ಕರ್ನಾಟಕದ ಹವಾಮಾನ ಮುನ್ಸೂಚನೆ: ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಅಲರ್ಟ್; ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ನಾಳೆ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಇಂದಿನ ಮತ್ತು ನಾಳೆಯ ಹವಾಮಾನ ಮಾಹಿತಿ ಹಾಗೂ ಮಳೆ ಅಲರ್ಟ್ ವಿವರ ಇಲ್ಲಿದೆ.

ಕರ್ನಾಟಕದ ಹವಾಮಾನ ಮುನ್ಸೂಚನೆ: ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಅಲರ್ಟ್; ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ
ಸಾಂದರ್ಭಿಕ ಚಿತ್ರ
Image Credit source: PTI

Updated on: Oct 04, 2026 | 6:58 AM

ಮುಖ್ಯಾಂಶಗಳು

  • ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.
  • ನಾಳೆ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ.
  • ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಬೆಂಗಳೂರು, ಅಕ್ಟೋಬರ್ 04: ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನ ವೈಪರೀತ್ಯ ಕಂಡುಬರುತ್ತಿದೆ. ಕರಾವಳಿ ಕರ್ನಾಟಕದಲ್ಲಿ ನಿರಂತರ ಮಳೆಯ ವಾತಾವರಣ ಮುಂದುವರಿದಿದ್ದರೆ, ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮತ್ತು ಸಾಧಾರಣ ಮಳೆಯ ಮಿಶ್ರ ವಾತಾವರಣ ಕಂಡುಬರುತ್ತಿದೆ. ಪ್ರಮುಖವಾಗಿ ದಕ್ಷಿಣ ಒಳನಾಡಿನಲ್ಲಿ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಯಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ.

ಕರಾವಳಿಯಲ್ಲಿ ಸಾಧಾರಣ ಮಳೆ

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದ್ದು, ಬಾಗಲಕೋಟೆ, ಬೀದರ್, ಕಲ್ಬುರ್ಗಿ, ಕೊಪ್ಪಳ, ಗದಗ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣಹವೆ ಮುಂದುವರಿಯಲಿದೆ.

ಹಲವು ಜಿಲ್ಲೆಗಳಲ್ಲಿ ಒಣಹವೆ

ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ತುಮಕೂರು, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ದಾವಣಗೆರೆ, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ನಾಳೆ ಭಾರೀ ಮಳೆಯ ಮುನ್ಸೂಚನೆ

ನಾಳೆ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ಕರಾವಳಿಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಹಾವೇರಿ, ಕೊಪ್ಪಳ, ಬೆಳಗಾವಿ ಮತ್ತು ಧಾರವಾಡ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Sun, 4 October 26

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us