AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಶುಷ್ಕ ಹವಾಮಾನ ಮುಂದುವರಿಕೆ

Karnataka Weather: ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ನಿನ್ನೆಯಂತೆ ಇಂದೂ ಒಣ ಹವೆ ವಾತಾವರಣವಿರಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಶುಷ್ಕ ಹವಾಮಾನ ಮುಂದುವರಿಕೆ
ರಾಜ್ಯದಲ್ಲಿ ಶುಷ್ಕ ಹವಾಮಾನ ಮುಂದುವರಿಕೆ
ಭಾವನಾ ಹೆಗಡೆ
|

Updated on:Dec 10, 2025 | 7:46 AM

Share

ಬೆಂಗಳೂರು, ಡಿಸೆಂಬರ್ 10: ಬೆಂಗಳೂರು, ಚಿಕ್ಕಬಳ್ಳಾಪುರ, ಸೇರಿದಂತೆ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣ (Weather Forecast) ಇದ್ದು, ಇಂದೂ ಅದೇ ಹವಾಮಾನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದೂ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಒಣ ಹವೆ

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಬೆಂಗಳೂರಲ್ಲಿ ಹಲವು ದಿನಗಳಿಂದ ಮಂಜು ಕವಿದ ವಾತಾವರಣವಿದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 11 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 16.°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:32 am, Wed, 10 December 25

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್