AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ರಾಜ್ಯದಲ್ಲಿ ಮಾನ್ಸೂನ್ ಅಬ್ಬರ; ಚಿಕ್ಕಮಗಳೂರು, ಹಾಸನ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಮಳೆ ಚುರುಕಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಹಾಗೂ ಮೀನುಗಾರರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Karnataka Weather Forecast: ರಾಜ್ಯದಲ್ಲಿ ಮಾನ್ಸೂನ್ ಅಬ್ಬರ; ಚಿಕ್ಕಮಗಳೂರು, ಹಾಸನ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ರಾಜ್ಯದಲ್ಲಿ ಮಾನ್ಸೂನ್ ಅಬ್ಬರ
ಭಾವನಾ ಹೆಗಡೆ
|

Updated on: Aug 23, 2026 | 7:03 AM

Share

ಮುಖ್ಯಾಂಶಗಳು

  • ಕರಾವಳಿ ಮತ್ತು ಮಲೆನಾಡಿನ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್.
  • ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ.
  • ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ.

ಬೆಂಗಳೂರು, ಆಗಸ್ಟ್ 23: ರಾಜ್ಯದಲ್ಲಿ ಮಾನ್ಸೂನ್ ಮಳೆ ಚುರುಕಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡು

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಈ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡು

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು

ಬೆಂಗ‌ಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಸತತ ಗಾಳಿ ಬೀಸಲಿದ್ದು, ಹಲವೆಡೆ ಸಾಧಾರಣ ಮಳೆಯಾಗಲಿದೆ. ಕರಾವಳಿ ತೀರದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!