ಬೆಂಗಳೂರು: ನ.11ರಂದು ಕೆಂಪೇಗೌಡ ಏರ್ ಪೋರ್ಟ್ (kempegowda airport) ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ನಿರ್ಮಲಾನಂದನಾಥ ಶ್ರೀ (nirmalanandanath Swamiji) ಜತೆ ಸಚಿವ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಅಶ್ವತ್ಥ್ ನಾರಾಯಣ ಇಂದು (ಅ.17) ಸಮಾಲೋಚನೆ ನಡೆಸಿದರು. ಸಿಎಂ ಸೂಚನೆ ಮೇರೆಗೆ ಶ್ರೀಗಳ ಜತೆ ಚರ್ಚೆ ಮಾಡಿದ್ದು, ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಯಶಸ್ವಿಗೆ ಸಕಲ ಸಹಕಾರದ ಬಗ್ಗೆ ಮಠ, ಸಮುದಾಯದ ಪರವಾಗಿ ಸಚಿವರಿಗೆ ಸ್ವಾಮೀಜಿ ಭರವಸೆ ನೀಡಿದರು. ನ.11ರಂದು ಕೆಂಪೇಗೌಡ ಏರ್ಪೋರ್ಟ್ ಮುಂದೆ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ರಾಜ್ಯಾದ್ಯಂತ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ: ಸಿಎಂ ಬೊಮ್ಮಾಯಿ ಸೂಚನೆ
ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ರಥಗಳು ಸಿದ್ದವಾಗಿದ್ದು, ಅಕ್ಟೋಬರ್ 21ರಂದು ವಿಧಾನಸೌಧದ ಮುಂಭಾಗ ರಥಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದರೆ. ಅಭಿಯಾನ ಯಶಸ್ವಿ ಆಗುವಂತೆ ವಿಧಾನಸೌಧದಲ್ಲಿ ಇಂದು ನಡೆದ ಡಿಸಿಗಳ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ಅಭಿಯಾನದ ಯಶಸ್ಸಿಗೆ ಎಲ್ಲರೂ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.
ಪ್ರಧಾನಿ ಮೋದಿ ರಾಜ್ಯ ಭೇಟಿ ಒಂದು ದಿನ ಮುಂದೂಡಿಕೆ
ಪ್ರಧಾನಿ ಮೋದಿ ರಾಜ್ಯ ಭೇಟಿ ಒಂದು ದಿನ ಮುಂದೂಡಿಕೆಯಾಗಿದ್ದು, ನ.10ರ ಬದಲು ನ.11ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದಿಂದ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ನ.11ರಂದು ಕೆಂಪೇಗೌಡ ಏರ್ಪೋರ್ಟ್ ಮುಂಭಾಗ ಕೆಂಪೇಗೌಡ ಪ್ರತಿಮೆ, ಏರ್ಪೋರ್ಟ್ ಟರ್ಮಿನಲ್-2ನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿಂದೆ ನ.10ರಂದು ಉದ್ಘಾಟನಾ ಕಾರ್ಯಕ್ರಮ ನಿಗದಿ ಆಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:09 pm, Mon, 17 October 22