
ಬೆಂಗಳೂರು, ಜೂನ್ 29: ನಗರದ ಬಿಎಂಟಿಸಿ ಬಸ್ (BMTC Bus) ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ‘ಪಿಎಂ ಇ-ಡ್ರೈವ್’ ಯೋಜನೆಯಡಿ ಬರೋಬ್ಬರಿ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಇದಕ್ಕೆ ಕ್ಯಾಬಿನೆಟ್ನಲ್ಲಿ ಇನ್ನೂ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ. ಸರ್ಕಾರದ ಈ ನಿಲುವು ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಖುದ್ದು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕತ್ರಿಗುಪ್ಪೆಯಿಂದ ಬನಶಂಕರಿವರೆಗೆ ಬಸ್‌ನಲ್ಲಿ ಸಾಗಿದ ಸಂಸದ, ಈ ವೇಳೆ ಪ್ರಯಾಣಿಕರ ಅಳಲು ಆಲಿಸಿದರು.
ಕೇಂದ್ರ ಸರ್ಕಾರದಿಂದ ಪಿಎಂ ಇ-ಡ್ರೈವ್ ಯೋಜನೆಯಡಿ ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್‌ಗಳ
ಮಂಜೂರಾಗಿದೆ. ಆದರೆ ರಾಜ್ಯ ಸರ್ಕಾರ ಕ್ಯಾಬಿನೆಟ್ನಲ್ಲಿ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿಲ್ಲ ಎನ್ನಲಾಗುತ್ತಿದೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆ ಎದುರಾಗುತ್ತಿದೆ. ಬಸ್ಗಳು ಸಾಲುತ್ತಿಲ್ಲ ಎಂದು ಈ ಬಗ್ಗೆ ಖುದ್ದಾಗಿ ಪ್ರಯಾಣಿಕರ ಸಮಸ್ಯೆಯನ್ನು ಕೇಳಲು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕತ್ರಿಗುಪ್ಪೆಯಿಂದ ಬನಶಂಕರಿ ವರೆಗೆ ಪ್ರಯಾಣ ಮಾಡಿದರು. ಈ ವೇಳೆ ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ಮಾತನಾಡಿದ ಮಹಿಳಾ ಪ್ರಯಾಣಿಕರಾದ ಚೈತ್ರಾ, ಸರಿಯಾದ ಸಮಯಕ್ಕೆ ಬಿಎಂಟಿಸಿ ಬಸ್ಗಳು ಬರುತ್ತಿಲ್ಲ. ಇದರಿಂದ ಸರಿಯಾದ ಸಮಯಕ್ಕೆ ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಬಂದರೆ ಒಮ್ಮೆಲೆ ನಾಲ್ಕೈದು ಬಸ್ಗಳು ಒಟ್ಟಿಗೆ ಬರುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬೆಂಗಳೂರಿಗೆ ಕೇಂದ್ರ ನೀಡುವ 4,500 ಎಲೆಕ್ಟ್ರಿಕ್ ಬಸ್‌ಗಳಿಗೆ ರಾಜ್ಯದಿಂದ ಸಿಗ್ತಿಲ್ಲ ಅನುಮೋದನೆ: ತೇಜಸ್ವಿ ಸೂರ್ಯ ಗಂಭೀರ ಆರೋಪ
ಶಕ್ತಿ ಯೋಜನೆ ಆರಂಭವಾದ ಮೇಲೆ ಬಿಎಂಟಿಸಿಯಲ್ಲಿ ಪ್ರತಿದಿನ 45 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ. ಆದರೆ ಸದ್ಯ ಬಿಎಂಟಿಸಿಯಲ್ಲಿ 6800 ಸಾವಿರ ಬಸ್ಗಳು ಮಾತ್ರ ಇದ್ದು, ಅವು ಸಾಲುತ್ತಿಲ್ಲ. ಕೇಂದ್ರ ಸರ್ಕಾರದ 4500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ 4100 ನಾರ್ಮಲ್ ಎಲೆಕ್ಟ್ರಿಕ್ ಬಸ್ಗಳು, 400 ಎಸಿ ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಲು ತೀರ್ಮಾನಿಸಿದೆ ಅಂತೆ.
ಇನ್ನು ಈ ಕುರಿತಾಗಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಈಗಾಗಲೇ ಕೇಂದ್ರ ಸರ್ಕಾರ ಬಿಎಂಟಿಸಿಗೆ 4500 ಬಸ್‌ಗಳನ್ನು ನೀಡಿದೆ. ಆದರೆ ರಾಜ್ಯ ಸರ್ಕಾರ ಕ್ಯಾಬಿನೆಟ್ನಲ್ಲಿ ಇದಕ್ಕೆ ಇನ್ನು ಅನುಮತಿ ನೀಡಿಲ್ಲ. ಈ ಬಸ್‌ಗಳನ್ನು ತೆಗೆದುಕೊಳ್ಳಲು ರಾಜ್ಯ ಸರ್ಕಾರವು ಒಂದಷ್ಟು ಹಣ ಹಾಕಬೇಕಿದೆ, ಹಾಗಾಗಿ ರಾಜ್ಯ ಸರ್ಕಾರ ಅನುಮೋದನೆ ನೀಡುತ್ತಿಲ್ಲ ಎಂದು ಹೇಳಿದರು.
ಈ ವಿಚಾರದಲ್ಲಿ ಈಗಾಗಲೇ ನಾನು ಸಂಸತ್ತಿನಲ್ಲಿ ಮಾತಾಡಿದ್ದೇನೆ. ಇದಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಉತ್ತರ ನೀಡಿದರು. ರಾಜ್ಯ ಸರ್ಕಾರಕ್ಕೆ ಟನಲ್ ರೋಡ್ಗಾಗಿ ಸಾವಿರಾರು ಕೋಟಿ ರೂ ಖರ್ಚು ಮಾಡಲು ಹಣವಿದೆ. ಆದರೆ ಸಾರ್ವಜನಿಕ ಸಾರಿಗೆಗೆ ಖರ್ಚು ಮಾಡಲು ಹಣವಿಲ್ವ? ರಾಜ್ಯ ಸರ್ಕಾರ ಐಷಾರಾಮಿ ಕಾರು ಮಾಲೀಕರಿಗೆ ಮಾತ್ರ. ಬಿಎಂಟಿಸಿ, ಮೆಟ್ರೋದಲ್ಲಿ ಪ್ರಯಾಣ ಮಾಡುವವರಿಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: Free Bus Pass For All Students: ಇಂದಿನಿಂದ ಫ್ರೀ ಬಸ್ ಪಾಸ್ಗೆ ಅರ್ಜಿ ಸಲ್ಲಿಕೆ
ಒಟ್ಟಿನಲ್ಲಿ ಕೇಂದ್ರ ಸರ್ಕಾರ 4500 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಲು ಮುಂದಾಗಿದೆ. ಆದರೆ ತೇಜಸ್ವಿ ಸೂರ್ಯ ಆರೋಪ ಮಾಡುತ್ತಿರುವಂತೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿಲ್ಲವಂತೆ. ಒಂದು ವೇಳೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದರೆ, ಪ್ರಯಾಣಿಕರಿಗೆ ದೊಡ್ಡ ಮಟ್ಟದಲ್ಲಿ ಸಹಾಯ ಆಗುವುದರಲ್ಲಿ ನೋ ಡೌಟ್.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.