
ಬೆಂಗಳೂರು, ಸೆಪ್ಟೆಂಬರ್ 06: ಕರ್ನಾಟಕದಾದ್ಯಂತ ಇಂದು ಮತ್ತು ನಾಳೆ ಸಾಧಾರಣದಿಂದ ಬಲವಾದ ಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ತಗ್ಗು ಪ್ರದೇಶಗಳ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇದರೊಂದಿಗೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿಯೂ ಸಹ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರ ಮಳೆಯಾಗಬಹುದು.
ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಿಂಚು, ಗುಡುಗು ಹಾಗೂ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ వేಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ನಾಳೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ