AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4ನೇ ಅಲೆ ಬಂದರೂ ಸಮರ್ಪಕವಾಗಿ ಎದುರಿಸುತ್ತೇವೆ: ಆರೋಗ್ಯ ಸಚಿವ ಸುಧಾಕರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೊವಿಡ್ ನಿಯಂತ್ರಣಕ್ಕಾಗಿ ರಚಿಸಿರುವ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಕೊರೊನಾ ಸ್ಥಿತಿಗತಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಸುಧಾಕರ ತಿಳಿಸಿದರು.

4ನೇ ಅಲೆ ಬಂದರೂ ಸಮರ್ಪಕವಾಗಿ ಎದುರಿಸುತ್ತೇವೆ: ಆರೋಗ್ಯ ಸಚಿವ ಸುಧಾಕರ
ಡಾ.ಕೆ. ಸುಧಾಕರ್
TV9 Web
| Edited By: |

Updated on: Apr 25, 2022 | 10:55 AM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೊವಿಡ್ ನಿಯಂತ್ರಣಕ್ಕಾಗಿ ರಚಿಸಿರುವ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಕೊರೊನಾ ಸ್ಥಿತಿಗತಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ನಮ್ಮ ನೆರೆಯ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕರ್ನಾಟಕದಲ್ಲಿ 4ನೇ ಅಲೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಯಾವುದೇ ನಿರ್ಧಾರದ ಸಾಧಕ-ಬಾಧಕಗಳ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಗುವುದು. ದೆಹಲಿ, ಕೇರಳ, ಮಹಾರಾಷ್ಟ್ರ ರಾಜ್ಯಗಳ ಬೆಳವಣಿಗೆಗಳ ಕುರಿತ ದತ್ತಾಂಶವನ್ನೂ ತರಿಸಿ, ಪರಿಶೀಲಿಸುತ್ತೇವೆ. ಅನಗತ್ಯವಾಗಿ ಟೆಸ್ಟಿಂಗ್ ಪ್ರಮಾಣ ಹೆಚ್ಚಳ ಮಾಡುವುದಿಲ್ಲ. ಏರ್​ಪೋರ್ಟ್​ಗಳಲ್ಲಿ ಹಿಂದೆ ಹೊರಡಿಸಿದ ಮಾರ್ಗಸೂಚಿ ಅನ್ವಯ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ವಿವರಿಸಿದರು.

ಕೊರೊನಾ ಪರಿಶೀಲನಾ ಸಭೆಗೆ ಸಚಿವರು, ಅಧಿಕಾರಿಗಳಿಗೆ ಆಹ್ವಾನ

ರಾಜ್ಯದಲ್ಲಿ ಇತ್ತೀಚೆಗೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಕೊವಿಡ್ ಪರಿಸ್ಥಿತಿ ಪರಿಶೀಲನೆ ಬಗ್ಗೆ ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕಂದಾಯ ಸಚಿವ, ಆರೋಗ್ಯ ಸಚಿವ, ಐಟಿ-ಬಿಟಿ ಸಚಿವರು, ಸಿಎಸ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರು, ಆರೋಗ್ಯ ಇಲಾಖೆ ಆಯುಕ್ತರು, ಆರ್ಥಿಕ ಇಲಾಖೆ ACS, ತಾಂತ್ರಿಕ ಸಲಹಾ ಸಮಿತಿಗೆ ಸಭೆಗೆ ಆಹ್ವಾನಿಸಲಾಗಿದೆ.

ಕರ್ನಾಟಕದಲ್ಲಿ ಭಾನುವಾರ (ಏಪ್ರಿಲ್ 24) ಒಟ್ಟು 8263 ಜನರ ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು. 60 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಪ್ರಸ್ತುತ 1676 ಸಕ್ರಿಯ ಪ್ರಕರಣಗಳಿವೆ. ನಿನ್ನೆ 63 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.

ಬೆಂಗಳೂರಿನಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಸರ್ಕಾರ ಸಹ ಈ ವಿದ್ಯಮಾನ ಗಮನಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಏಪ್ರಿಲ್ 27ರಂದು ಪ್ರಧಾನಿ ಮೋದಿ ವಿಡಿಯೊ ಕಾನ್ಫರೆನ್ಸ್ ಇದೆ. ಅವರು ನೀಡುವ ಸಲಹೆ, ಸೂಚನೆ ಮೇರೆಗೆ ಕೊರೊನಾ ನಿಯಂತ್ರಣದ ಬಗ್ಗೆ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Health Tips: ಕೊರೊನಾ ವೈರಸ್ Vs ಅಲರ್ಜಿ; ಎರಡನ್ನೂ ಗುರುತಿಸುವುದು ಹೇಗೆ? ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

ಇದನ್ನೂ ಓದಿ: ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ ಕುರಿತು ಏಪ್ರಿಲ್27ರಂದು ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ