ಹನುಮಂತಪ್ಪ ಕೊಪ್ಪದ್ ಹೆಸರಿನಲ್ಲಿ ನಿರ್ಮಾಣ ಮಾಡಿದ್ದ ಬಸ್​ ನಿಲ್ದಾಣ ತೆರವು: ಬಿಬಿಎಂಪಿ ವಿರುದ್ಧ ಆಕ್ರೋಶ

ಬೆಂಗಳೂರಿನ ಕೆಂಗೇರಿ ಉಪನಗರ ರಿಂಗ್ ರಸ್ತೆಯಲ್ಲಿ ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಕೊಪ್ಪದ್ ಅವರ ಹೆಸರಿನಲ್ಲಿ ನಿರ್ಮಾಣ ಮಾಡಲಾಗಿರುವ ಬಸ್​​ ನಿಲ್ದಾಣವನ್ನು ತೆರುವುಗೊಳಿಸಲಾಗಿದೆ. ಬಸ್​ ನಿಲ್ದಾಣ ತೆರವುಗೊಳಿಸಿರುವ ಹಿಂದೆ ಷಡ್ಯಂತ್ರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಹನುಮಂತಪ್ಪ ಕೊಪ್ಪದ್ ಹೆಸರಿನಲ್ಲಿ ನಿರ್ಮಾಣ ಮಾಡಿದ್ದ ಬಸ್​ ನಿಲ್ದಾಣ ತೆರವು: ಬಿಬಿಎಂಪಿ ವಿರುದ್ಧ ಆಕ್ರೋಶ
ತೆರವುಗೊಳಿಸಲಾದ ಬಸ್​ ನಿಲ್ದಾಣ
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 15, 2023 | 2:13 PM

ಬೆಂಗಳೂರು, ಡಿಸೆಂಬರ್​​ 15: ನಗರದ ಕೆಂಗೇರಿ (Kengeri) ಉಪನಗರ ರಿಂಗ್ ರಸ್ತೆಯಲ್ಲಿ ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಕೊಪ್ಪದ್ (Hanumantappa Koppad) ಅವರ ಹೆಸರಿನಲ್ಲಿ ಬಸ್​​ ನಿಲ್ದಾಣ (Bus Stand) ನಿರ್ಮಾಣ ಮಾಡಲಾಗಿದೆ. ಆದರೆ ಈಗ ಬಸ್​​ ನಿಲ್ದಾಣ ತೆರುವುಗೊಳಿಸಲಾಗಿದೆ. ಬಸ್​ ನಿಲ್ದಾಣ ತೆರವುಗೊಳಿಸಿರುವ ಹಿಂದೆ ಷಡ್ಯಂತ್ರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಹೌದು ಬಸ್ ನಿಲ್ದಾಣದ ಹಿಂಭಾಗದಲ್ಲಿ ಖಾಸಗಿ ವ್ಯಕ್ತಿಗಳಿಗೆ ಸೇರಿದ ಖಾಲಿ ಜಾಗವಿದೆ.

ಈ ಖಾಲಿ ಜಾಗದ ಮುಂದೆ ಬಸ್ ನಿಲ್ದಾಣ ಇದ್ದಿದ್ದರಿಂದ ಜಾಗದ ಮಾಲೀಕರು ತೆರವು ಮಾಡಿಡುವ ಶಂಕೆ ವ್ಯಕ್ತವಾಗಿದೆ. ಬಸ್ ನಿಲ್ದಾಣವನ್ನು ಬೇಕಂತಲೇ ತರೆವುಗೊಳಿಸಿದ್ದಾರೆ ಎಂದು ಎಂಟಿಎಸ್ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಆರೋಪ ಮಾಡಿದೆ.

ಇದನ್ನೂ ಓದಿ: ಚಾಲಕ ಸ್ಟೇರಿಂಗ್ ತಿರುಗಿಸುತ್ತಿದ್ದರೂ ಚಕ್ರಗಳು ತಿರುಗಲೇ ಇಲ್ಲ! ಗದಗ ಸಾರಿಗೆ ಇಲಾಖೆ‌ಯಲ್ಲಿ ಮತ್ತೊಂದು ಅಧ್ವಾನ

ಈ ಬಗ್ಗೆ ಪೊಲೀಸ್ ಕಮಿಷನರ್​, ಸ್ಥಳೀಯ ಶಾಸಕರಿಗೆ ದೂರು ನೀಡಲು ಎಂಟಿಎಸ್ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ತಯಾರಿ ನಡೆಸಿದೆ. ಇನ್ನು ಬಸ್ ನಿಲ್ದಾಣ ತೆರವಿನಲ್ಲಿ ಬಿಬಿಎಂಪಿಯ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಬಸ್ ನಿಲ್ದಾಣ ತೆರವು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.

2015-16 ರಲ್ಲಿ ಸಂಸದ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಪ್ರದೇಶಾಭಿವೃದ್ಧಿಯ ಸುಮಾರು 10 ಲಕ್ಷ ರೂ. ಅನುದಾನದಲ್ಲಿ ಬಸ್​ ನಿಲ್ದಾಣ ನಿರ್ಮಾಣ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ