AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹವಾಮಾನ ಮುನ್ಸೂಚನೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ! 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿ ಹಾಗೂ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಜಿಟಿಜಿಟಿ ಮಳೆ ಮುಂದುವರಿಯಲಿದೆ. ಸಾರ್ವಜನಿಕರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದ ಹವಾಮಾನ ಮುನ್ಸೂಚನೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ! 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಕರ್ನಾಟಕದ ಹವಾಮಾನ ಮುನ್ಸೂಚನೆ
ಭಾವನಾ ಹೆಗಡೆ
|

Updated on: Sep 20, 2026 | 6:38 AM

Share

ಮುಖ್ಯಾಂಶಗಳು

  • ರಾಜ್ಯಾದ್ಯಂತ ಮುಂದಿನ ಕೆಲವು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
  • ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 50 ಕಿ.ಮೀ ವೇಗದ ಗಾಳಿ ಬೀಸಲಿದೆ.
  • ನಾಳೆಯೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧೋ ಧೋ ಮಳೆ ಮುಂದುವರಿಯಲಿದೆ.

ಬೆಂಗಳೂರು, ಸೆಪ್ಟೆಂಬರ್ 20: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆ ಮತ್ತು ಬಲವಾದ ಬಿರುಗಾಳಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಿಶೇ‍ಷವಾಗಿ ಗಂಟೆಗೆ 30 ರಿಂದ 50 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​?

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ.

ಉತ್ತರ ಒಳನಾಡು

ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿರುಗಾಳಿ (30-40 ಕಿ.ಮೀ) ಸಹಿತ ಭಾರಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡು

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ಚಿತ್ರದುರ್ಗ, ಬಳ್ಳಾರಿ, ಹಾಸನ, ರಾಮನಗರ, ಚಾಮರಾಜನಗರ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ.

ನಾಳೆಯ ಹವಾಮಾನ ಮುನ್ಸೂಚನೆ

ನಾಳೆ ರಾಜ್ಯದಾದ್ಯಂತ ಮಳೆಯ ತೀವ್ರತೆ ಮುಂದುವರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯಿದ್ದು, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ರಾಮನಗರ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ