Karnataka Weather Updates: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಾರ್ಚ್​ 17 ರಿಂದ 2 ದಿನ ಮಳೆ

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಾರ್ಚ್​ 17 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Updates: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಾರ್ಚ್​ 17 ರಿಂದ 2 ದಿನ ಮಳೆ
ಮಳೆ
Image Credit source: Northeast Now

Updated on: Mar 16, 2023 | 7:42 AM

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಾರ್ಚ್​ 17 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ. ಜಯಪುರ, ಬಾಳೆಹೊನ್ನೂರು, ಜಾನ್ಮನೆ, ಸುಂಟಿಕೊಪ್ಪ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಕಲಬುರಗಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂದಿನ 49 ಗಂಟೆಗಳಲ್ಲಿ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು,ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮತ್ತಷ್ಟು ಓದಿ: Karnataka Weather Updates: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಬೀಸಲಿದೆ ಉಷ್ಣಗಾಳಿ

ಮಾರ್ಚ್‌ 19ರವರೆಗೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕಲುಬುರಗಿಯಲ್ಲಿ ಅತ್ಯಧಿಕ ತಾಪಮಾನ ಕಂಡು ಬಂದಿದೆ. ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರಲ್ಲಿ ಗರಿಷ್ಠ 36.4 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ 36 ಡಿಗ್ರಿ ಸೆಲ್ಸಿಯಸ್, ಶಿರಾಲಿಯಲ್ಲಿ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us