ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ: ನಿರ್ಮಲಾನಂದನಾಥ ಶ್ರೀ ಭೇಟಿ ಮಾಡಿದ ಸಚಿವ ಅಶ್ವತ್ಥ್​ ನಾರಾಯಣ

ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಶ್ರೀಗಳ ಜತೆ ಚರ್ಚೆ ಮಾಡಿದ್ದು, ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ: ನಿರ್ಮಲಾನಂದನಾಥ ಶ್ರೀ ಭೇಟಿ ಮಾಡಿದ ಸಚಿವ ಅಶ್ವತ್ಥ್​ ನಾರಾಯಣ
ನಿರ್ಮಲಾನಂದನಾಥಶ್ರೀ ಜತೆ ಸಚಿವ ಅಶ್ವತ್ಥ್​ ನಾರಾಯಣ ಚರ್ಚೆ.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 17, 2022 | 9:21 PM

ಬೆಂಗಳೂರು: ನ.11ರಂದು ಕೆಂಪೇಗೌಡ ಏರ್ ಪೋರ್ಟ್ (kempegowda airport) ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ನಿರ್ಮಲಾನಂದನಾಥ ಶ್ರೀ (nirmalanandanath Swamiji) ಜತೆ ಸಚಿವ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಅಶ್ವತ್ಥ್​ ನಾರಾಯಣ ಇಂದು (ಅ.17) ಸಮಾಲೋಚನೆ ನಡೆಸಿದರು. ಸಿಎಂ ಸೂಚನೆ ಮೇರೆಗೆ ಶ್ರೀಗಳ ಜತೆ ಚರ್ಚೆ ಮಾಡಿದ್ದು, ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಯಶಸ್ವಿಗೆ ಸಕಲ ಸಹಕಾರದ ಬಗ್ಗೆ ಮಠ, ಸಮುದಾಯದ ಪರವಾಗಿ ಸಚಿವರಿಗೆ ಸ್ವಾಮೀಜಿ ಭರವಸೆ ನೀಡಿದರು. ನ.11ರಂದು ಕೆಂಪೇಗೌಡ ಏರ್​​ಪೋರ್ಟ್ ಮುಂದೆ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ರಾಜ್ಯಾದ್ಯಂತ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ: ಸಿಎಂ ಬೊಮ್ಮಾಯಿ ಸೂಚನೆ

ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ರಥಗಳು ಸಿದ್ದವಾಗಿದ್ದು, ಅಕ್ಟೋಬರ್​ 21ರಂದು ವಿಧಾನಸೌಧದ ಮುಂಭಾಗ ರಥಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದರೆ. ಅಭಿಯಾನ ಯಶಸ್ವಿ ಆಗುವಂತೆ ವಿಧಾನಸೌಧದಲ್ಲಿ ಇಂದು ನಡೆದ ಡಿಸಿಗಳ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ಅಭಿಯಾನದ ಯಶಸ್ಸಿಗೆ ಎಲ್ಲರೂ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

ಪ್ರಧಾನಿ ಮೋದಿ ರಾಜ್ಯ ಭೇಟಿ ಒಂದು ದಿನ ಮುಂದೂಡಿಕೆ

ಪ್ರಧಾನಿ ಮೋದಿ ರಾಜ್ಯ ಭೇಟಿ ಒಂದು ದಿನ ಮುಂದೂಡಿಕೆಯಾಗಿದ್ದು, ನ.10ರ ಬದಲು ನ.11ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದಿಂದ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ನ.11ರಂದು ಕೆಂಪೇಗೌಡ ಏರ್​​​ಪೋರ್ಟ್​ ಮುಂಭಾಗ ಕೆಂಪೇಗೌಡ ಪ್ರತಿಮೆ, ಏರ್​​ಪೋರ್ಟ್​ ಟರ್ಮಿನಲ್​​-2ನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿಂದೆ ನ.10ರಂದು ಉದ್ಘಾಟನಾ ಕಾರ್ಯಕ್ರಮ ನಿಗದಿ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:09 pm, Mon, 17 October 22

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ