ಪ್ರಯಾಣಿಕರೇ ಗಮನಿಸಿ: ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈ ನಿಯಮ ಪಾಲಿಸಲೇಬೇಕು, ಉಲ್ಲಂಘಿಸಿದ್ರೆ ದಂಡ ಖಂಡಿತ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿಯಾಗಿದೆ. ಇಂದಿನಿಂದ ಟರ್ಮಿನಲ್ 1ಕ್ಕೆ ಯಲ್ಲೋ ಬೋರ್ಡ್ ಕಾರುಗಳ ಪ್ರವೇಶ ನಿರ್ಬಂಧಿಸಲಾಗಿದೆ. ಇವರು P3, P4 ಪಾರ್ಕಿಂಗ್ ಬಳಸಬೇಕು. ವೈಟ್ ಬೋರ್ಡ್ ವಾಹನಗಳಿಗೆ 8 ನಿಮಿಷ ಉಚಿತ ಪ್ರವೇಶವಿದ್ದು, ನಂತರ ಪ್ರತಿ 5 ನಿಮಿಷಕ್ಕೆ 150 ರೂ. ದಂಡ ವಿಧಿಸಲಾಗುವುದು. ಈ ನಿಯಮಗಳ ಬಗ್ಗೆ ಚಾಲಕರು ಮತ್ತು ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತಿದೆ, ಮತ್ತು ಅಡಚಣೆ ತಪ್ಪಿಸಲು ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರಯಾಣಿಕರೇ ಗಮನಿಸಿ: ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈ ನಿಯಮ ಪಾಲಿಸಲೇಬೇಕು, ಉಲ್ಲಂಘಿಸಿದ್ರೆ ದಂಡ ಖಂಡಿತ
ಸಾಂದರ್ಭಿಕ ಚಿತ್ರ
Edited By:

Updated on: Dec 13, 2025 | 3:52 PM

ಬೆಂಗಳೂರು, ಡಿ.13: ಬೆಂಗಳೂರು ಕೆಂಪೇಗೌಡ ವಿಮಾನದಲ್ಲಿ (Kempegowda Airport) ಹೊಸ ನಿಯಮ ಜಾರಿ ಮಾಡಲಾಗಿದೆ. ಇಂದಿನಿಂದ ಟರ್ಮಿನಲ್​​​​ 1ರಲ್ಲಿ ಯಲ್ಲೋ ಬೋರ್ಡ್​ ಕಾರುಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಲ್ಲೋ ಬೋರ್ಡ್​ ಕಾರುಗಳಿಗೆ ಟರ್ಮಿನಲ್​​​​ 1ಕ್ಕೆ ಪ್ರವೇಶ ಇರುವುದಿಲ್ಲ. ವಿಮಾನ ನಿಲ್ದಾಣದ​ ಪಿಕ್​​​​ಅಪ್​​​​​ ಪಾಯಿಂಟ್​​​ನಲ್ಲಿ ಈ ನಿಷೇಧವನ್ನು ಮಾಡಲಾಗಿದೆ. ಅಸಂಘಟಿತ ಯಲ್ಲೋ ಬೋರ್ಡ್ ಕಾರುಗಳಿಗೆ P3, P4 ಪಾರ್ಕಿಂಗ್​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು ಈ ಬಗ್ಗೆ ಮಿನಿ ಧ್ವನಿವರ್ಧಕ ((Public Address System) ಮೂಲಕ ಪ್ರಯಾಣಿಕರಿಗೆ ಸಿಬ್ಬಂದಿಯಿಂದ ಮಾಹಿತಿ ನೀಡಲಾಗುವುದು. ಯಲ್ಲೋ ಬೋರ್ಡ್​ ಕಾರುಗಳು P3, P4ರಲ್ಲಿ ಪಾರ್ಕಿಂಗ್​​​​ ಮಾಡುವಂತೆ ಏರ್​ಪೋರ್ಟ್​ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಇನ್ನು ವೈಟ್​​​ ಬೋರ್ಡ್​ನ ವಾಹನಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಯಾರೂ ಕೂಡ ಗಲಾಟೆ ಮಾಡದಂತೆ ಕಾರು ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ. ವೈಟ್ ಬೋರ್ಡ್ ವಾಹನಗಳಿಗೂ ಟರ್ಮಿನಲ್​​​​ 1ರಲ್ಲಿ ನಿಲ್ಲಲು ಮೊದಲ 8 ನಿಮಿಷ ಅವಕಾಶ ಇದೆ. ಒಂದು ವೇಳೆ 8 ನಿಮಿಷಕ್ಕಿಂತ ಹೆಚ್ಚಾದರೆ ಅಂದರೆ ಮತ್ತೆ 5 ನಿಮಿಷ ಕಾಲ ನಿಲುಗಡೆಗೆ 150 ರೂ. ದಂಡ ಹಾಕಲಾಗುವುದು. ನಂತರ ಒಂದು ಎಚ್ಚರಿಕೆಯನ್ನು ನೀಡಲಾಗುವುದು. ಇದನ್ನು ನಿರ್ಲಕ್ಷ್ಯಿಸಿ ಮತ್ತೆ 5 ನಿಮಿಷ ನಿಂತರೆ 150 ದಂಡ ಹಾಕಲಾಗುತ್ತದೆ ಎಂದು ಹೇಳಿದ್ದಾರೆ.

ಇಂದಿನಿದಲೇ ಈ ನಿಯಮ ಜಾರಿಗೆ ಬರಲಿದೆ. ಈ ಬಗ್ಗೆ ಯಾವುದೇ ಕಾರು ಚಾಲಕರು ಕಿರಿಕಿರಿ ಮಾಡಬಾರದು ಎಂದು ವಿಮಾನ ನಿಲ್ದಾಣ ಸಿಬ್ಬಂದಿಗಳು ಹೇಳಿದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣದಲ್ಲಿ ಯಾವುದೇ ಕಿರಿಕಿರಿ ಆಗದಂತೆ ಬಂದೋಬಸ್ತ್ ವಹಿಸುವಂತೆ ಪೊಲೀಸರಿಗೆ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನ ನಿಲ್ದಾಣಗಳಲ್ಲಿ ಕಳ್ಳತನ ಪ್ರಕರಣ: ಬೆಂಗಳೂರಿಗೆ ದೇಶದಲ್ಲೇ ಮೊದಲನೇ ಸ್ಥಾನ!

ವಿಮಾನ ನಿಲ್ದಾಣಗಳಲ್ಲಿ ಕಳ್ಳತನ ಪ್ರಕರಣ:

ಇಂಡಿಗೋ ವಿಮಾನ ಹಾರಾಟ ರದ್ದಾದ ನಂತರ ಬೆಂಗಳೂರು ಕೆಂಪೇಗೌಡ ವಿಮಾನದಲ್ಲಿ ಹೊಸ ಪಾರ್ಕೀಂಗ್​​​​​ ನಿಯಮವನ್ನು ಮಾಡಲಾಗಿತ್ತು. ಇದರಿಂದಲ್ಲೂ ವಿಮಾನ ನಿಲ್ದಾಣ ದೊಡ್ಡ ಗೊಂದಲ ಸೃಷ್ಟಿಯಾಗಿತ್ತು. ಇದರ ಜತೆಗೆ ಕಳ್ಳತನದ ಪ್ರಕರಣ ಕೂಡ ವಿಮಾನ ನಿಲ್ದಾಣದಲ್ಲಿ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಈ ವರ್ಷ ಭಾರತದಲ್ಲಿನ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಪ್ರಕ್ರಿಯೆಯ ವೇಳೆ 9 ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ ನಾಲ್ಕು ಪ್ರಕರಣಗಳು ಕೆಐಎಬಿಯಲ್ಲೇ ನಡೆದಿವೆ. ಈ ಮೂಲಕ ಬೆಂಗಳೂರು ಏರ್​​ಪೋರ್ಟ್​​ ಪಟ್ಟಿಯಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ. ಜನವರಿ 1ರಿಂದ ನವೆಂಬರ್ 27ರವರೆಗೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ಕು ಕಳ್ಳತನ ಪ್ರಕರಣಗಳು ನಡೆದಿದ್ದು, ದೆಹಲಿ, ಹೈದರಾಬಾದ್, ಮುಂಬೈ, ನಾಗಪೂರ್ ಮತ್ತು ರಾಜ್ಕೋಟ್ ವಿಮಾನ ನಿಲ್ದಾಣಗಳಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ ಎಂದು ವಿಮಾನಯಾನ ರಾಜ್ಯ ಖಾತೆ ಸಚಿವ ಮುರಳೀಧರ ಮೊಹೊಲ್ ಲೋಕಸಭೆಗೆ ತಿಳಿಸಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us