AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಹೊಸ ರೂಲ್ಸ್​: ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ್ರೆ ದಂಡ ಫಿಕ್ಸ್​​

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಪ್ರಯಾಣಿಕರ ಸುರಕ್ಷತೆ, ಆಗಮನ-ನಿರ್ಗಮನದ ವೇಳೆ ಉಂಟಾಗುತ್ತಿರುವ ಟ್ರಾಫಿಕ್​​ ಸುಧಾರಿಸಲು ಕ್ರಮ ಕೈಗೊಳ್ಳಲಾಗಿದೆ. ಪಾರ್ಕಿಂಗ್​​ ವಿಚಾರದಲ್ಲೂ ಒಂದಿಷ್ಟು ಬದಲಾವಣೆ ಮಅಡಲಾಗಿದ್ದು, ನಿಯಮ ಮೀರಿದ್ರೆ ದಂಡಾಸ್ತ್ರ ಪ್ರಯೋಗವಾಗಲಿದೆ.

ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಹೊಸ ರೂಲ್ಸ್​: ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ್ರೆ ದಂಡ ಫಿಕ್ಸ್​​
ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಹೊಸ ರೂಲ್ಸ್
ಪ್ರಸನ್ನ ಹೆಗಡೆ
|

Updated on: Dec 02, 2025 | 3:43 PM

Share

ಬೆಂಗಳೂರು, ಡಿಸೆಂಬರ್​​ 02: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಹೊಸ ನಿಯಮಗಳನ್ನು ಪರಿಚಯಿಸಲಾಗಿದೆ. ಡಿಸೆಂಬರ್ 8, 2025ರಿಂದ ಇವು ಜಾರಿಗೆ ಬರಲಿವೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತದ 3ನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿದ್ದು, ಪ್ರತಿದಿನ ಸುಮಾರು 1,30,000 ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿದೆ. ಈ ಹಿನ್ನಲೆ ಸುಮಾರು 1 ಲಕ್ಷ ವಾಹನಗಳು ಪ್ರತಿದಿನ ಏರ್​​ಪೋರ್ಟ್​​ ಮಾರ್ಗದಲ್ಲಿ ಸಂಚಾರ ನಡೆಸುತ್ತವೆ. ಇದರಿಂದ ವಿಶೇಷವಾಗಿ ಟರ್ಮಿನಲ್‌ಗಳ ಮುಂಭಾಗ ಇರುವ ಕರ್ಬ್‌ಸೈಡ್‌ನಲ್ಲಿ (ಡ್ರಾಪ್-ಆಫ್ ಮತ್ತು ಪಿಕ್-ಅಪ್ ಮಾರ್ಗಗಳು) ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಪ್ರಯಾಣಿಕರ ಅನುಕೂಲ, ಸಂಚಾರ ದಟ್ಟಣೆಯನ್ನು ಸರಾಗಗೊಳಿಸುವ ನಿಟ್ಟಿನಲ್ಲಿ ಒಂದಿಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ:  ಕೆಂಪೇಗೌಡ ಏರ್ಪೋಟ್​​ನಲ್ಲಿ ಮಿತಿ ಮೀರಿದ ಸೈಡ್ ಪಿಕಪ್ ಚಾಲಕರ ಹಾವಳಿ; ಲಾಂಗ್​​ ಹಿಡಿದು ಅಟ್ಟಾಡಿಸಿದ ಭೂಪ ಅರೆಸ್ಟ್

ವಿಮಾನ ನಿಲ್ದಾಣಕ್ಕೆ ಬರುವ ಮಾರ್ಗದಲ್ಲಿ ಖಾಸಗಿ ಕಾರುಗಳು ಮತ್ತು ಕ್ಯಾಬ್‌ಗಳ ದೀರ್ಘಕಾಲದ ಕಾಯುವಿಕೆಯಿಂದ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಿದೆ. ಇದರಿಂದ ಇತರೆ ವಾಹನಗಳ ಸಂಚಾರಕ್ಕೂ ಅಡ್ಡಿ ಉಂಟಾಗುತ್ತಿದೆ. ಹೀಗಾಗಿ ಅನಧಿಕೃತ ಪಾರ್ಕಿಂಗ್ ತಡೆಯಲು ಮತ್ತು ಕಾಯುವಿಕೆಯ ಸಮಯವನ್ನು ಕಡಿಮೆ ಮಾಡಲು ಪ್ರತ್ಯೇಕ ಪಥ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಇದು ಕರ್ಬ್‌ಸೈಡ್‌ನಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವ ಜೊತೆಗೆ, ಟರ್ಮಿನಲ್‌ಗಳ ಮುಂದೆ ಪಿಕ್-ಅಪ್ ವಲಯದ ದುರುಪಯೋಗ ತಡೆಯಲೂ ನೆರೆವಾಗಲಿದೆ.

ಹೊಸ ಪ್ರತ್ಯೇಕ ಪಥ ವ್ಯವಸ್ಥೆಯ ಪ್ರಕಾರ, ಟರ್ಮಿನಲ್​​ 1 ಮತ್ತು ಟರ್ಮಿನಲ್​​ 2ರಲ್ಲಿ ನಿಗದಿಪಡಿಸಿದ ಪಿಕ್-ಅಪ್ ವಲಯಕ್ಕೆ ಆಗಮಿಸುವ ಎಲ್ಲಾ ಖಾಸಗಿ ಕಾರುಗಳಿಗೆ (ಬಿಳಿ ಬೋರ್ಡ್) ಪ್ರವೇಶ ಉಚಿತವಾಗಿರುತ್ತದೆ. ವಾಹನ‌ ನಿಲುಗಡೆಗೆ 8 ನಿಮಿಷಗಳ ಕಾಲ ಅವಕಾಶ ಸಿಗಲಿದ್ದು, ಸಮಯ ಮಿತಿ ಮೀರಿದರೆ ಅಂತಹ ವಾಹನಗಳಿಗೆ ಶುಲ್ಕ ವಿಧಿಸಲಾಗುತ್ತದೆ.

ಶುಲ್ಕ ಎಷ್ಟು?

  • 8-13 ನಿಮಿಷಗಳ ಕಾಲ 150 ರೂ.
  • 13-18 ನಿಮಿಷಗಳಿಗೆ 300 ರೂ.
  • 18 ನಿಮಿಷಗಳಿಗಿಂತ ಹೆಚ್ಚು ಕಾಲ ವಾಹನ ನಿಲ್ಲಿಸಿದರೆ ಹತ್ತಿರದ ಪೊಲೀಸ್ ಠಾಣೆಗೆ ಟೋಯಿಂಗ್‌

ಇನ್ನು ಹಳದಿ ಬೋರ್ಡ್ ಟ್ಯಾಕ್ಸಿ ಮತ್ತು ಎಲೆಕ್ಟ್ರಿಕ್ ಕ್ಯಾಬ್‌ಗಳು ಸೇರಿದಂತೆ ಎಲ್ಲಾ ವಾಣಿಜ್ಯ ವಾಹನಗಳು ನಿಗದಿಪಡಿಸಿದ ಪಾರ್ಕಿಂಗ್ ವಲಯಗಳಲ್ಲಿ ಮಾತ್ರ ಪ್ರಯಾಣಿಕರಿಗಾಗಿ ಕಾಯಬೇಕು. ಸುಗಮ ಪಿಕ್-ಅಪ್ ಅನುಭವವನ್ನು ಒದಗಿಸಲು, ಪಾರ್ಕಿಂಗ್‌ನ ಮೊದಲ 10 ನಿಮಿಷಗಳು ಉಚಿತವಾಗಿರುತ್ತವೆ. ಟರ್ಮಿನಲ್ 1ಕ್ಕೆ ಆಗಮಿಸುವ ವಾಣಿಜ್ಯ ವಾಹನಗಳು ಪಿ3 ಮತ್ತು ಪಿ4 ಪಾರ್ಕಿಂಗ್ ವಲಯಗಳಿಗೆ ತೆರಳಬೇಕು. ಟರ್ಮಿನಲ್ 2ಗೆ ಸೇವೆ ಸಲ್ಲಿಸುವ ವಾಹನಗಳು ಪಿ2 ಪಾರ್ಕಿಂಗ್ ವಲಯಕ್ಕೆ ತೆರಳಬೇಕಾಗುತ್ತದೆ.

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಲೇ ಇರುವುದರಿಂದ, ಪಿಕ್-ಅಪ್ ವಲಯಗಳಲ್ಲಿ ಶಿಸ್ತು ಕಾಪಾಡಿಕೊಳ್ಳುವುದು ಅತ್ಯಗತ್ಯ. ಈ ಕ್ರಮದಿಂದ ಪ್ರಯಾಣಿಕರ ಸುರಕ್ಷತೆ, ಸುಗಮ ಆಗಮನ ಹಾಗೂ ನಿರ್ಗಮನಕ್ಕೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್‌) ಎಂ.ಡಿ. ಮತ್ತು ಸಿಇಒ ಹರಿ ಮರಾರ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ