
ಬೆಂಗಳೂರು, ಜೂನ್ 15: ಮುಂಗಾರು ಮಳೆ ದೇಶದ ಹಲವು ಭಾಗಗಳಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಿದ್ದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಸೇರಿ ರಾಜ್ಯಾದ್ಯಂತ ಗುಡುಗು ಹಾಗೂ ಮಿಂಚು ಸಹಿತ ಮಳೆಯನ್ನು ಅಂದಾಜಿಸಲಾಗಿದ್ದು, ಬೆಂಗಳೂರಲ್ಲಿಯೂ ವರುಣನ ಅಬ್ಬರವಿರಲಿದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. #KSNDMC #ಎಚ್ಚರಿಕೆವಹಿಸಿ
Next 5 days #SouthwestMonsoon #Rainfall #forecast maps for #Karnataka state with district-wise warnings.
Source: @Indiametdept @KarnatakaVarthe #KarnataKaRains pic.twitter.com/3v7pxAk7uf— Karnataka State Natural Disaster Monitoring Centre (@KarnatakaSNDMC) June 14, 2026
ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಇರಲಿದೆ. ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ವರುಣಾರ್ಭಟ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ
ರಾಜಧಾನಿ ಬೆಂಗಳೂರಿನಲ್ಲಿ ಹಲವೆಡೆ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣ ಇದ್ದು ಮಳೆಯನ್ನು ಅಂದಾಜಿಸಲಾಗಿದೆ. ನಗರದ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ತಲುಪಲಿದೆ. ಗಾಳಿಯ ವೇಗ ಗಂಟೆಗೆ ಸುಮಾರು 20 ಕಿಲೋ ಮೀಟರ್ನಷ್ಟು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.