
ಬೆಂಗಳೂರು, ಜೂನ್ 23: ಕರ್ನಾಟಕದಾದ್ಯಂತ ಮುಂಗಾರು ಬಿರುಸು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರಗಳ ಅವಧಿಗೆ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರವಾಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಲೋ ಮೀಟರ್ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ವರ್ಷಧಾರೆಯ ಎಚ್ಚರಿಕೆ ನೀಡಲಾಗಿದೆ.
#ಮಳೆ #ಮುನ್ನೆಚ್ಚರಿಕೆ : #Heavy #rainfall (64.5mm to 115.4mm) #Warning for #Karnataka.#yellow #alert@KarnatakaVarthe #KSNDMC #KarnatakaRains #Southwestmonsoon #Monsoon2026 pic.twitter.com/Y774URde57
— Karnataka State Natural Disaster Monitoring Centre (@KarnatakaSNDMC) June 23, 2026
ದಾವಣಗೆರೆ ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದ ಹಲವೆಡೆಯೂ ಗುಡುಗು ಸಹಿತ ಸಾಧಾರಣ ಮಳೆಯನ್ನು ಅಂದಾಜಿಸಲಾಗಿದೆ.
ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ; ಮಾಯವಾಯ್ತು ಮುಂಗಾರು, ಹೇಳತೀರದಾಯ್ತು ಅನ್ನದಾತರ ಸ್ಥಿತಿ
ಈ ವಾರ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಕೆಲವು ದಿನಗಳ ಕಾಲ ತೇವಾಂಶಯುಕ್ತ ವಾತಾವರಣ ಕಂಡುಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಐಎಂಡಿ ವರದಿ ಪ್ರಕಾರ, ಜೂನ್ 28ರವರೆಗೆ (ಭಾನುವಾರ) ಬೆಂಗಳೂರಿನಲ್ಲಿ ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ. ಮುಂದಿನ ವಾರದ ಹವಾಮಾನ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ಐಎಂಡಿಯ ವಿಸ್ತೃತ ಮುನ್ಸೂಚನೆ ಪ್ರಕಟವಾದ ಬಳಿಕ ಲಭ್ಯವಾಗಲಿದೆ. ಬುಧವಾರ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ನಗರದ ಕೆಲವೆಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನಗರದ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ನಡುವೆಯೇ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:07 pm, Tue, 23 June 26