AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Updates: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಾರ್ಚ್​ 17 ರಿಂದ 2 ದಿನ ಮಳೆ

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಾರ್ಚ್​ 17 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Updates: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಾರ್ಚ್​ 17 ರಿಂದ 2 ದಿನ ಮಳೆ
ಮಳೆImage Credit source: Northeast Now
ನಯನಾ ರಾಜೀವ್
|

Updated on: Mar 16, 2023 | 7:42 AM

Share

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಾರ್ಚ್​ 17 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ. ಜಯಪುರ, ಬಾಳೆಹೊನ್ನೂರು, ಜಾನ್ಮನೆ, ಸುಂಟಿಕೊಪ್ಪ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಕಲಬುರಗಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 49 ಗಂಟೆಗಳಲ್ಲಿ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು,ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮತ್ತಷ್ಟು ಓದಿ: Karnataka Weather Updates: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಬೀಸಲಿದೆ ಉಷ್ಣಗಾಳಿ

ಮಾರ್ಚ್‌ 19ರವರೆಗೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕಲುಬುರಗಿಯಲ್ಲಿ ಅತ್ಯಧಿಕ ತಾಪಮಾನ ಕಂಡು ಬಂದಿದೆ. ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರಲ್ಲಿ ಗರಿಷ್ಠ 36.4 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ 36 ಡಿಗ್ರಿ ಸೆಲ್ಸಿಯಸ್, ಶಿರಾಲಿಯಲ್ಲಿ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​