ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತ; ಬಿಬಿಎಂಪಿ ಚುನಾವಣೆ ಬಹಿಷ್ಕರಿಸಿದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು

| Updated By: ಆಯೇಷಾ ಬಾನು

Updated on: Nov 22, 2021 | 10:10 AM

ಏರ್‌ಪೋರ್ಟ್, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿದೆ. ಏರ್ಪೋಟ್, ಕೋಗಿಲು, ಯಲಹಂಕ ಮತ್ತು ಸಿಟಿ ಕಡೆ ಹೋಗಲು ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ಸಂಚಾರ ಮಾಡಲು ಹೋಗಿ ವಾಹನಗಳು ಕೆಟ್ಟು ಹೋಗುತ್ತಿವೆ.

ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತ; ಬಿಬಿಎಂಪಿ ಚುನಾವಣೆ ಬಹಿಷ್ಕರಿಸಿದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು
Karnataka Weather Today Winter Continues in Karnataka till New Year Rain Expected in Punjab, Haryana
Follow us on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ವರುಣನ ರೌದ್ರ ರೂಪ ಕಂಡಂತಾಗಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನ ಜೀವನ ತತ್ತರಿಸಿದೆ. ಭಾರಿ ಮಳೆಯಿಂದಾಗಿ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತಗೊಂಡಿದ್ದು ಕೋಗಿಲು ಕ್ರಾಸ್‌ನ 3 ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಏರ್‌ಪೋರ್ಟ್, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿದೆ. ಏರ್ಪೋಟ್, ಕೋಗಿಲು, ಯಲಹಂಕ ಮತ್ತು ಸಿಟಿ ಕಡೆ ಹೋಗಲು ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ಸಂಚಾರ ಮಾಡಲು ಹೋಗಿ ವಾಹನಗಳು ಕೆಟ್ಟು ಹೋಗುತ್ತಿವೆ.

3 ದಿನದಿಂದ ಜಲಾವೃತವಾಗುತ್ತಿರುವ ಅಪಾರ್ಟ್‌ಮೆಂಟ್‌
ಇನ್ನು ಮತ್ತೊಂದೆಡೆ ಬೆಂಗಳೂರಿನ ಯಲಹಂಕದ ಅಪಾರ್ಟ್‌ಮೆಂಟ್‌ 3 ದಿನದಿಂದ ಜಲಾವೃತಗೊಂಡಿದೆ. ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಜಲಾವೃತಗೊಂಡಿದೆ. ರಾತ್ರಿ ಸುರಿದ ಭಾರಿ ಮಳೆಗೆ ಕೆರೆಯ ನೀರು ನುಗ್ಗಿ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಅಲ್ಲದೆ ನೀರಿನ ಜೊತೆಯಲ್ಲಿ ಹಾವು, ಚೇಳುಗಳು ಬಂದ ಹಿನ್ನೆಲೆ ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ಆತಂಕ ಕೂಡ ಹೆಚ್ಚಾಗಿದೆ.

ವಿದ್ಯಾರಣ್ಯಪುರದಲ್ಲಿ ಜನರ ಪರದಾಟ
ಬೆಂಗಳೂರಿನ ವಿದ್ಯಾರಣ್ಯಪುರದ ನಂಜಪ್ಪ ಬಡಾವಣೆಯ 2 ಅಪಾರ್ಟ್‌ಮೆಂಟ್‌ ಜಲಾವೃತಗೊಂಡಿವೆ. ಮನೆಯಿಂದ ಹೊರಬರಲಾಗದೆ ನಿವಾಸಿಗಳು ಪರದಾಡುತ್ತಿವೆ. 40 ಕ್ಕೂ ಹೆಚ್ಚು ಕುಟುಂಬಗಳಿಗೆ ಜಲದಿಗ್ಭಂದನವಾಗಿದೆ.

ಬಿಬಿಎಂಪಿ ವಿರುದ್ಧ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳ ಆಕ್ರೋಶ
ಬಿಬಿಎಂಪಿ ಅಧಿಕಾರಿಗಳು ನಮ್ಮ ನೆರವಿಗೆ ಬರುತ್ತಿಲ್ಲ. ಹೀಗಾಗಿ ನಾವು ಬಿಬಿಎಂಪಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ. ವೋಟ್ ಕೇಳಲು ಮಾತ್ರ ಅಪಾರ್ಟ್‌ಮೆಂಟ್‌ಗೆ ಬರ್ತಾರೆ. ಉಳಿದಂತೆ ನಮ್ಮ ಯಾವುದೇ ಸಮಸ್ಯೆ ಬಗೆಹರಿಸುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರಾತ್ರಿ ಅಬ್ಬರಿಸಿ ಬೊಬ್ಬಿರಿದ ಮಳೆ; ಬಿಟ್ಟೂ ಬಿಡದೆ ಕಾಡುತ್ತಿರೋ ವರುಣ, ಜನ ಹೈರಾಣ