AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ರಾಜ್ಯದಾದ್ಯಂತ ವರುಣನ ಆರ್ಭಟ; ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ ಎಚ್ಚರಿಕೆ!

Monsoon 2026: ರಾಜ್ಯದಾದ್ಯಂತ ಮುಂಗಾರು ಮಳೆ ಚಟುವಟಿಕೆಗಳು ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳ ಇಂದಿನ ಮತ್ತು ನಾಳೆಯ ಹವಾಮಾನ ಸ್ಥಿತಿಗತಿ ಹಾಗೂ ಮಳೆಯ ಸಂಪೂರ್ಣ ವಿವರವಾದ ಮಾಹಿತಿ ಇಲ್ಲಿದೆ.

Karnataka Weather Forecast: ರಾಜ್ಯದಾದ್ಯಂತ ವರುಣನ ಆರ್ಭಟ; ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ ಎಚ್ಚರಿಕೆ!
ಸಾಂದರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on: Aug 29, 2026 | 7:33 AM

Share

ಮುಖ್ಯಾಂಶಗಳು

  • ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.
  • ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಗಂಟೆಗೆ ಐವತ್ತು ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.
  • ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಬೆಂಗಳೂರು, ಆಗಸ್ಟ್ 29: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು (Monsoon) ಮಳೆಯ ಚಟುವಟಿಕೆಗಳು ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯಂತೆ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಮಳೆರಾಯನ ಅಬ್ಬರವಿದ್ದು, ನಾಳೆಯೂ ಇದೇ ವಾತಾವರಣ ಮುಂದುವರೆಯಲಿದೆ.

ಕರಾವಳಿ ಮತ್ತು ಉತ್ತರ ಒಳನಾಡು

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇದರೊಂದಿಗೆ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ನಿವಾಸಿಗಳು ಎಚ್ಚರವಹಿಸಬೇಕಿದೆ.

ದಕ್ಷಿಣ ಒಳನಾಡು ಮತ್ತು ಬೆಂಗಳೂರು

ದಕ್ಷಿಣ ಒಳನಾಡಿನ ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಮೇಘಾವೃತ ವಾತಾವರಣವಿರಲಿದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ನಾಳೆಯೂ ಮಳೆಯ ಅಬ್ಬರ

ನಾಳೆ (ಆ. 30) ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಭಾಗಗಳಲ್ಲಿ ಗಾಳಿಯ ವೇಗ ತಗ್ಗಲಿದ್ದು, ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನದಲ್ಲಿ ಸಾಧಾರಣ ಮಳೆ ಸುರಿಯಲಿದ್ದರೆ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ