ಪ್ರೇಯಸಿಯನ್ನು ಕೊಂದು ಬೇರೆ ಬೇರೆ ರಾಜ್ಯಗಳಲ್ಲಿ ಸುತ್ತಾಡಿ ಕೊನೆಗೆ ಬೆಂಗಳೂರಿನಲ್ಲೇ ಹಂತಕ ಲಾಕ್

ಬೆಂಗಳೂರಿನಲ್ಲಿ ನಡೆದ ಪ್ರಿಯಕರನಿಂದ ಪ್ರೇಮಿಯ ಹತ್ಯೆಯ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಆರವ್ ಹನೋವ್ ಎಂಬಾತ ಬಂಧಿತ. ಅಸ್ಸಾಂ ಮೂಲದ ಮಾಯಾ ಗೊಗೊಯ್ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ, ದೇವನಹಳ್ಳಿ ಬಳಿ ಬಂಧಿಸಲಾಗಿದೆ.

ಪ್ರೇಯಸಿಯನ್ನು ಕೊಂದು ಬೇರೆ ಬೇರೆ ರಾಜ್ಯಗಳಲ್ಲಿ ಸುತ್ತಾಡಿ ಕೊನೆಗೆ ಬೆಂಗಳೂರಿನಲ್ಲೇ ಹಂತಕ ಲಾಕ್
ಪ್ರೇಯಸಿಯನ್ನು ಕೊಂದು ಬೇರೆ ಬೇರೆ ರಾಜ್ಯಗಳಲ್ಲಿ ಸುತ್ತಾಡಿ ಕೊನೆಗೆ ಬೆಂಗಳೂರಿನಲ್ಲೇ ಹಂತಕ ಲಾಕ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 29, 2024 | 7:40 PM

ಬೆಂಗಳೂರು, ನವೆಂಬರ್​ 29: ನಗರದಲ್ಲಿ ಪ್ರಿಯಕರನಿಂದ ಪ್ರಿಯತಮೆಯನ್ನು (Girlfriend) ಬರ್ಬರ ಹತ್ಯೆ ಮಾಡಿ ಹೊರ ರಾಜ್ಯವೆಲ್ಲಾ ಸುತ್ತಾಡುತ್ತಿದ್ದ ಆರೋಪಿ ಕೊನೆಗೆ ದೇವನಹಳ್ಳಿ ಬಳಿ ಪೊಲೀಸರ ಕೈಗೆ ಲಾಕ್​ ಆಗಿದ್ದಾನೆ. ಕೇರಳ ಮೂಲದ ಆರವ್ ಹನೋವ್‌(21) ಬಂಧಿತ ಕೊಲೆ ಆರೋಪಿ. ಅಸ್ಸಾಂ ಮೂಲದ ಪ್ರಿಯತಮೆ ಮಾಯಾ ಗೊಗೊಯ್‌ಳನ್ನು ಕೊಲೆಗೈದಿದ್ದ. ಬಳಿಕ ಹೊರ ರಾಜ್ಯಕ್ಕೆ ಎಸ್ಕೇಪ್ ಆಗಿದ್ದ. ಇದೀಗ  2 ತಂಡಗಳನ್ನು ರಚಿಸಿ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ.

ಇಂದಿರಾನಗರದ ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ನವೆಂಬರ್ 23ರಂದು ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ಒಟ್ಟಿಗೆ ಬಂದಿದ್ದರು. ನಂತರ ಆರವ್ ಹನೋವ್​ ಮಾಯಾ ಗೊಗೊಯ್‌ಳನ್ನು ಕೊಲೆಗೈದಿದ್ದಾರೆ. ಬಳಿಕ ಒಂದು ದಿನ ಮೃತದೇಹದ ಜೊತೆಗೆ ಕಾಲ ಕಳೆದಿದ್ದು, ನ. 26ರ ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಘಟನಾ ಸ್ಥಳದಿಂದ ಎಸ್ಕೇಪ್‌ ಆಗಿದ್ದ. ಸ್ಥಳಕ್ಕೆ ಭೇಟಿ ನೀಡಿದ ಇಂದಿರಾನಗರ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

ಪೂರ್ವ ವಿಭಾಗ ಡಿಸಿಪಿ ದೇವರಾಜ್ ಹೇಳಿದ್ದಿಷ್ಟು

ಈ ಬಗ್ಗೆ ಪೂರ್ವ ವಿಭಾಗ ಡಿಸಿಪಿ ದೇವರಾಜ್ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ್ದು, 4 ದಿನಗಳ ಹಿಂದೆ ಸರ್ವೀಸ್ ಅಪಾರ್ಟ್​ಮೆಂಟ್​ನಲ್ಲಿ ಮಹಿಳೆ ಕೊಲೆ‌ ಆಗಿದೆ. ಆರೋಪಿ ಆರವ್ ಹನೋವ್‌ ಕೇರಳ ಮೂಲದವನು. ಸಿಸಿಟಿವಿಯಲ್ಲಿ ಆತ ಅಪಾರ್ಟ್​ಮೆಂಟ್​ನಿಂದ ಹೊರಗಡೆ ಹೋಗುವುದು ಗೊತ್ತಾಗುತ್ತೆ. ಆತನ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿತ್ತು. ಕೇರಳ, ಉತ್ತರ ಕರ್ನಾಟಕಕ್ಕೆ ತಂಡಗಳನ್ನು ಕಳುಹಿಸಲಾಗಿತ್ತು. ಕೊನೆಗೆ ದೇವನಹಳ್ಳಿ ಬಳಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಭಯಾನಕ ಕೃತ್ಯ; ಪ್ರೇಯಸಿಯನ್ನು ಕೊಂದ 1 ದಿನ ಕಳೆದು ಪರಾರಿಯಾದ ಪ್ರಿಯಕರ!

ವೈಯಕ್ತಿಕ ವಿಚಾರಕ್ಕೆ ಕೊಲೆ ಮಾಡಿದ್ದಾನೆ. ಕೊಲೆ ಮಾಡುವ ಉದ್ದೇಶದಿಂದ ರೂಂಗೆ ಕರೆದುಕೊಂಡು ಹೋಗಿದ್ದಾನೆ. ಹಗ್ಗವನ್ನು ಮೊದಲೇ ಖರೀದಿ ಮಾಡಿದ್ದಾನೆ. ಜೆಪ್ಟೋದಲ್ಲಿ ನೈಲಾನ್, ಚಾಕು ತರಿಸಿಕೊಂಡಿದ್ದ. ಕೊಲೆಯಾದ ಮಹಿಳೆ ಹೆಚ್​ಎಸ್​ಆರ್​ ಲೇಔಟ್ ಕೌನ್ಸಲಿಂಗ್ ಸೆಂಟರ್​ನಲ್ಲಿ ಕೆಲಸ ಮಾಡುತ್ತಿದ್ದರು. ಬೊಂಬಲ್ ಅನ್ನೋ ಆ್ಯಪ್​ ಮೂಲಕ ಪರಿಚಯ ಆಗಿದ್ದಾರೆ. ಆರೋಪಿ ಇಲ್ಲಿಂದ ರೈಲ್ವೆ ಸ್ಟೇಷನ್ ಮೂಲಕ ಉತ್ತರ ಪ್ರದೇಶ, ವಾರಣಾಸಿ ಸೇರಿ ಹಲವು ಕಡೆಗಳಲ್ಲಿ ಹೋಗಿದ್ದಾನೆ. ಕೊನೆಗೆ ದೇವನಹಳ್ಳಿ ಬಳಿ ಬಂದಿದ್ದಾನೆ. ಮಾಹಿತಿ ಪಡೆದು ಬಂಧಿಸಲಾಗಿದೆ. ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

ವರದಿ: ಪ್ರದೀಪ್​ 

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್