AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವನ್ಯಜೀವಿ ಸಫಾರಿ ಬಂದ್​​ ಎಫೆಕ್ಟ್​​: ಕೋಟಿ ಕೋಟಿ ಆದಾಯ ನಷ್ಟ; KETRA ಆತಂಕ

ಕರ್ನಾಟಕದಲ್ಲಿ ವನ್ಯಜೀವಿ ಸಫಾರಿ ನಿಷೇಧದಿಂದ ಪ್ರವಾಸೋದ್ಯಮ ತೀವ್ರ ಸಂಕಷ್ಟದಲ್ಲಿದೆ. ಬಂಡೀಪುರ, ನಾಗರಹೊಳೆಗಳಲ್ಲಿ ಸಫಾರಿ ಸ್ಥಗಿತದಿಂದ ಪ್ರತಿದಿನ ಕೋಟಿಗಟ್ಟಲೆ ಆದಾಯ ನಷ್ಟವಾಗುತ್ತಿದೆ. ಈ ಬಗ್ಗೆ ಪ್ರವಾಸೋದ್ಯಮ ಸಚಿವರಿಗೆ KETRA ಪತ್ರ ಬರೆದಿದ್ದು, ಸರ್ಕಾರದ ನಿರ್ಧಾರದಿಂದ ಸಾವಿರಾರು ಉದ್ಯೋಗಗಳು ಅಪಾಯದಲ್ಲಿವೆ ಮತ್ತು ರಾಜ್ಯದ ಪ್ರವಾಸೋದ್ಯಮಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಎಚ್ಚರಿಸಿದೆ. ಕೂಡಲೇ ಹೆಚ್ಚುವರಿ ಸುರಕ್ಷತಾ ಕ್ರಮಗಳೊಂದಿಗೆ ಸಫಾರಿಗಳನ್ನು ಪುನರಾರಂಭಿಸುವಂತೆ ಮನವಿ ಮಾಡಿದೆ.

ವನ್ಯಜೀವಿ ಸಫಾರಿ ಬಂದ್​​ ಎಫೆಕ್ಟ್​​: ಕೋಟಿ ಕೋಟಿ ಆದಾಯ ನಷ್ಟ; KETRA ಆತಂಕ
ಪ್ರವಾಸೋದ್ಯಮ ಸಚಿವರಿಗೆ KETRA ಪತ್ರ
ಪ್ರಸನ್ನ ಹೆಗಡೆ
|

Updated on: Dec 26, 2025 | 7:03 PM

Share

ಬೆಂಗಳೂರು, ಡಿಸೆಂಬರ್​​ 27: ಬಂಡೀಪುರ ಮತ್ತು ನಾಗರಹೊಳೆಗಳಲ್ಲಿ ಸಫಾರಿಗಳ ಪುನರಾರಂಭಕ್ಕೆ ಒತ್ತಾಯಿಸಿ ಕರ್ನಾಟಕ ಇಕೋ-ಟೂರಿಸಂ ರೆಸಾರ್ಟ್ಸ್ ಅಸೋಸಿಯೇಷನ್ (KETRA) ಪ್ರವಾಸೋದ್ಯಮ ಸಚಿವರಿಗೆ ಪತ್ರ ಬರೆದಿದೆ. ಸಫಾರಿ ಸ್ಥಗಿತವಾಗಿರುವುದರಿಂದ ಉಂಟಾಗುತ್ತಿರುವ ಆರ್ಥಿಕ ಹಾನಿ ಮತ್ತು ಉದ್ಯೋಗ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದು, ಅಗತ್ಯವಿರುವ ಹೆಚ್ಚುವರಿ ಸುರಕ್ಷತಾ ಕ್ರಮಗಳೊಂದಿಗೆ ಸಫಾರಿಯನ್ನ ಮತ್ತೆ ಆರಂಭಿಸಬೇಕೆಂದು ಆಗ್ರಹಿಸಿದೆ.

ಮನವಿ ಪತ್ರದಲ್ಲಿ ಏನಿದೆ?

ನವೆಂಬರ್‌ನಿಂದ ರಾಜ್ಯದಲ್ಲಿ ವನ್ಯಜೀವಿ ಸಫಾರಿಗಳನ್ನು ಸ್ಥಗಿತಗೊಳಿಸಿರುವುದರಿಂದ ಹಲವು ರೀತಿಯ ಸಮಸ್ಯೆಗಳು ಉದ್ಭವಿಸಿವೆ. ಡಿಸೆಂಬರ್‌ನಿಂದ ಫೆಬ್ರವರಿವರೆಗೆ ಇರುವ ಪ್ರವಾಸೋದ್ಯಮದ ಉಚ್ಚ ಕಾಲಾವಧಿಯಲ್ಲಿ ಈ ಕ್ಷೇತ್ರವು ಕೋವಿಡ್-19 ಸಂದರ್ಭ ಉಂಟಾಗಿದ್ದ ಸ್ಥಿತಿಯನ್ನೇ ಅನುಭವಿಸುತ್ತಿದೆ. ಇದು  ಕ್ಷೇತ್ರದ ಅಸ್ತಿತ್ವವನ್ನೇ ಅಪಾಯಕ್ಕೆ ತಳ್ಳಿದೆ. ಪ್ರಸ್ತುತವಾಗಿ ಸಫಾರಿ ಸ್ಥಗಿತಕ್ಕೆ ನೀಡಲಾಗುತ್ತಿರುವ ಕಾರಣಗಳು ವೈಜ್ಞಾನಿಕ ಅಥವಾ ಪ್ರಾಯೋಗಿಕವಾಗಿಲ್ಲ. ಸಫಾರಿಗೂ ಹುಲಿಗಳ ದಾಳಿಗೆ ಹಲವರು ಬಲಿಯಾಗಿರುವುದಕ್ಕೂ ಸಂಬಂಧ ಇಲ್ಲ. ಘಟನಾ ಸ್ಥಳಗಳಿಂದ ನಾಗರಹೊಳೆ ಸಫಾರಿ ವಲಯ ಪ್ರತ್ಯೇಕವಾಗಿದ್ದರೆ, ಬಂಡೀಪುರ ಸುಮಾರು 50-100 ಕಿ.ಮೀ. ದೂರದಲ್ಲಿದೆ.

ಇದನ್ನೂ ಓದಿ: ಸಫಾರಿ ವೇಳೆ ಕಾಣಿಸಿಕೊಂಡ‌ ಭಾರಿ ಗಾತ್ರದ ಹುಲಿ

ಸಫಾರಿಗಳ ಸ್ಥಗಿತದಿಂದಾಗಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳ  ದೈನಂದಿನ ಆದಾಯದಲ್ಲಿ ಭಾರಿ ನಷ್ಟ ಉಂಟಾಗಿದೆ. ಜಂಗಲ್ ಲಾಡ್ಜಸ್ ಆ್ಯಂಡ್​​ ರೆಸಾರ್ಟ್ಸ್ ದಿನಕ್ಕೆ ಅಂದಾಜು 30 ಲಕ್ಷ ನಷ್ಟ ಅನುಭವಿಸುತ್ತಿದೆ. ಅರಣ್ಯ ಇಲಾಖೆಗೆ ದಿನಕ್ಕೆ ಸಫಾರಿ ಶುಲ್ಕ ರೂಪದಲ್ಲಿ ಬರುತ್ತಿದ್ದ ಅಂದಾಜು 30 ಲಕ್ಷ ಆದಾಯ ನಿಂತಿದೆ. ರಾಜ್ಯದ ಖಜಾನೆಗೆ ದಿನಕ್ಕೆ ಅಂದಾಜು 60-70 ಲಕ್ಷ ಜಿಎಸ್​ಟಿ ಹಣ ಖೋತಾ ಆಗುತ್ತಿದ್ದು, ಒಟ್ಟು ಮೂರು ಕೋಟಿ ರೂ.ಗಳಿಗಿಂತ ಹೆಚ್ಚಿನ ಆದಾಯದ ಮೇಲೆ ಪರಿಣಾಮ ಉಂಟಾಗಿದೆ.

ಸಂಕಷ್ಟದಲ್ಲಿ 4 ಸಾವಿರ ಉದ್ಯೋಗಿಗಳ ಜೀವನ

ಸಫಾರಿ ಕ್ಷೇತ್ರವು ಸುಮಾರು 8,000 ಜನರಿಗೆ ಉದ್ಯೋಗ ಒದಗಿಸುತ್ತಿದ್ದು, ಇವರಲ್ಲಿ ಶೇ. 80ರಷ್ಟು ಜನರು ಅರಣ್ಯ ಪ್ರದೇಶಗಳ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆದಿವಾಸಿ ಸಮುದಾಯಗಳಿಗೆ ಸೇರಿದವರು. ಸಫಾರಿ ಬಂದ್​​ ಆಗಿರುವ ಕಾರಣ ಮುಂದಿನ 30 ದಿನಗಳಲ್ಲಿ 1,200–1,500 ದಿನಗೂಲಿ ಮತ್ತು ಒಪ್ಪಂದ ಆಧಾರಿತ ಉದ್ಯೋಗಗಳು ನಷ್ಟವಾಗುವ ಸಾಧ್ಯತೆ ಇದೆ. ಇದು ಹೀಗೆ ಮುಂದುವರಿದರೆ ನಿಯಮಿತ ಸಿಬ್ಬಂದಿಯನ್ನು ಒಳಗೊಂಡಂತೆ ಸುಮಾರು 4,000 ಜನರ ಜೀವನ ಸಂಕಷ್ಟಕ್ಕೆ ಸಿಲುಕಲಿದೆ.

ವನ್ಯಜೀವಿ ಪ್ರವಾಸೋದ್ಯಮ ದಕ್ಷಿಣ ಭಾರತದ  ಮೂಲಸ್ತಂಭ. ಹೀಗಿರುವಾಗ ಅಂತರಾಷ್ಟ್ರೀಯ ಪ್ರವಾಸೋದ್ಯಮ ಸಂಯೋಜಕರು ಈಗಾಗಲೇ ವಿದೇಶಿ ಪ್ರವಾಸಿಗರನ್ನು ಕರ್ನಾಟಕ ಬಿಟ್ಟು ಬೇರೆಡೆಗೆ ಕರೆದೊಯ್ಯಲು ಆರಂಭಿಸಿದ್ದಾರೆ. ಈ ರೀತಿಯ ಪ್ರವಾಸಗಳು ಸಾಮಾನ್ಯವಾಗಿ 3–6 ತಿಂಗಳು ಮುಂಚಿತವಾಗಿ ಯೋಜಿಸಲಾಗುತ್ತವೆ. ಆದರೆ ಹಠಾತ್ ಆಗಿ ಅವು ರದ್ದಾದಾಗ ಜಾಗತಿಕ ಮಟ್ಟದಲ್ಲಿ ನಕಾರಾತ್ಮಕ ವಿಮರ್ಶೆಗಳಿಗೆ ಒಳಗಾಗಿ, ಕರ್ನಾಟಕದ ಹೆಸರಿಗೆ ಚ್ಯುತಿ ಬರಲಿದೆ ಎಂದು  KETRA ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!