AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ನಾಳೆಯ ಹವಾಮಾನ ಮುನ್ಸೂಚನೆ ಸೇರಿದಂತೆ ರಾಜ್ಯದ ಸಂಪೂರ್ಣ ಮಳೆ ವರದಿ ಇಲ್ಲಿದೆ.

ಕರ್ನಾಟಕದ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್​ ಘೋಷಣೆ
ಕರ್ನಾಟಕದ ಹವಾಮಾನ ವರದಿ
ಭಾವನಾ ಹೆಗಡೆ
|

Updated on: Sep 19, 2026 | 7:13 AM

Share

ಮುಖ್ಯಾಂಶಗಳು

  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಏಳು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
  • ರಾಜ್ಯದ ಹಲವೆಡೆ ಗಂಟೆಗೆ 40 ಕಿಮೀ ವೇಗದ ಬಿರುಗಾಳಿ ಸಹಿತ ಮಳೆಯಾಗಲಿದೆ.
  • ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು, ಸೆಪ್ಟೆಂಬರ್ 19: ರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಭಾಗಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಕರಾವಳಿ ಕರ್ನಾಟಕ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.

ದಕ್ಷಿಣ ಒಳನಾಡು

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ನಾಳೆಯೂ ಬೆಂಗಳೂರಿನಲ್ಲಿ ಇದೇ ಹವಾಮಾನ

ನಾಳೆ (ಸೆಪ್ಟೆಂಬರ್ 20) ರಾಜ್ಯದ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಮತ್ತು ಚಾಮರಾಜನಗರಗಳಲ್ಲಿ ಮೇಘಾವೃತ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ತಗ್ಗಲಿದ್ದು, ಕೆಲವು ಸ್ಥಳಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಬಹುದು. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31°C ಮತ್ತು ಕನಿಷ್ಠ ಉಷ್ಣಾಂಶ 21°C ಆಸುಪಾಸಿನಲ್ಲಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ