AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತ; ಬಿಬಿಎಂಪಿ ಚುನಾವಣೆ ಬಹಿಷ್ಕರಿಸಿದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು

ಏರ್‌ಪೋರ್ಟ್, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿದೆ. ಏರ್ಪೋಟ್, ಕೋಗಿಲು, ಯಲಹಂಕ ಮತ್ತು ಸಿಟಿ ಕಡೆ ಹೋಗಲು ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ಸಂಚಾರ ಮಾಡಲು ಹೋಗಿ ವಾಹನಗಳು ಕೆಟ್ಟು ಹೋಗುತ್ತಿವೆ.

ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತ; ಬಿಬಿಎಂಪಿ ಚುನಾವಣೆ ಬಹಿಷ್ಕರಿಸಿದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು
Karnataka Weather Today Winter Continues in Karnataka till New Year Rain Expected in Punjab, Haryana
TV9 Web
| Edited By: ಆಯೇಷಾ ಬಾನು|

Updated on: Nov 22, 2021 | 10:10 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ವರುಣನ ರೌದ್ರ ರೂಪ ಕಂಡಂತಾಗಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನ ಜೀವನ ತತ್ತರಿಸಿದೆ. ಭಾರಿ ಮಳೆಯಿಂದಾಗಿ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತಗೊಂಡಿದ್ದು ಕೋಗಿಲು ಕ್ರಾಸ್‌ನ 3 ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಏರ್‌ಪೋರ್ಟ್, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿದೆ. ಏರ್ಪೋಟ್, ಕೋಗಿಲು, ಯಲಹಂಕ ಮತ್ತು ಸಿಟಿ ಕಡೆ ಹೋಗಲು ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ಸಂಚಾರ ಮಾಡಲು ಹೋಗಿ ವಾಹನಗಳು ಕೆಟ್ಟು ಹೋಗುತ್ತಿವೆ.

3 ದಿನದಿಂದ ಜಲಾವೃತವಾಗುತ್ತಿರುವ ಅಪಾರ್ಟ್‌ಮೆಂಟ್‌ ಇನ್ನು ಮತ್ತೊಂದೆಡೆ ಬೆಂಗಳೂರಿನ ಯಲಹಂಕದ ಅಪಾರ್ಟ್‌ಮೆಂಟ್‌ 3 ದಿನದಿಂದ ಜಲಾವೃತಗೊಂಡಿದೆ. ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಜಲಾವೃತಗೊಂಡಿದೆ. ರಾತ್ರಿ ಸುರಿದ ಭಾರಿ ಮಳೆಗೆ ಕೆರೆಯ ನೀರು ನುಗ್ಗಿ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಅಲ್ಲದೆ ನೀರಿನ ಜೊತೆಯಲ್ಲಿ ಹಾವು, ಚೇಳುಗಳು ಬಂದ ಹಿನ್ನೆಲೆ ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ಆತಂಕ ಕೂಡ ಹೆಚ್ಚಾಗಿದೆ.

ವಿದ್ಯಾರಣ್ಯಪುರದಲ್ಲಿ ಜನರ ಪರದಾಟ ಬೆಂಗಳೂರಿನ ವಿದ್ಯಾರಣ್ಯಪುರದ ನಂಜಪ್ಪ ಬಡಾವಣೆಯ 2 ಅಪಾರ್ಟ್‌ಮೆಂಟ್‌ ಜಲಾವೃತಗೊಂಡಿವೆ. ಮನೆಯಿಂದ ಹೊರಬರಲಾಗದೆ ನಿವಾಸಿಗಳು ಪರದಾಡುತ್ತಿವೆ. 40 ಕ್ಕೂ ಹೆಚ್ಚು ಕುಟುಂಬಗಳಿಗೆ ಜಲದಿಗ್ಭಂದನವಾಗಿದೆ.

ಬಿಬಿಎಂಪಿ ವಿರುದ್ಧ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳ ಆಕ್ರೋಶ ಬಿಬಿಎಂಪಿ ಅಧಿಕಾರಿಗಳು ನಮ್ಮ ನೆರವಿಗೆ ಬರುತ್ತಿಲ್ಲ. ಹೀಗಾಗಿ ನಾವು ಬಿಬಿಎಂಪಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ. ವೋಟ್ ಕೇಳಲು ಮಾತ್ರ ಅಪಾರ್ಟ್‌ಮೆಂಟ್‌ಗೆ ಬರ್ತಾರೆ. ಉಳಿದಂತೆ ನಮ್ಮ ಯಾವುದೇ ಸಮಸ್ಯೆ ಬಗೆಹರಿಸುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರಾತ್ರಿ ಅಬ್ಬರಿಸಿ ಬೊಬ್ಬಿರಿದ ಮಳೆ; ಬಿಟ್ಟೂ ಬಿಡದೆ ಕಾಡುತ್ತಿರೋ ವರುಣ, ಜನ ಹೈರಾಣ

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!