AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

Karnataka Weather:ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಲ್ಲಿ ಮೋಡಕವಿದ ವಾತಾವರಣದ ಸಾಧ್ಯತೆ ಇದ್ದರೆ, ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Karnataka Weather Today: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ಭಾವನಾ ಹೆಗಡೆ
|

Updated on: Nov 04, 2025 | 7:28 AM

Share

ಬೆಂಗಳೂರು, ನವೆಂಬರ್ 4: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Weather Forecast) ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಲಘು ಮಳೆಯ ಸಾಧ್ಯತೆ ಇದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವ ಪ್ರದೇಶಗಳಲ್ಲಿ ಒಣ ಹವೆಯ ಸಾಧ್ಯತೆ?

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳು ಸೇರಿದಂತೆ ಉತ್ತರ ಕನ್ನಡದಲ್ಲಿಯೂ ಒಣ ಹವೆ ಇರಲಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಗಾಳಿಯ ವೇಗ ಗಂಟೆಗೆ 11 ಕಿ.ಮೀ. ಇರಲಿದೆ. ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ