AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ರಾಜ್ಯಾದ್ಯಂತ ವರುಣನ ಅಬ್ಬರ; ಕರಾವಳಿ, ಮಲೆನಾಡಿಗೆ ಬಿರುಗಾಳಿ ಸಹಿತ ಮಳೆಯ ಅಲರ್ಟ್!

Monsoon 2026: ಇಂದು ಕರ್ನಾಟಕದಾದ್ಯಂತ ಮಾನ್ಸೂನ್ ಮಳೆ ಚುರುಕಾಗಿದ್ದು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ದಕ್ಷಿಣ ಕನ್ನಡ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಇಂದಿನ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ.

Karnataka Weather Forecast: ರಾಜ್ಯಾದ್ಯಂತ ವರುಣನ ಅಬ್ಬರ; ಕರಾವಳಿ, ಮಲೆನಾಡಿಗೆ ಬಿರುಗಾಳಿ ಸಹಿತ ಮಳೆಯ ಅಲರ್ಟ್!
ಕರಾವಳಿ, ಮಲೆನಾಡಿಗೆ ಬಿರುಗಾಳಿ ಸಹಿತ ಮಳೆಯ ಅಲರ್ಟ್!
ಭಾವನಾ ಹೆಗಡೆ
|

Updated on: Jul 26, 2026 | 7:47 AM

Share

ಮುಖ್ಯಾಂಶಗಳು

  • ಕರಾವಳಿಯ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗಲಿದೆ.
  • ಉತ್ತರ ಒಳನಾಡಿನಲ್ಲಿ 40-50 ಕಿ.ಮೀ ವೇಗದ ಬಲವಾದ ಗಾಳಿ ಸಹಿತ ಮಳೆಯಾಗಲಿದೆ.
  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು, ಜುಲೈ 26: ಕಳೆದ ಹಲವು ದಿನಗಳಿಂದ ಮಲೆನಾಡು ಸೇರಿದಂತೆ ಕರಾವಳಿ ಭಾಗಗಳಲ್ಲಿ ಮಳೆಯಾರ್ಭಟ (Monsoon) ಜೋರಾಗಿದೆ. ಇಂದೂ ಸಹ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಆರ್ಭಟ ಹೆಚ್ಚಿರಲಿದ್ದು, ಕರಾವಳಿ ಭಾಗದ ಜನರು ಹಾಗೂ ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಗಾಳಿ ಸಹಿತ ಮಳೆ

ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ್, ರಾಯಚೂರು, ಹಾವೇರಿ, ಯಾದಗಿರಿ, ಕಲ್ಬುರ್ಗಿ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರು ಸೂಕ್ತ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!