
ಬೆಂಗಳೂರು, ಮೇ 27: ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ (ಮೇ 28) ಗುಡುಗು ಸಹಿತ ಭಾರೀ ಮಳೆಯಾಗಬಹುದೆಂಬ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಕರ್ನಾಟಕ ಭಾಗಗಳಲ್ಲಿ ಮಳೆ ಅಬ್ಬರಿಸಲಿದ್ದು, ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಅರಬ್ಬಿ ಸಮುದ್ರದಿಂದ ತೇವಾಂಶಯುಕ್ತ ಗಾಳಿಯ ಪ್ರವಾಹ ಬಲವಾಗುತ್ತಿರುವುದು ಹಾಗೂ ನೈಋತ್ಯ ಮುಂಗಾರು ಮುನ್ನ ಹವಾಮಾನದಲ್ಲಿ ಉಂಟಾಗುತ್ತಿರುವ ಬದಲಾವಣೆಗಳಿಂದ ರಾಜ್ಯದಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದೆ ಎನ್ನಲಾಗಿದೆ.
40-50 kmph likely to occur at one or two places over SIK from 29th to 31st May 2026 & at one or two places over NIK on 30th & 31st May 2026.
Thunderstorm accompanied with lightning likely to occur at one or two places over Coastal Karnataka from 27th to 31st May 2026.— Karnataka State Natural Disaster Monitoring Centre (@KarnatakaSNDMC) May 27, 2026
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಗುಡು-ಮಿಂಚಿ ಸಹಿತ ಭಾರಿ ಮಳೆಯ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಲಲ್ಲಿ ನಾಳೆ ಸಾಧಾರಣ ಮಳಯಾಗುವ ಬಗ್ಗೆ ಅಂದಾಜಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ
ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಜೊತೆಗೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಮೇ 29ರವರೆಗೆ ಉತ್ತರ ಒಳನಾಡು ಕರ್ನಾಟಕದ ಕೆಲವೆಡೆ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಇದೇ ರೀತಿಯ ಹವಾಮಾನ ಪರಿಸ್ಥಿತಿ ನಾಳೆಯವರೆಗೂ ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಮುಂದುವರಿಯಲಿದೆ. ಮೇ 29ರಿಂದ ಮೇ 31ರವರೆಗೆ ಗಾಳಿಯ ವೇಗ ಸ್ವಲ್ಪ ಕಡಿಮೆಯಾಗಬಹುದಾದರೂ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಉತ್ತರ ಒಳನಾಡು ಕರ್ನಾಟಕದ ಕೆಲವು ಭಾಗಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.