ಬೆಂಗಳೂರು, ಜನವರಿ 31: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಕಸ್ಟಮ್ಸ್ ಅಧಿಕಾರಿಗಳು ಪ್ಲಾಸ್ಕ್ನಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಅಕ್ರಮ ಚಿನ್ನವನ್ನು (Gold) ವಶಪಡಿಸಿಕೊಂಡಿದ್ದಾರೆ. ಸೌದಿ ಅರೇಬಿಯಾದ (Saudi Arabia) ಜೇದಾ ಏರ್ಪೋಟ್ನಿಂದ ಆಗಿಸಿದ್ದ ಪ್ರಯಾಣಿಕ, ಚಿನ್ನವನ್ನು ಪೇಸ್ಟ್ ಮಾಡಿ ಪ್ಲಾಸ್ಕ್ನ ಒಳಗಡೆ ಇಟ್ಟುಕೊಂಡು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದಾನೆ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಚಿನ್ನವಿರುವುದು ಪತ್ತೆಯಾಗಿದೆ. ಪ್ರಯಾಣಿಕನಿಂದ ಅಧಿಕಾರಿಗಳು 7 ಲಕ್ಷ 52 ಸಾವಿರ ರೂ. ಮೌಲ್ಯದ 122 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ. ಬಳಿಕ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.
ವಿದೇಶದಿಂದ ಅಕ್ರಮವಾಗಿ ಕೋಬ್ರಾ ಹಾವನ್ನು ಬಾಟಲ್ನಲ್ಲಿ ಇಟ್ಟುಕೊಂಡು ತಂದಿದ್ದ ಪ್ರಯಾಣಿಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪುರುಷೋತ್ತಮ್ ಎಂಬುವರು ಬ್ಯಾಂಕಾಕ್ನ ಡಾನ್ ಮಿಯಾಂಗ್ ಏರ್ಪೋಟ್ನಿಂದ ಏರ್ ಏಷ್ಯಾ ವಿಮಾನದ ಮೂಲಕ ಇಂದು (ಜ.31) ಬೆಳಿಗ್ಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ತಪಾಸಣೆ ವೇಳೆ ಬ್ಯಾಗ್ನಲ್ಲಿ ಹಾವಿನ ಬಾಟಲ್ ಪತ್ತೆಯಾಗಿದೆ.
ಕಾನೂನು ಪ್ರಕಾರ ಪ್ರಾಣಿಗಳ ಸಾಗಾಟ ನಿಷೇಧ ಹಿನ್ನೆಲೆಯಲ್ಲಿ ಹಾವಿನ ಬಾಟಲ್ ಸಮೇತ ಪ್ರಯಾಣಿಕನನ್ನು ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ಪಡೆದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಪ್ರಯಾಣಿಕ ಪುರುಷೋತ್ತಮ್ನನ್ನು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 26 ಕೋಟಿ ರೂ. ಮೌಲ್ಯದ ಕೊಕೇನ್, ಕೀನ್ಯಾ ಮೂಲದ ಮಹಿಳೆ ವಶ
ಕಳೆದ ವರ್ಷ ನವೆಂಬರ್ 18 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದರು. ಬ್ಯಾಂಕಾಕ್, ಕೊಲಂಬೋ ಮತ್ತು ಮಸ್ಕಟ್ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಕೆಜಿಗೂ ಅಧಿಕ ಚಿನ್ನವನ್ನು ಜಪ್ತಿ ಮಾಡಿದ್ದರು. ಬ್ಯಾಂಕಾಕ್ನಿಂದ ಮೂವರು ಪುರುಷರು, ಕೊಲಂಬೊದ ಇಬ್ಬರು ಮಹಿಳೆಯರು ಮತ್ತು ಮಸ್ಕಟ್ನ ಒರ್ವ ಪ್ರಯಾಣಿಕ ಶರ್ಟ್ ಮತ್ತು ಒಳ ಉಡುಪಿನಲ್ಲಿ ಚಿನ್ನದ ಕಟ್ ಫಿಸ್ಗಳನ್ನು ಅಡಗಿಸಿಟ್ಟುಕೊಂಡು ತಂದಿದ್ದರು.
ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಮೂರು ಪ್ರಕರಣಗಳಿಂದ 1,26,58, 618 ರೂ. ಮೌಲ್ಯದ 2 ಕೆಜಿ 79 ಗ್ರಾಂ ತೂಕದ ಚಿನ್ನ ಪತ್ತೆಯಾಗಿತ್ತು. ಮೂರು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಅಧಿಕಾರಿಗಳು ಪಡೆದು ವಿಚಾರಣೆ ನಡೆಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:03 pm, Wed, 31 January 24