ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗಾಗಿ ಸಹಾಯಧನದಲ್ಲಿ ಕಾಶಿ ಯಾತ್ರೆ ಪ್ರವಾಸ; ರಾಜ್ಯ ಸರ್ಕಾರ ಆದೇಶ

ಪ್ರತಿಯೊಬ್ಬ ಯಾತ್ರಾರ್ಥಿಗೆ 5 ಸಾವಿರ ರೂ. ಸಹಾಯಧನ ನೀಡಲಾಗುತ್ತಿದ್ದು, ಶೀಘ್ರದಲ್ಲಿಯೇ ಮುಜರಾಯಿ ಇಲಾಖೆಯಿಂದ ಕಾಶಿಯಾತ್ರೆಗೆ ತೆರಳಲು ಆಸಕ್ತಿ ಹೊಂದಿರುವ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಿದೆ.

ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗಾಗಿ ಸಹಾಯಧನದಲ್ಲಿ ಕಾಶಿ ಯಾತ್ರೆ ಪ್ರವಾಸ; ರಾಜ್ಯ ಸರ್ಕಾರ ಆದೇಶ
ರಾಜ್ಯ ಸರ್ಕಾರ ಆದೇಶ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Apr 19, 2022 | 7:53 PM

ಬೆಂಗಳೂರು: ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗಾಗಿ ಸಹಾಯಧನದಲ್ಲಿ ಕಾಶಿ (Kashi) ಯಾತ್ರೆ ಪ್ರವಾಸ ಯೋಜನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪಿತ ಕಾಶಿಯಾತ್ರೆ ಪ್ರವಾಸ ಯೋಜನೆ, ಪ್ರತಿ ವರ್ಷ ರಾಜ್ಯದ 30 ಸಾವಿರ ಯಾತ್ರಾರ್ಥಿಗಳು ಸರ್ಕಾರದ ಸಹಾಯಧನದ ಮೂಲಕ ಕಾಶಿಗೆ ತೆರಳಲು ಅವಕಾಶವಿದೆ. ಪ್ರತಿಯೊಬ್ಬ ಯಾತ್ರಾರ್ಥಿಗೆ 5 ಸಾವಿರ ರೂ. ಸಹಾಯಧನ ನೀಡಲಾಗುತ್ತಿದ್ದು, ಶೀಘ್ರದಲ್ಲಿಯೇ ಮುಜರಾಯಿ ಇಲಾಖೆಯಿಂದ ಕಾಶಿಯಾತ್ರೆಗೆ ತೆರಳಲು ಆಸಕ್ತಿ ಹೊಂದಿರುವ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಿದೆ.

ಮೇ ತಿಂಗಳಲ್ಲಿ ಚಾರ್​ ಧಾಮ್ ಯಾತ್ರೆಗೆ ವಿಶೇಷ ರಿಯಾಯ್ತಿ ಘೋಷಿಸಿದ ರೈಲ್ವೆ

ದೆಹಲಿ: ಉತ್ತರಾಖಂಡದಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಪ್ರವಾಸ ಹೊರಡುವ ಆಸೆ ಹೊಂದಿರುವವರಿಗೆ ಐಆರ್​ಸಿಟಿಸಿ ವಿಶೇಷ ರಿಯಾಯ್ತಿ ಘೋಷಿಸಿದೆ. ಹಲವು ಅಗತ್ಯ ಸೌಲಭ್ಯಗಳಿರುವ ಪ್ಯಾಕೇಜ್ ಟೂರ್​ಗಳಲ್ಲಿ ಪ್ರಯಾಣಿಕರಿಗೆ ಸಾಕಷ್ಟು ರಿಯಾಯ್ತಿಯೂ ಸಿಗುತ್ತಿದೆ. ಬದರಿನಾಥ್, ಕೇದಾರ್​ನಾಥ್, ಗಂಗೋತ್ರಿ ಮತ್ತು ಯಮುನೋತ್ರಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಈ ಪ್ಯಾಕೇಜ್​ನಲ್ಲಿದೆ. ಈ ನಾಲ್ಕು ತೀರ್ಥ ಕ್ಷೇತ್ರಗಳ ದರ್ಶನದಿಂದ ಪುಣ್ಯಪ್ರಾಪ್ತಿಯಾಗುತ್ತದೆ ಎಂದು ಹಿಂದೂಗಳು ನಂಬುತ್ತಾರೆ.

ಭಾರತ ಸರ್ಕಾರದ ಆಜಾದಿ ಕ ಅಮೃತ್ ಮಹೋತ್ಸವ್ ಮತ್ತು ದೇಖೋ ಆಪ್ನಾ ದೇಶ್​ ಉಪಕ್ರಮಗಳ ಭಾಗವಾಗಿ ಐಆರ್​ಸಿಟಿಸಿ ಈ ಯೋಜನೆಯನ್ನು ಪರಿಚಯಿಸಿದೆ. ಈ ವರ್ಷ ಕೊರೊನಾ ಪ್ರಕರಣಗಳು ಕಡಿಮೆಯಾಗಿರುವುದರಿಂದ ಸಾಕಷ್ಟು ಜನರು ಈ ಸೌಲಭ್ಯ ಪಡೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಮೇ 14ರಿಂದ ಆರಂಭವಾಗಿ ಮೇ 25ಕ್ಕೆ ಮುಕ್ತಾಯವಾಗಲಿರುವ ಈ ಯಾತ್ರೆಯು 12 ಹಗಲು ಮತ್ತು 11 ರಾತ್ರಿಗಳ ಪ್ರವಾಸ ಪ್ಯಾಕೇಜ್ ಹೊಂದಿರುತ್ತದೆ. ಹರಿದ್ವಾರ, ಬಾರ್​ಕೊಟ್, ಜಾನಕಿಚಟ್ಟಿ, ಯಮುನೋತ್ರಿ, ಉತ್ತರಕಾಶಿ, ಗಂಗೋತ್ರಿ, ಗುಪ್ತಕಾಶಿ, ಸನ್​ಪ್ರಯಾಗ, ಕೇದಾರನಾಥ, ಬದರಿನಾಥ ಕ್ಷೇತ್ರಗಳನ್ನು ಸಂದರ್ಶಿಸಲಾಗುತ್ತದೆ. ನಾಗಪುರ ಮತ್ತು ದೆಹಲಿ ಮಾರ್ಗವಾಗಿ ವಾಯುಯಾನ ಟಿಕೆಟ್​ಗಳನ್ನೂ ಈ ಪ್ಯಾಕೇಜ್ ಒಳಗೊಂಡಿರುತ್ತದೆ.

ಇದನ್ನೂ ಓದಿ:

ಇಂದು ಬೆಂಗಳೂರಿನಲ್ಲಿ ಮಳೆಗೆ ಬಿಡುವು; ಗ್ರಾಮಾಂತರದಲ್ಲಿ ವರುಣನ ಆರ್ಭಟ, ಹಲವು ಕಡೆ ಭಾರಿ ಅನಾಹುತ

ಡಿಗ್ರಿ ಮುಗಿದು 2ವರ್ಷಗಳಾದರೂ ಸಿಗದ ಉದ್ಯೋಗ; ಕಾಲೇಜು ಸಮೀಪವೇ ಚಹಾ ಮಾರುತ್ತಿರುವ ಯುವತಿ

Published On - 7:52 pm, Tue, 19 April 22