AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ರಾಜ್ಯದಲ್ಲಿ 2-3 ದಿನ ಮಳೆ ಅಬ್ಬರ; ಎಲ್ಲೆಲ್ಲಿ ವರುಣಾರ್ಭಟ?

Monsoon 2026: ಕರ್ನಾಟಕದಲ್ಲಿ ಮುಂದಿನ 2-3 ದಿನಗಳ ಕಾಲ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಲಿದ್ದು, ಕರಾವಳಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಯಾವ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ? ಎಲ್ಲಿ ಮಳೆ ಕಡಿಮೆ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Karnataka Weather Forecast: ರಾಜ್ಯದಲ್ಲಿ 2-3 ದಿನ ಮಳೆ ಅಬ್ಬರ; ಎಲ್ಲೆಲ್ಲಿ ವರುಣಾರ್ಭಟ?
ಮಳೆImage Credit source: Tv9 Kannada
ಪ್ರಸನ್ನ ಹೆಗಡೆ
|

Updated on: Jun 15, 2026 | 7:25 AM

Share

ಬೆಂಗಳೂರು, ಜೂನ್​​ 15: ಮುಂಗಾರು ಮಳೆ ದೇಶದ ಹಲವು ಭಾಗಗಳಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಿದ್ದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಸೇರಿ ರಾಜ್ಯಾದ್ಯಂತ ಗುಡುಗು ಹಾಗೂ ಮಿಂಚು ಸಹಿತ ಮಳೆಯನ್ನು ಅಂದಾಜಿಸಲಾಗಿದ್ದು, ಬೆಂಗಳೂರಲ್ಲಿಯೂ ವರುಣನ ಅಬ್ಬರವಿರಲಿದೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ಮುಂದಿನ 2-3 ದಿನಗಳು ವರುಣನ ಅಬ್ಬರ
  • ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ
  • ಬೆಂಗಳೂರಲ್ಲಿಯೂ ಭಾರಿ ಮಳೆಯಾಗುವ ಎಚ್ಚರಿಕೆ

ಇಂದು ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಇರಲಿದೆ. ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ವರುಣಾರ್ಭಟ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ

ಹೇಗಿರಲಿದೆ ಬೆಂಗಳೂರಿನ ವಾತಾವರಣ?

ರಾಜಧಾನಿ ಬೆಂಗಳೂರಿನಲ್ಲಿ ಹಲವೆಡೆ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣ ಇದ್ದು ಮಳೆಯನ್ನು ಅಂದಾಜಿಸಲಾಗಿದೆ. ನಗರದ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್​​ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್​​ ತಲುಪಲಿದೆ. ಗಾಳಿಯ ವೇಗ ಗಂಟೆಗೆ ಸುಮಾರು 20 ಕಿಲೋ ಮೀಟರ್​​ನಷ್ಟು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ