AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ: ಕೆಂಪೇಗೌಡ ಏರ್‌ಪೋರ್ಟ್‌ನ ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ಮುಂದೂಡಿಕೆ

ತಾಂತ್ರಿಕ ದೋಷ ಹಾಗೂ ಕೆಲ ಸಮಸ್ಯೆಗಳ ಹಿನ್ನೆಲೆ ನಾಳೆ‌ಯಿಂದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋಟ್​ನ ಗಾರ್ಡನ್ ಟರ್ಮಿನಲ್​ ಎರಡರಿಂದ ಹಾರಾಟ ಮಾಡಬೇಕಿದ್ದ ವಿದೇಶಿ ವಿಮಾನಗಳ ಹಾರಾಟವನ್ನು ಮುಂದೂಡಲಾಗಿದೆ ಎಂದು ಕೆಐಎಬಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ತಾಂತ್ರಿಕ ದೋಷ: ಕೆಂಪೇಗೌಡ ಏರ್‌ಪೋರ್ಟ್‌ನ ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ಮುಂದೂಡಿಕೆ
ಟರ್ಮಿನಲ್ 2
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 30, 2023 | 11:07 PM

ಬೆಂಗಳೂರು, ಆಗಸ್ಟ್ 31: ತಾಂತ್ರಿಕ ದೋಷ ಹಾಗೂ ಕೆಲ ಸಮಸ್ಯೆಗಳ ಹಿನ್ನೆಲೆ ನಾಳೆ‌ಯಿಂದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋಟ್​ನ (Kempegowda Airport) ಗಾರ್ಡನ್ ಟರ್ಮಿನಲ್​ ಎರಡರಿಂದ ಹಾರಾಟ ಮಾಡಬೇಕಿದ್ದ ವಿದೇಶಿ ವಿಮಾನಗಳ ಹಾರಾಟವನ್ನು ಮುಂದೂಡಲಾಗಿದೆ. ನಾಳೆ ಟರ್ಮಿನಲ್​ 2ನಿಂದ ವಿದೇಶಿ ಹಾರಾಟಕ್ಕೆ ಕೆಐಎಬಿ ತಂಡ ಮುಹೂರ್ತ ಫಿಕ್ಸ್ ಮಾಡಿತ್ತು. ಆದರೆ ಕೊನೆ ಕ್ಷಣದಲ್ಲಿ ಮುಂದೂಡಿಕೆ ಮಾಡುವುದಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಕೆಲ ದಿನಗಳ‌ ಕಾಲ ಟರ್ಮಿನಲ್ 1 ರಿಂದಲೇ ವಿದೇಶಿ ವಿಮಾನಗಳು ಹಾರಾಟ ನಡೆಸಲಿವೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ನಾಳೆಯಿಂದ ಟರ್ಮಿನಲ್​ 1ರಿಂದ ದೇಶಿಯ ಮತ್ತು ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ನಡೆಸಬೇಕಿತ್ತು. ಆದರೆ ತಾಂತ್ರಿಕ ದೋಷ ಹಾಗೂ ಕೆಲ ಸಮಸ್ಯೆಗಳಿಂದ ಹಾರಾಟ ಮುಂದೂಡಲಾಗಿದೆ.

ಇದನ್ನೂ ಓದಿ: Bengaluru: ಪ್ರಯಾಣದ ವೇಳೆ ಏರ್ ಫ್ರಾನ್ಸ್ ವಿಮಾನದ ಬಾಗಿಲು ತೆಗೆಯಲು ಯತ್ನಿಸಿದ ಆಂಧ್ರ ಮೂಲದ ವ್ಯಕ್ತಿ ಬೆಂಗಳೂರಲ್ಲಿ ಅರೆಸ್ಟ್

ಟರ್ಮಿನಲ್​ ಎರಡು 5 ಸಾವಿರ ಕೋಟಿ ರೂ. ವೆಚ್ಚದ ವಿನೂತನ ಗಾರ್ಡನ್ ಹೊಂದಿದೆ. ನಮ್ಮ ಪ್ರಯಾಣಿಕರಿಗೆ ಸೂಕ್ತ ಮತ್ತು ಯೋಗ್ಯ ಪ್ರಯಾಣವನ್ನು ಒದಗಿಸುವ ನಿಟ್ಟಿನಲ್ಲಿ ಅಂತಿಮ ಪರಿಶೀಲನೆ ಸಲುವಾಗಿ ಕೊನೆಯ ಕ್ಷಣದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ಆದೇಶದವರೆಗೂ ಅಂತರರಾಷ್ಟ್ರೀಯ ಕಾರ್ಯಾಚರಣೆಗಳು ಟರ್ಮಿನಲ್ 1ರಿಂದ ನಡೆಯುತ್ತಿವೆ.

ಕೊನೆಯ ಕ್ಷಣದಲ್ಲಿ ತೆಗೆದುಕೊಂಡ ಈ ನಿರ್ಧಾರದಿಂದ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ನಮ್ಮ ಪ್ರಯಾಣಿಕರಿಗೆ ಸಾಧ್ಯವಾದಷ್ಟು ಉತ್ತಮ ಪ್ರಯಾಣದ ಅನುಭವವನ್ನು ನೀಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದು, ನಿಮ್ಮ ತಾಳ್ಮೆ ಮತ್ತು ತಿಳುವಳಿಕೆಯನ್ನು ಪ್ರಶಂಸಿಸುತ್ತೇವೆ.

ಅಂತರರಾಷ್ಟ್ರೀಯ ಪ್ರಯಾಣದ ಕುರಿತಾಗಿ ಯಾವುದೇ ಹೆಚ್ಚಿನ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಬಿಐಎಎಲ್ ವಕ್ತಾರರು ಪ್ರಯಾಣಿಕರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣ; ಸೆ.1 ರಿಂದ ಟರ್ಮಿನಲ್ 2ನಿಂದ ಕಾರ್ಯಾಚರಿಸಲಿವೆ ಅಂತಾರಾಷ್ಟ್ರೀಯ ವಿಮಾನಗಳು

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2022 ರ ನವೆಂಬರ್​​ನಲ್ಲಿ ಉದ್ಘಾಟಿಸಿದ್ದರು. ಟರ್ಮಿನಲ್‌ನಲ್ಲಿ ದೇಶೀಯ ಕಾರ್ಯಾಚರಣೆಗಳು 2023 ರ ಜನವರಿ 15 ರಂದು ಪ್ರಾರಂಭವಾಗಿದ್ದವು.

ಟರ್ಮಿನಲ್ 2 ರ ಕಾಮಗಾರಿ 2018 ರಲ್ಲಿ ಪ್ರಾರಂಭವಾಗಿತ್ತು. ವಿವಿಧ ಜಾತಿಯ ಸಸ್ಯಗಳು ಮತ್ತು ಮರಗಳಿಂದ  ಈ ಟರ್ಮಿನಲ್ ಸುತ್ತುವರೆದಿದ್ದು, ಇದನ್ನು ಇನ್​ ದಿ ಗಾರ್ಡನ್ ಎಂದು ಕರೆಯಲಾಗುತ್ತಿದೆ. ಈ ಟರ್ಮಿನಲ್​​​ನಲ್ಲಿ 180 ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಜಾತಿಯ ಸಸ್ಯಗಳನ್ನು ಕಾಣಬಹುದಾಗಿದೆ. 3,600 ಕ್ಕೂ ಹೆಚ್ಚು ಸಸ್ಯ ಪ್ರಭೇದಗಳು, ಬಿದಿರು, 620 ಸ್ಥಳೀಯ ಸಸ್ಯಗಳು, 7,700 ಕಸಿ ಮರಗಳು, 96 ಕಮಲ ಮತ್ತು ಇನ್ನೂ ಹೆಚ್ಚಿನ ಸಸ್ಯಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:52 pm, Wed, 30 August 23

ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ