ಸಮಯಪಾಲನೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಶ್ವದಲ್ಲೇ ಅತ್ಯುತ್ತಮ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಆನ್-ಟೈಮ್ ನಿರ್ಗಮನವು ಜುಲೈನಲ್ಲಿ ಶೇ 87.51ರಷ್ಟು ಆಗಿತ್ತು. ಆಗಸ್ಟ್‌ನಲ್ಲಿ ಶೇ 89.66, ಮತ್ತು ಸೆಪ್ಟೆಂಬರ್‌ನಲ್ಲಿ ಇದು ಶೇ 88.51 ರಷ್ಟಾಗಿತ್ತು. ಈ ಮೂಲಕ ಕೆಐಎ ಕಳೆದ ಮೂರು ತಿಂಗಳಲ್ಲಿ ಜಾಗತಿಕವಾಗಿ ಅತ್ಯಂತ ಸಮಯಪಾಲನೆ ವಿಮಾನ ನಿಲ್ದಾಣವಾಗಿ ಹೊರಹೊಮ್ಮಿದೆ.

ಸಮಯಪಾಲನೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಶ್ವದಲ್ಲೇ ಅತ್ಯುತ್ತಮ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Follow us
ವಿವೇಕ ಬಿರಾದಾರ
|

Updated on: Oct 16, 2023 | 8:06 AM

ಬೆಂಗಳೂರು ಅ.16: ಜಾಗತಿಕ ಅತ್ಯಂತ ಸಮಯಪಾಲನೆ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಸ್ಥಾನ ಪಡೆದುಕೊಂಡಿದೆ. ವಾಯುಯಾನ ವಿಶ್ಲೇಷಣಾ ಸಂಸ್ಥೆ ಸಿರಿಯಮ್‌ನ ಆನ್-ಟೈಮ್ ಪರ್ಫಾರ್ಮೆನ್ಸ್ (OTP) ಮಾಸಿಕ ವರದಿಯ ಪ್ರಕಾರ, ಜಾಗತಿಕ ವಿಮಾನ ನಿಲ್ದಾಣದ ಶ್ರೇಯಾಂಕದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕಳೆದ ಮೂರು ತಿಂಗಳಿಂದ ಅಗ್ರಸ್ಥಾನದಲ್ಲಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಆನ್-ಟೈಮ್ ನಿರ್ಗಮನವು ಜುಲೈನಲ್ಲಿ ಶೇ 87.51ರಷ್ಟು ಆಗಿತ್ತು. ಆಗಸ್ಟ್‌ನಲ್ಲಿ ಶೇ 89.66, ಮತ್ತು ಸೆಪ್ಟೆಂಬರ್‌ನಲ್ಲಿ ಇದು ಶೇ 88.51 ರಷ್ಟಾಗಿತ್ತು. ಈ ಮೂಲಕ ಕೆಐಎ ಕಳೆದ ಮೂರು ತಿಂಗಳಲ್ಲಿ ಜಾಗತಿಕವಾಗಿ ಅತ್ಯಂತ ಸಮಯಪಾಲನೆ ವಿಮಾನ ನಿಲ್ದಾಣವಾಗಿ ಹೊರಹೊಮ್ಮಿದೆ.

ಈ ಬಗ್ಗೆ ಸಿರಿಯಮ್ ಸಂಸ್ಥೆ 2023ರ ಸೆಪ್ಟೆಂಬರ್​ನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿದೆ. ವರದಿಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೇ 88.51ರಷ್ಟು ವಿಮಾನಗಳು ಸೆಪ್ಟೆಂಬರ್‌ನಲ್ಲಿ ಸಮಯಕ್ಕೆ ಸರಿಯಾಗಿ ನಿರ್ಗಮಿಸಿವೆ ಎಂದು ತಿಳಿಸಿದೆ. ಅಲ್ಲದೆ ಕಳೆದ ಮೂರು ತಿಂಗಳಲ್ಲಿ ಜಾಗತಿಕವಾಗಿ ಐದು ವಿಮಾನ ನಿಲ್ದಾಣಗಳು ಅಗ್ರ ಸ್ಥಾನದಲ್ಲಿವೆ. ಸಾಲ್ಟ್ ಲೇಕ್ ಸಿಟಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಹೈದರಾಬಾದ್​​​​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮಿನ್ನಿಯಾಪೋಲಿಸ್-ಸೇಂಟ್ ಪಾಲ್​ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಎಲ್​ಡೊರಾಡೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಗ್ರ ಸ್ಥಾನದಲ್ಲಿವೆ.

ಇದನ್ನೂ ಓದಿ: ದಸರಾ 2022: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂಬೆಗಳ ಪ್ರದರ್ಶನ

ಸೆಪ್ಟೆಂಬರ್‌ನಲ್ಲಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶೇ 79.46 ರಷ್ಟು ವಿಮಾನಗಳು ಸಮಯಕ್ಕೆ ಸರಿಯಾಗಿ ಬರುತ್ತಿವೆ. ಏವಿಯೇಷನ್ ಅನಾಲಿಟಿಕ್ಸ್ ಸಂಸ್ಥೆಯು ವಿಮಾನ ನಿಲ್ದಾಣಗಳನ್ನು ನಾಲ್ಕು ವಿಭಿನ್ನ ವರ್ಗಗಳಲ್ಲಿ ವರ್ಗೀಕರಿಸಿದೆ. ಜಾಗತಿಕ ವಿಮಾನ ನಿಲ್ದಾಣ (25-40 ಮಿಲಿಯನ್ ಆಸನಗಳು), ದೊಡ್ಡ ವಿಮಾನ ನಿಲ್ದಾಣ (25-40 ಮಿಲಿಯನ್ ಆಸನಗಳು), ಮಧ್ಯಮ ವಿಮಾನ ನಿಲ್ದಾಣ (15-25 ಮಿಲಿಯನ್ ಆಸನಗಳು), ಸಣ್ಣ ವಿಮಾನ ನಿಲ್ದಾಣ (5-15 ಮಿಲಿಯನ್ ಆಸನಗಳು).

ದೊಡ್ಡ ವಿಮಾನ ನಿಲ್ದಾಣದ ಪಟ್ಟಿಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ಕೂಡ ಸೇರಿದೆ. ಇದು ಕಳೆದ ಮೂರು ತಿಂಗಳುಗಳಲ್ಲಿ ಉನ್ನತ ಮಟ್ಟದ ವಿಮಾನ ನಿಲ್ದಾಣವಾಗಿ ಹೊರಹೊಮ್ಮಿದೆ. ಕೆಐಎ ದೇಶದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ. 2022-2023 ಅವಧಿಯಲ್ಲಿ, ಇದು ಸುಮಾರು 31.91 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸಿದೆ. ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸೆಪ್ಟೆಂಬರ್‌ಗೆ ದೊಡ್ಡ ವಿಮಾನ ನಿಲ್ದಾಣ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮಧ್ಯಮ ಮತ್ತು ಸಣ್ಣ ವಿಮಾನ ನಿಲ್ದಾಣಗಳ ವಿಭಾಗಗಳಲ್ಲಿ ಅಗ್ರ ಐದು ಸ್ಥಾನಗಳಲ್ಲಿ ಯಾವುದೇ ಭಾರತೀಯ ವಿಮಾನ ನಿಲ್ದಾಣಗಳು ಇಲ್ಲ.

ಭಾರತವು ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ವಾಯುಯಾನ ಮಾರುಕಟ್ಟೆಗಳಲ್ಲಿ ಒಂದಾಗಿದೆ. ದೇಶೀಯ ಮತ್ತು ಅಂತರಾಷ್ಟ್ರೀಯ ಸೌಲಭ್ಯಗಳನ್ನು ಒಳಗೊಂಡಂತೆ ಜಾಗತಿಕವಾಗಿ ಹೆಚ್ಚಿನ ದೇಶಗಳಿಗಿಂತ ಭಾರತವು ಕಳೆದ ದಶಕದಲ್ಲಿ ಹೆಚ್ಚಿನ ವಿಮಾನ ನಿಲ್ದಾಣಗಳನ್ನು ನಿರ್ಮಿಸಿದೆ. DGCA ಯ ಮಾಹಿತಿಯ ಪ್ರಕಾರ, ನವೆಂಬರ್ 2022 ರಲ್ಲಿ 115 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ದೇಶೀಯ ವಿಮಾನಗಳಲ್ಲಿ ಪ್ರಯಾಣಿಸಿದ್ದಾರೆ. ಕಳೆದ ವರ್ಷವೂ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನನಿಲ್ದಾಣಗಳು ಸಮಯಪಾಲನೆಯಲ್ಲಿ ಜಾಗತಿಕವಾಗಿ ಅಗ್ರಸ್ಥಾನದಲ್ಲಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ