AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ನಲ್ಲಿ ಕರ್ನಾಟಕದ ಮಹಾಕುಂಭ ಮೇಳ: ಕಾವೇರಿ, ಲಕ್ಷ್ಮಣತೀರ್ಥ, ಹೇಮಾವತಿ ತ್ರಿವೇಣಿ ಸಂಗಮದಲ್ಲಿ ಸಿದ್ಧತೆ ಆರಂಭ

ಕುಂಭ ಮೇಳವನ್ನು ಯಶ್ವಸಿಯಾಗಿ ಆಯೋಜಿಸಲಿದ್ದು, ಐದು ಜಿಲ್ಲೆಗಳಲ್ಲಿ ಮಲೆ ಮಹದೇಶ್ವರ ಜ್ಯೋತಿ ಸಂಚರಿಸಲಿ.‌ ಕುಂಭ ಮೇಳಕ್ಕೆ ಆಗಮಿಸುವ ಎಲ್ಲಾ ಸಾಧುಸಂತರು, ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು.

ಅಕ್ಟೋಬರ್​ನಲ್ಲಿ ಕರ್ನಾಟಕದ ಮಹಾಕುಂಭ ಮೇಳ: ಕಾವೇರಿ, ಲಕ್ಷ್ಮಣತೀರ್ಥ, ಹೇಮಾವತಿ ತ್ರಿವೇಣಿ ಸಂಗಮದಲ್ಲಿ ಸಿದ್ಧತೆ ಆರಂಭ
ಮಹಾಕುಂಭ ಮೇಳದ ಸಭೆಯಲ್ಲಿ ಸ್ವಾಮೀಜಿಗಳು, ಸಚಿವರು ಭಾಗಿಯಾಗಿರುವುದು.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 21, 2022 | 2:40 PM

Share

ಬೆಂಗಳೂರು: ಕಾವೇರಿ, ಹೇಮಾವತಿ, ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 14,15,16 ರಂದು ಮಹಾ ಕುಂಬಾಮೇಳ (Mahakumbha Mela) ವನ್ನು ಆಯೋಜಿಸಲು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನಿರ್ದೇಶನ ನೀಡಿದ್ದಾರೆ. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಚಂದ್ರವನದ ಮಹಾಂತ ಶಿವಯೋಗಿ ಸ್ವಾಮೀಜಿಗಳ ನೇತೃತ್ವದಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಿ, ಕಾರ್ಯಕ್ರಮದ ರೂಪುರೇಷೆ ಬಗ್ಗೆ ಶ್ರೀಗಳ ಜೊತೆ ಚರ್ಚಿಸಿ ಮಾರ್ಗದರ್ಶನ ಪಡೆಯಲಾಯಿತು. ಅಕ್ಟೋಬರ್ 13ರ ಸಂಜೆಯಿಂದಲೇ ಮಲೇ ಮಹಾದೇಶ್ವರ ದೇವಾಲಯದ ಪ್ರತಿಷ್ಠಾಪನೆ ಕಾರ್ಯ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: Chamarajpet Ganeshotsav: ಚಾಮರಾಜಪೇಟೆ ಗಣೇಶೋತ್ಸವ: ವಿಎಚ್​ಪಿ ಮಹತ್ವದ ಸಭೆ, ನಾಗರಿಕ ಒಕ್ಕೂಟದಲ್ಲಿ ಬಿರುಕು

ಕುಂಭ ಮೇಳವನ್ನು ಯಶ್ವಸಿಯಾಗಿ ಆಯೋಜಿಸಲಿದ್ದು, ಐದು ಜಿಲ್ಲೆಗಳಲ್ಲಿ ಮಲೆ ಮಹದೇಶ್ವರ ಜ್ಯೋತಿ ಸಂಚರಿಸಲಿ.‌ ಕುಂಭ ಮೇಳಕ್ಕೆ ಆಗಮಿಸುವ ಎಲ್ಲಾ ಸಾಧುಸಂತರು, ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಠದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಚುಂಚಶ್ರೀ ಹೇಳಿದರು. ಇಂದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಇನ್ನೂ ಅದ್ದೂರಿಯಾಗಿ ಆಯೋಜಿಸಬೇಕು. ಪ್ರತಿದಿನ ಧಾರ್ಮಿಕ ಕಾರ್ಯಕ್ರಮ, ಧರ್ಮಸಭೆಗಳನ್ನು ಯಶಸ್ವಿಯಾಗಿ ಆಯೋಜಿಸಬೇಕು ಹಾಗೂ ಬರುವ ಭಕ್ತಾದಿಗಳಿಗೆ ಸೂಕ್ತ ಸ್ನಾನಘಟ್ಟ ನಿರ್ಮಿಸಬೇಕೆಂದು ಸುತ್ತೂರುಶ್ರೀಗಳು ಹೇಳಿದರು.

ತ್ರಿವೇಣಿ ಸಂಗಮ ಪವಿತ್ರ ಸ್ಥಳ. ಇಲ್ಲಿನ ಕುಂಭಮೇಳವನ್ನು ಶಾಸ್ತ್ರೋಕ್ತವಾಗಿ ಆಚರಿಸಬೇಕು. ಇದರ ಜೊತೆಗೆ ವಸ್ತು ಪ್ರದರ್ಶನ, ಮೇಳಗಳನ್ನು ನಡೆಸಬೇಕು ಎಂದು ತ್ರಿನೇತ್ರ ಮಹಾಂತಶ್ರೀಗಳು ಸಲಹೆ ನೀಡಿದರು. ಪ್ರತಿದಿನ ಗಂಗಾರತಿ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಮಲೆ ಮಹಾದೇಶ್ವರ ಬೆಟ್ಟದಿಂದ ತ್ರಿವೇಣಿ ಸಂಗಮದವರೆಗೂ ಜ್ಯೋತಿಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಶ್ರೀಗಳ ಜೊತೆ ಚರ್ಚಿಸಲಾಯಿತು. ಐದು ಜಿಲ್ಲೆಗಳಲ್ಲಿ ಮಲೆ ಮಹದೇಶ್ವರ ಜ್ಯೋತಿ ಸಂಚರಿಸಲಿದ್ದು, ಅಕ್ಟೋಬರ್ 13 ರಂದು ಕೆಆರ್ ಪೇಟೆಯ ತ್ರಿವೇಣಿ ಸಂಗಮವನ್ನು ತಲುಪಲಿದೆ.

ಈ ಧಾರ್ಮಿಕ ಕಾರ್ಯಕ್ರಮಕ್ಕೆ ದೇಶದ ನಾನಾ ಕಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ರಸ್ತೆ ಸೌಕರ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಧು ಸಂತರಿಗೆ ವಸತಿ ಸೌಕರ್ಯ, ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಬೇಕು. ಬರುವ ಭಕ್ತರಿಗೆ ಸಂಗಮದಲ್ಲಿ ಸ್ನಾನಘಟ್ಟ ನಿರ್ಮಾಣ, ಶೌಚಾಲಯದ ವ್ಯವಸ್ಥೆ ಸೇರಿದಂತೆ ಭಕ್ತರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಇದನ್ನೂ ಓದಿ: Ganesh Chaturthi 2022: ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಮುಕ್ತ ಅವಕಾಶ; ಶಿಕ್ಷಣ ಸಚಿವರ ನಿರ್ಧಾರಕ್ಕೆ ಆಕ್ಷೇಪ

ಕಾರ್ಯಕ್ರಮಕ್ಕೆ‌ ಕೇಂದ್ರ‌ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸಲು ಚರ್ಚಿಸಲಾಯಿತು. ನಾಗಸಾಧು ಸಂತರು ಸೇರಿದಂತೆ ಎಲ್ಲಾ ಧಾರ್ಮಿಕ ಪ್ರತಿನಿಧಿಗಳು, ಜನಪ್ರತಿನಿಧಿಗಳನ್ನು ಒಳಗೊಂಡಂತೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಯಿತು. ಸಚಿವ ಗೋಪಾಲಯ್ಯ, ಜಿಲ್ಲಾಧಿಕಾರಿ ಎಸ್ ಅಶ್ವಥಿ, ಎಸ್‌ಪಿ ಯತೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!