ನಾಳೆಯ ಹವಾಮಾನ: ಮೈಸೂರು ಸೇರಿ 9 ಜಿಲ್ಲೆಗಳಲ್ಲಿ ಮಳೆ, ಉತ್ತರದಲ್ಲಿ ಬಿಸಿಲಿಗೆ ಸುಡಲಿದೆ ಇಳೆ

Karnataka Weather Update: ಕರ್ನಾಟಕದಲ್ಲಿ ನಾಳೆ (ಮೇ 10) ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಒಟ್ಟು 9 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಮೋಡ ಕವಿದ ವಾತಾವರಣದೊಂದಿಗೆ ವರುಣನ ಆಗಮನದ ನಿರೀಕ್ಷೆ ಇದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಉತ್ತರ ಕರ್ನಾಟಕದ ಹಲವೆಡೆ ತೀವ್ರ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: ಮೈಸೂರು ಸೇರಿ 9 ಜಿಲ್ಲೆಗಳಲ್ಲಿ ಮಳೆ, ಉತ್ತರದಲ್ಲಿ ಬಿಸಿಲಿಗೆ ಸುಡಲಿದೆ ಇಳೆ
ಮಳೆ
Image Credit source: 4pmnewsonline.com

Updated on: May 09, 2026 | 7:01 PM

ಬೆಂಗಳೂರು, ಮೇ 09: ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಾಳೆಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗದ ತಲಾ 2 ಜಿಲ್ಲೆಗಳು ಸೇರಿದಂತೆ, ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಅದನ್ನು ಹೊರತುಪಡಿಸಿ ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಒಳಹವೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಹಲವೆಡೆ ತೀವ್ರ ಬಿಸಿಲಿನ ವಾತಾವರಣ ಇರಲಿದ್ದರೆ, ಬೆಂಗಳೂರು ನಗರದಲ್ಲಿ ಮಳೆಯ ಸಿಂಚನದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮತ್ತು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಗದಗ ಮತ್ತು ಹಾವೇರಿಯಲ್ಲಿ ಸಣ್ಣ ಪ್ರಮಾಣದಲ್ಲಿ ವರುಣನ ಆಗಮನವನ್ನು ನಿರೀಕ್ಷಿಸಲಾಗಿದೆ. ಹಾಗೆಯೇ ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ರಾಮನಗರದಲ್ಲಿಯೂ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ! ಯೆಲ್ಲೋ ಅಲರ್ಟ್​ ಘೋಷಣೆ

ಹಲವು ಜಿಲ್ಲೆಗಳಲ್ಲಿ ಒಣ ಹವೆ

ಕರಾವಳಿ ಜಿಲ್ಲೆಗಳ ಪೈಕಿ ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್​​, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಒಣ ಹವೆ ಕಂಡಬರಲಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿಯೂ ಇದೇ ಮಾದರಿಯ ವಾತಾವರಣ ಇರಲಿದೆ.

ಬೆಂಗಳೂರಲ್ಲಿಯೂ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿಯೂ ನಾಳೆ ಮಳೆಯ ಸಾಧ್ಯತೆ ಇದೆ. ಬೆಳಿಗ್ಗಿನಿಂದಲೇ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಸಾಧಾರಣ ಮಳೆಯಾಗಬಹುದು ಎನ್ನಲಾಗಿದೆ. ನಗರದ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್​​ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್​​ ಇರಲಿದೆ. ಗಾಳಿಯ ವೇಗ ಗಂಟೆಗೆ 16-18 ಕಿಲೋ ಮೀಟರ್​​ ಇರಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us