AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿಗೆ ಹಾಲುಣಿಸಲು ಪರದಾಡಿದ ತಾಯಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಪತ್ರ

ವೇಗದ ಮತ್ತು ಸುಗಮ ಸಮಚಾರಕ್ಕೆ ಜನರಿಗೆ ನಮ್ಮ ಮೆಟ್ರೋ ಬಹಳ ಅನುಕೂಲಕಾರಿಯಾಗಿದೆ. ಇದೀಗ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ತಾಯಿ ಮಗುವಿಗೆ ಹಾಲುಣಿಸಲು ಪರದಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಆಯೋಗ ಆರೈಕೆ ಕೇಂದ್ರ ಸ್ಥಾಪಿಸುವಂತೆ ಬಿಎಂಆರ್​ಸಿಎಲ್​ಗೆ ಪತ್ರ ಬರೆದಿದೆ.

ಮಗುವಿಗೆ ಹಾಲುಣಿಸಲು ಪರದಾಡಿದ ತಾಯಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಪತ್ರ
ಹಾಲುಣಿಸಲು ತಾಯಿಯ ಪರದಾಟ
Kiran Surya
| Edited By: |

Updated on: Sep 18, 2024 | 9:17 AM

Share

ಬೆಂಗಳೂರು, ಸೆಪ್ಟೆಂಬರ್​​ 18: ನಮ್ಮ ಮೆಟ್ರೋ (Namma Metro) ನಿಲ್ದಾಣಗಳಲ್ಲಿ ಆರೈಕೆ ಕೇಂದ್ರ (Care Center) ಸ್ಥಾಪಿಸುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)​​ಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ. ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಗಳಲ್ಲಿ ಆರೈಕೆ ಕೇಂದ್ರಗಳು ಇವೆ. ಇದೇರೀತಿ ನಮ್ಮ ಮೆಟ್ರೋ ನಿಲ್ದಾಣಗಳಲ್ಲೂ ಆರೈಕೆ ಕೇಂದ್ರ ಸ್ಥಾಪಿಸುವಂತೆ ಸೂಚಿಸಿದ್ದಾರೆ.

ಸೆಪ್ಟೆಂಬರ್​ 16 ರಂದು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲು ಬಂದ ತಾಯಿಯೊಬ್ಬರು ಮಗುವಿಗೆ ಹಾಲುಣಿಸಲು ಪರದಾಡಿದರು. ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ಮಗುವಿಗೆ ಹಾಲುಣಿಸಲು ಜಾಗ ಸಿಗದೆ, ಕೊನೆಗೆ ತಾಯಿ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ಮರೆಯಲ್ಲಿ ಹಾಲುಣಿಸಿದರು. ಮಗುವಿಗೆ ಹಾಲುಣಿಸುತ್ತಿರುವ ವೇಳೆ ಪತಿ ಮತ್ತು ಮಾವ ಕಾವಲಿಗೆ ನಿಂತಿದ್ದರು. ತಾಯಿ ಮಗುವಿಗೆ ಹಾಲುಣಿಸಲು ಪರದಾಡಿದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ಕ್ಯಾನ್ಸರ್​ನಿಂದ ಬಳಲುತ್ತಿದ್ದರೂ ನಮ್ಮ ಮೆಟ್ರೋಗೆ ಧ್ವನಿ ನೀಡಿದ್ದ ನಮ್ಮ ಅಪರ್ಣಾ; ಹೊಸ ಮಾರ್ಗಗಳಲ್ಲೂ ತೇಲಿಬರಲಿದೆ ಅವರ ಸಿರಿ ಕಂಠ!

ಈ ವಿಚಾರ ತಿಳಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಬಿಎಂಆರ್​ಸಿಎಲ್​ಗೆ ಪತ್ರ ಬರೆದು ನಿಲ್ದಾಣಗಳಲ್ಲಿ ಆರೈಕೆ ಕೇಂದ್ರ ಸ್ಥಾಪನೆ ಮಾಡುವಂತೆ ಸೂಚಿಸಿದ್ದಾರೆ.

ನಿರ್ಭಯಾ ಯೋಜನೆಯಡಿ ಕೇಂದ್ರ ಸರ್ಕಾರ ದೇವಸ್ಥಾನ, ಬಿಎಂಟಿಸಿ ಮತ್ತು ಕೆಎಸ್ಆರ್​ಟಿಸಿ ಬಸ್ ನಿಲ್ದಾಣಗಳಲ್ಲಿ ಆರೈಕೆ ಕೇಂದ್ರ ಸ್ಥಾಪನೆ ಮಾಡಿದೆ. ಇದೀಗ ನಮ್ಮ ಮೆಟ್ರೋ ನಿಲ್ದಾಣದಲ್ಲೂ ಆರೈಕೆ ಕೇಂದ್ರ ಸ್ಥಾಪಿಸುವಂತೆ ಆಗ್ರಹ ಕೇಳಿ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್