Rain In Bengaluru
ಮುಖ್ಯಾಂಶಗಳು
- ಕರಾವಳಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಅಧಿಕವಾಗಿದೆ.
- ಉತ್ತರ ಒಳನಾಡಿನಲ್ಲಿ 50 ಕಿ.ಮೀ ವೇಗದ ಬಿರುಗಾಳಿ ಬೀಸಲಿದೆ.
- ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಗಾಳಿ ಸಹಿತ ಮನ್ಸೂಚನೆ.
ಬೆಂಗಳೂರು, ಆಗಸ್ಟ್ 15: ಭಾರತೀಯ ಹವಾಮಾನ ಇಲಾಖೆಯ (IMD) ಮುನ್ಸೂಚನೆಯಂತೆ, ಇಂದು (ಆಗಸ್ಟ್ 15) ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಬಿರುಗಾಳಿ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲಾವಾರು ವಿವರ ಇಲ್ಲಿದೆ.
ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡು
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
- ಧಾರವಾಡ ಮತ್ತು ಗದಗ: ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.
- ಬೀದರ್ ಮತ್ತು ವಿಜಯಪುರ: ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
- ಬಾಗಲಕೋಟೆ, ಬೆಳಗಾವಿ, ಹಾವೇರಿ ಮತ್ತು ಕೊಪ್ಪಳ: ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸಬಹುದು.
- ಕಲಬುರಗಿ, ರಾಯಚೂರು ಮತ್ತು ಯಾದಗಿರಿ: ಈ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ದಕ್ಷಿಣ ಒಳನಾಡು
- ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ: ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಜೊತೆಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ.
- ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಲವಾದ ಗಾಳಿ ಇರಲಿದೆ.
- ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ: ಒಂದೆರಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
- ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಮತ್ತು ವಿಜಯನಗರ: ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಬಹುದು. ವೇಗವಾಗಿ ಗಾಳಿ ಬೀಸುವ ಸಮಯದಲ್ಲಿ ಸಾರ್ವಜನಿಕರು ಹಾಗೂ ರೈತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ