AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Statue of Prosperity: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಇಂದು ಅನಾವರಣಗೊಳಿಸಲಿರುವ 218 ಟನ್ ತೂಕದ ಕೆಂಪೇಗೌಡರ ಪ್ರತಿಮೆಯ ವೈಶಿಷ್ಟ್ಯ ಹೀಗಿದೆ

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು 218 ಟನ್ ತೂಕದ ಕೆಂಪೇಗೌಡರ ಪ್ರತಿಮೆ(Kempegowda Statue)ಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.10ಕ್ಕೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮ ನೆರವೇರಲಿದೆ. 64 ಕೋಟಿ ವೆಚ್ಚದಲ್ಲಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗಿದೆ.

Statue of Prosperity: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಇಂದು ಅನಾವರಣಗೊಳಿಸಲಿರುವ 218 ಟನ್ ತೂಕದ ಕೆಂಪೇಗೌಡರ ಪ್ರತಿಮೆಯ ವೈಶಿಷ್ಟ್ಯ ಹೀಗಿದೆ
Kempegowda Statue
TV9 Web
| Edited By: |

Updated on:Nov 11, 2022 | 9:45 AM

Share

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು 218 ಟನ್ ತೂಕದ ಕೆಂಪೇಗೌಡರ ಪ್ರತಿಮೆ(Kempegowda Statue)ಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.10ಕ್ಕೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮ ನೆರವೇರಲಿದೆ. 64 ಕೋಟಿ ವೆಚ್ಚದಲ್ಲಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ನಿರ್ಮಿಸಲಾಗಿದ್ದು, ಹಾಗೆಯೇ 20 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್​ ನಿರ್ಮಿಸಲಾಗಿದೆ. ಕೆಂಪೇಗೌಡ ಪ್ರತಿಮೆ, ಥೀಮ್ ಪಾರ್ಕ್​ಗೆ ಒಟ್ಟು 84 ಕೋಟಿ ರೂ. ವೆಚ್ಚ ತಗುಲಿದೆ. ವರ್ಲ್ಡ್​ ಬುಕ್ ಆಫ್​ ರೆಕಾರ್ಡ್ಸ್ ಸೇರಿದ ಕೆಂಪೇಗೌಡರ ಪ್ರತಿಮೆ

ಕೆಂಪೇಗೌಡ ಕಂಚಿನ ಪ್ರತಿಮೆಯ ಒಟ್ಟು ತೂಕ 218 ಟನ್ ಆಗಿದ್ದು, ಪ್ರತಿಮೆಯ ಖಡ್ಗದ ತೂಕ 4 ಟನ್​​ ಇದೆ. 23 ಎಕರೆಯಲ್ಲಿ ಕೆಂಪೇಗೌಡ ಥೀಮ್ ಪಾರ್ಕ್​ ನಿರ್ಮಾಣ ನಿರ್ಮಿಸಲಾಗಿದ್ದು, ಮದ್ಯಾಹ್ನ 12.10 ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ.

ನಾಡಪ್ರಭು ಕೆಂಪೇಗೌಡರ 108 ಪ್ರಗತಿ ಪ್ರತಿಮೆ ನಿರ್ಮಾಣಕ್ಕೆ ಜೂನ್ 26 2020 ರಂದು ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದ್ದರು. ಸುಮಾರು 84 ಕೋಟಿ ರೂ. ವೆಚ್ಚದಲ್ಲಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಈ ಪ್ರತಿಮೆ 108 ಅಡಿ ಎತ್ತರದಲ್ಲಿದೆ.

ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರತಿಮೆಯ ಕೆಲಸಕ್ಕೆ ಮತ್ತಷ್ಟು ಚುರುಕು ದೊರೆತಿತ್ತು. ಈ ಪ್ರತಿಮೆಗೆ 98 ಟನ್‌ ಕಂಚು ಮತ್ತು 120 ಟನ್ ಹುಕ್ಕು ಬಳಕೆ ಮಾಡಲಾಗಿದೆ. ಕೆಂಪೇಗೌಡರ‌ ಖಡ್ಗವೇ ಬರೋಬ್ಬರಿ 4000 ಸಾವಿರ ಕೆಜಿ ತೂಕವಿದೆ.

ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಬರೋಬ್ಬರು 2 ವರ್ಷ 5 ತಿಂಗಳ ಸಮಯ ತೆಗೆದುಕೊಂಡಿದ್ದರು. 85 ಎಂಜಿನಿಯರ್​ಗಳು ಕೆಲಸ ಮಾಡಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:33 am, Fri, 11 November 22

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ