AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

Monsoon 2026: ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದಿನ ಕೆಲ ದಿನಗಳವರೆಗೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 11 ಜಿಲ್ಲೆಗಳಲ್ಲಿ ನಾಳೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದ್ದು, ಭಾರಿ ಗಾಳಿ ಇರುವ ಸಾಧ್ಯತೆ ಬಗ್ಗೆಯೂ ಎಚ್ಚರಿಸಲಾಗಿದೆ. ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲ ಪ್ರದೇಶಗಳಲ್ಲಿಯೇ ನಾಳೆ ಹೆಚ್ಚಿನ ವರುಣಾರ್ಭಟ ನಿರೀಕ್ಷಿಸಲಾಗಿದೆ.

Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ
ಮಳೆImage Credit source: deccanherald
ಪ್ರಸನ್ನ ಹೆಗಡೆ
|

Updated on: Jun 03, 2026 | 6:56 PM

Share

ಬೆಂಗಳೂರು, ಜೂನ್​​ 03: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂ.9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನ ಜೊತೆಗೆ ಕೆಲವೆಡೆ ಆಲಿಕಲ್ಲು ಮಳೆ ಅಂದಾಜಿಸಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಳಗಾವಿ, ಮೈಸೂರು, ಮಂಡ್ಯ, ರಾಯಚೂರು ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆಯಿದ್ದು, ಬೆಂಗಳೂರಿನಲ್ಲೂ ಮುಂದಿನ ವಾರದಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ಇದನ್ನೂ ಓದಿ: ಮುಂಗಾರು ಆಗಮನಕ್ಕೆ ದಿನಗಣನೆ; ಜೂನ್ 4 ರಂದು ಕೇರಳ ಪ್ರವೇಶ, ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

11 ಜಿಲ್ಲೆಗಳಲ್ಲಿ ನಾಳೆ ಆರೆಂಜ್​​ ಅಲರ್ಟ್​​

ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವೆಡೆ ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು ಬರೋಬ್ಬರಿ 11 11 ಜಿಲ್ಲೆಗಳಲ್ಲಿ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಬೀದರ್​​, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ