ್ಲೂಕುಗಳು ಜಲಾವೃತವಾಗುವ ಸ್ಥಿತಿಯಲ್ಲಿದ್ದು, 16,213 ಜನರು ಪ್ರವಾಹ ಭೀತಿ ಎದುರಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿ ಪ್ರಕಾರ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕಳೆದ 7 ದಿನಗಳಲ್ಲಿ ಕ್ರಮವಾಗಿ 500 ಮಿಲಿ ಮೀಟರ್ ಮತ್ತು 1,238 ಮಿಲಿ ಮೀಟರ್ ಮಳೆಯಾಗಿದೆ.

ಇಂದು ಮುಂಜಾನೆ ಮಲೆನಾಡು ಭಾಗದಲ್ಲಿ ಸೂರ್ಯನ ಕಿರಣಗಳು ಹೊರಗೆ ಹೊರಟಿದ್ದು ಮಳೆಯ ಅಬ್ಬರ ಕೊಂಚ ಇಳಿಮುಖವಾಗಿದೆ. ಆದರೆ, ಮುಂದಿನ ಐದು ದಿನಗಳ ಕಾಲ ರಾಜ್ಯದ ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆ ಇದ್ದು, ಕೃಷಿಕರು ಚಿಂತಾಕ್ರಾಂತರಾಗಿದ್ದಾರೆ.

ಇದನ್ನೂ ಓದಿ: Shivamogga: ಮಳೆಗೆ ನಲುಗಿದ ಶಿವಮೊಗ್ಗ; ಸೋಮಿನಕೊಪ್ಪದಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ಸಾವು 

ಬೆಣ್ಣೆಹಳ್ಳದಲ್ಲಿ ನೋಡ ನೋಡುತ್ತಲೇ ಕೊಚ್ಚಿ ಹೋದ ಸಾಕುನಾಯಿಗಳು; ಹೂಳು ಎತ್ತದ ಕಾರಣ ಹೆಚ್ಚುತ್ತಿದೆ ಅನಾಹುತ

(Karnataka Weather Today Rain likely to be continued for another 5 days)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್