ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಸೇವೆ ನೆನೆದು ಶ್ರದ್ಧಾಂಜಲಿ ಸಲ್ಲಿಸಿದ ಕೆಯೂಡಬ್ಲ್ಯೂಜೆ

ಕರ್ನಾಟಕ ಕಾರ್ಯದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಜನಪ್ರಿಯರಾಗಿದ್ದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ (ಕೆಯೂಡಬ್ಲ್ಯೂಜೆ) ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯ್ತು. ಇಂದು ಹಮ್ಮಿಕೊಂಡಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಸೇವೆ ನೆನೆದರು.

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಸೇವೆ ನೆನೆದು ಶ್ರದ್ಧಾಂಜಲಿ ಸಲ್ಲಿಸಿದ ಕೆಯೂಡಬ್ಲ್ಯೂಜೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 05, 2024 | 10:39 PM

ಬೆಂಗಳೂರು, (ಮಾರ್ಚ್ 05): ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯೂಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಅಗಲಿದ ದಕ್ಷಿಣ ಕನ್ನಡ, ಉಡುಪಿ ಭಾಗದ ಜನಪ್ರಿಯರಾಗಿದ್ದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯ್ತು.

ಇಂದು (ಮಾರ್ಚ್ 05) ಬೆಂಗಳೂರಿನ ಕೆಯೂಡಬ್ಲ್ಯೂಜೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಬಾಗಲಕೋಟೆಯ ರಾಮ ಮನಗೂಳಿ ಅವರು ರಾಜ್ಯ ಸಂಘದ ಉಪಾಧ್ಯಕ್ಷರಾಗಿ, ಜಿಲ್ಲಾ ಸಂಘದ ಅಧ್ಯಕ್ಷರಾಗಿ ಸಲ್ಲಿಸಿದ್ದ ಸೇವೆ ಅನನ್ಯ. ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಸಂಘಟನೆ ಮಾಡಿ ಸೈ ಎನ್ನಿಸಿಕೊಂಡಿದ್ದ ಹೆಗ್ಗಳಿಕೆ ಅವರದು ಎಂದರು. ಸಂಯುಕ್ತ ಕರ್ನಾಟಕ ಬ್ಯೂರೊ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ ಅವರ ಗರಡಿಯಲ್ಲಿ ಹಲವು ಪತ್ರಕರ್ತರು ಬೆಳೆದಿರುವುದನ್ನು ಶ್ಲಾಸಿದರು.

ಇದನ್ನೂ ಓದಿ: ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ ನಿಧನ

ಮಂಗಳೂರಿನ ವಿ.ಮನೋಹರ ಪ್ರಸಾದ್ ಅವರು ಸಂಘದ ಪ್ರತಿಯೊಂದು ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಿದವರು. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ, ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿಯೂ ಭಾಗವಹಿಸಿದ್ದು ಅವರ ಕ್ರೀಯಾಶೀಲತೆಗೆ ಸಾಕ್ಷಿ. ಸುದ್ದಿಮನೆಯಲ್ಲಿ ಹಿರಿಯಣ್ಣನಾಗಿದ್ದ ಅವರ ವೃತ್ತಿ ಬದ್ಧತೆಯನ್ನು ನೆನೆದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಸಿ. ಲೋಕೇಶ್ ಮಾತನಾಡಿ, ರಾಮ ಮನಗೂಳಿ, ಮನೋಹರ್ ಪ್ರಸಾದ್ ಮತ್ತು ದಿಲೀಪ್ ಜೋಷಿಯವರು ನಮ್ಮನ್ನು ಬಿಟ್ಟು ಅಗಲಿರುವುದು ನಿಜಕ್ಕೂ ನೋವಿನ ಸಂಗತಿ. ಮೂವರು ಕನ್ನಡ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆ ಅಪಾರ. ಮೂವರ ಆತ್ಮಕ್ಕೂ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸಿದರು.

ಸಂಯುಕ್ತ ಕರ್ನಾಟಕ ಪತ್ರಿಕೆಯ ಸಹಾಯಕ ಸಂಪಾದಕ ಕೆ.ವಿ. ಪರಮೇಶ್ ಮಾತನಾಡಿ, ರಾಮ ಮನಗೂಳಿಯವರು ತಮ್ಮ ವೃತ್ತಿ ಜೀವನದಲ್ಲಿ ’ಸಂಯುಕ್ತ ಕರ್ನಾಟಕ’ ಪತ್ರಿಕೆಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ನಿಜಕ್ಕೂ ನೋವಿನ ಸಂಗತಿ ಎಂದರು.

ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್ ಮಾತನಾಡಿ, ಮಂಗಳೂರಿನ ಮನೋಹರ್ ಪ್ರಸಾದ್ ಪತ್ರಿಕೋದ್ಯಮದಲ್ಲಿ ತನ್ನದೇ ಆದ ಛಾಪು ಮೂಡಿಸಿದವರು. ಹಲವಾರು ವಿಶೇಷ ವರದಿಗಳ ಮೂಲಕ ’ಉದಯವಾಣಿ’ ಪತ್ರಿಕೆಗೆ ಭದ್ರ ನೆಲೆ ಒದಗಿಸಿದವರು. ಅವರ ಮಾರ್ಗದರ್ಶನವು ಕರಾವಳಿಯ ಹೆಚ್ಚಿನ ಪತ್ರಕರ್ತರಿಗೆ ಸಿಕ್ಕಿರುವುದು ನಿಜಕ್ಕೂ ಮರೆಯಲಾರದ ವಿಷಯ ಎಂದರು.

ಬೀದರ್ ಘಟಕದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಹಿರಿಯ ಪತ್ರಕರ್ತೆ ಶಶಿಕಲಾ ಮಾತನಾಡಿ, ಹಿರಿಯ ಪತ್ರಕರ್ತರ ಅಗಲಿಕೆ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟ ಎಂದರು. ಕಾಸರಗೋಡು ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ರೋಶನಿ ಗೌಡ ಸೇರಿದಂತೆ ಹಲವರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಗದಗದ ದಿಲೀಪ್ ಕುಮಾರ್ ಜೋಷಿ ಮತ್ತು ಪತ್ರಿಕಾ ಪ್ರಸರಣಾಧಿಕಾರಿ ಕೊಪ್ಪಳದ ಮಂಜುನಾಥ ದಂಡಿನ ಅವರ ನಿಧನಕ್ಕೂ ಸಂತಾಪ ವ್ಯಕ್ತಪಡಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಪತ್ರಿಕಾ ವಿತರಕರ ಸಂಘದ ಕೆ.ಶಂಭುಲಿಂಗ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ ಗಾಂಧಿ, ದೇವರಾಜು, ಬೆಂಗಳೂರು ನಗರ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಎಂ ಜಿಕ್ರಿಯಾ, ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ್, ಕೆ.ಎಸ್. ಸ್ವಾಮಿ ಸೇರಿದಂತೆ ಸಂಘದ ಹಲವಾರು ಹಿರಿಯ-ಕಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ