Basavanagudi Assembly Election 2023: ಬಿಜೆಪಿ ಸಬೂಬು ಹೇಳುತ್ತಲೇ ಬಂದಿದೆ, ಅದಕ್ಕೇ ಸ್ವತಂತ್ರ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸುವೆ: ಬಂಡೆದ್ದ ಕಟ್ಟೆ ಸತ್ಯ ಘೋಷಣೆ

ಬಿಬಿಎಂಪಿ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಅವರಿಗೆ ಬಸವನಗುಡಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ಸಿಗದ ಕಾರಣ, ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ.

Basavanagudi Assembly Election 2023:  ಬಿಜೆಪಿ ಸಬೂಬು ಹೇಳುತ್ತಲೇ ಬಂದಿದೆ, ಅದಕ್ಕೇ ಸ್ವತಂತ್ರ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸುವೆ: ಬಂಡೆದ್ದ ಕಟ್ಟೆ ಸತ್ಯ  ಘೋಷಣೆ
ಮಾಜಿ ಮೇಯರ್​ ಕಟ್ಟೆ ನಾರಾಯಣ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 15, 2023 | 1:02 PM

ಬೆಂಗಳೂರು: ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Election)ಗೆ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದೇ ತಡ ವಿವಿಧ ಕ್ಷೇತ್ರಗಳಲ್ಲಿ ಬಿಜೆಪಿಯಲ್ಲಿನ ಭಿನ್ನಮತ ಸ್ಫೋಟಗೊಂಡಿದೆ. ಹೌದು ಬಿಬಿಎಂಪಿ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ(Katte Sathyanarayana) ‘ನಾನು‌ ಬಸವನಗುಡಿ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, ಸೀನಿಯರ್ ಇದ್ದೇನೆ. ಈ ಹಿಂದೆ ಅವಕಾಶ ಕೊಡುವಂತೆ ಹಲವು ಬಾರಿ ಮನವಿ ಮಾಡಿದ್ದೆ. ಪ್ರತಿ ಬಾರಿಯೂ ಕೇಳುತ್ತಲೇ ಇದ್ದೇನೆ ಅವರು ಸಬೂಬು ಹೇಳಿಕೊಂಡು ಬರುತ್ತಲೇ ಇದ್ದಾರೆ. ಆದರೆ ಯಾಕೋ ಪಕ್ಷ ನನಗೆ ಮಣೆ ಹಾಕಿಲ್ಲ. ಆದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೇನೆ. ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ.

ಬಿಜೆಪಿಗೆ ಸಮಸ್ಯೆ ತಂದಿಡಲಿದ್ಯಾ ಮತ್ತೊಂದು ಕ್ಷೇತ್ರ?

ಹೌದು ಬ್ಯಾಟರಾಯನಪುರ ಕ್ಷೇತ್ರದ ಬಳಿಕ ಬಸವನಗುಡಿ ಕ್ಷೇತ್ರದಲ್ಲಿ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಬಹಳ ವರ್ಷಗಳಿಂದ ಬಿಜೆಪಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಅವರು ಈ ಬಾರಿ ಟಿಕೆಟ್​ ಸೀಗುತ್ತದೆ ಎಂಬ ಭರವಸೆಯಲ್ಲಿದ್ದರು. ಆದರೆ ಪಕ್ಷ ಬಿಜೆಪಿಯ ರವಿ ಸುಬ್ರಮಣ್ಯ ಎಂಬುವವರಿಗೆ ಟಿಕೆಟ್​ ನೀಡಿದೆ. ಇದರಿಂದ ಬಂಡಾಯ ಎದ್ದಿರುವ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ:ಚುನಾವಣೆಯಲ್ಲಿ ಒಳ ಮೀಸಲಾತಿ ಕಿಚ್ಚು; ಬಿಜೆಪಿಗೆ ಮತ ಹಾಕದಂತೆ ಪ್ರಮಾಣ ಮಾಡಿಸಿದ ಸ್ವಾಮೀಜಿ

ಮೂರು ಬಾರಿ ಕಾರ್ಪೋರೇಟರ್ ಆಗಿದ್ದ ಕಟ್ಟೆ ಸತ್ಯನಾರಾಯಣ

ಕಟ್ಟೆ ಸತ್ಯನಾರಾಯಣ ಅವರು ಒಂದು ಬಾರಿ ಮೇಯರ್ ಮತ್ತು ಮೂರು ಬಾರಿ ಕಾರ್ಪೋರೇಟರ್ ಆಗಿದ್ದಾರೆ. 2018 ರಲ್ಲಿ ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದೇ ಕಾರಣಕ್ಕೆ ಈ ಬಾರಿ ತಮಗೆ ಟಿಕೆಟ್​ ಸಿಗುತ್ತದೆ ಎಂದು ನಂಬಿದ್ದರು. ಇದೀಗ ಟಿಕೆಟ್​ ಸಿಗದ ಕಾರಣ ಸೋಮವಾರ ಬಸವನಗುಡಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇನ್ನು ಬಸವನಗುಡಿ ಕ್ಷೇತ್ರ 61 ಸಾವಿರದಷ್ಟು ಬ್ರಾಹ್ಮಣ ಸಮುದಾಯದ ಮತಗಳನ್ನು ಹೊಂದಿದೆ. ಇನ್ನೂ ಪಕ್ಷದವರು ಯಾರೂ ಕೂಡ ಸಂಪರ್ಕ ಮಾಡಿಲ್ಲ, ಏನು ಮಾಡುತ್ತಾರೆ ಎಂದು ಕಾದು ನೋಡೋಣ ಎಂದಿದ್ದಾರೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:40 pm, Sat, 15 April 23

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ