ವಿಧಾನಸೌಧಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯೇ ಗುಂಡಿಮಯ: ಇಲ್ಲಿ ಕೊಂಚ ಯಾಮಾರಿದರೂ ಅಪಘಾತ ಫಿಕ್ಸ್​​!

ರಾಜ್ಯದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಸಂಪರ್ಕ ಕಲ್ಪಿಸುವ ಕೆ.ಆರ್. ಸರ್ಕಲ್ ಮಾರ್ಗದ ಪ್ರಮುಖ ರಸ್ತೆ ಬೃಹತ್ ಗುಂಡಿಗಳಿಂದ ತುಂಬಿದ್ದು, ನಿತ್ಯ ಸಂಚರಿಸುವ ವಾಹನ ಸವಾರರಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ. ಕೆಂಪೇಗೌಡ ರೈಲ್ವೆ ನಿಲ್ದಾಣದಿಂದ ಹೊರಬರುವ ಸಾವಿರಾರು ಪ್ರಯಾಣಿಕರು ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ಕೆ.ಆರ್.ಸರ್ಕಲ್ ಮೂಲಕ ಕಾರ್ಪೊರೇಷನ್ ಹಾಗೂ ವಿಧಾನಸೌಧಕ್ಕೆ ತೆರಳುವ ವಾಹನಗಳಿಗೆ ಇದೇ ಪ್ರಮುಖ ಸಂಪರ್ಕ ಮಾರ್ಗ. ಆದರೆ ಇಂತಹ ಪ್ರಮುಖ ರಸ್ತೆಯಲ್ಲೇ ಬೃಹತ್ ಗುಂಡಿಗಳು ಬಾಯ್ತೆರೆದು ನಿಂತಿವೆ.

ವಿಧಾನಸೌಧಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯೇ ಗುಂಡಿಮಯ: ಇಲ್ಲಿ ಕೊಂಚ ಯಾಮಾರಿದರೂ ಅಪಘಾತ ಫಿಕ್ಸ್​​!
ರಸ್ತೆ ಗುಂಡಿಗಳು
Edited By:

Updated on: Nov 19, 2026 | 7:12 PM

ಬೆಂಗಳೂರು, ನವೆಂಬರ್​​ 19: ರಾಜ್ಯದ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯೇ ಸಂಪೂರ್ಣ ಗುಂಡಿಮಯವಾಗಿದ್ದು, ಆಡಳಿತ ವ್ಯವಸ್ಥೆಗೆ ಪ್ರತಿನಿತ್ಯ ಹಿಡಿಶಾಪ ಹಾಕುತ್ತ ವಾಹನ ಸವಾರರು ಸಂಚರಿಸಬೇಕಾದ ಸ್ಥಿತಿ ಉದ್ಭವಿಸಿದೆ. ಕೆಂಪೇಗೌಡ ರೈಲ್ವೆ ನಿಲ್ದಾಣದಿಂದ ಕೆ.ಆರ್. ಸರ್ಕಲ್ ಮೂಲಕ ಕಾರ್ಪೊರೇಷನ್ ಹಾಗೂ ವಿಧಾನಸೌಧಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲೇ ಅಪಾಯಕಾರಿ ಗುಂಡಿಗಳು ನಿರ್ಮಾಣವಾಗಿದ್ದು, ಮೇಲ್ಸೇತುವೆಯಿಂದ ಕೆಳಗಿಳಿಯುತ್ತಿದ್ದಂತೆ ಎದುರಾಗುವ ಇವು ಮೃತ್ಯುಕೂಪವಾಗಿ ಪರಿಣಮಿಸಿವೆ.

ಬಾಯ್ತೆರೆದು ನಿಂತಿರುವ ಬೃಹತ್​​ ಗುಂಡಿಗಳು

ಕೆಂಪೇಗೌಡ ರೈಲ್ವೆ ನಿಲ್ದಾಣದಿಂದ ಹೊರಬರುವ ಸಾವಿರಾರು ಪ್ರಯಾಣಿಕರು ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ಕೆ.ಆರ್.ಸರ್ಕಲ್ ಮೂಲಕ ಕಾರ್ಪೊರೇಷನ್ ಹಾಗೂ ವಿಧಾನಸೌಧಕ್ಕೆ ತೆರಳುವ ವಾಹನಗಳಿಗೆ ಇದೇ ಪ್ರಮುಖ ಸಂಪರ್ಕ ಮಾರ್ಗ. ಆದರೆ ಇಂತಹ ಪ್ರಮುಖ ರಸ್ತೆಯಲ್ಲೇ ಬೃಹತ್ ಗುಂಡಿಗಳು ಬಾಯ್ತೆರೆದು ನಿಂತಿವೆ. ರಸ್ತೆಯ ಮಧ್ಯಭಾಗದಲ್ಲೇ ನಿರ್ಮಾಣವಾಗಿರುವ ಗುಂಡಿ ವಾಹನ ಸವಾರರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಗುಂಡಿ ತಪ್ಪಿಸಲು ವಾಹನಗಳು ಏಕಾಏಕಿ ದಿಕ್ಕು ಬದಲಿಸುವ ಮತ್ತು ವೇಗವಾಗಿ ಬರುವ ವಾಹನಗಳ ಸವಾರರು ದಿಢೀರ್ ಬ್ರೇಕ್ ಹಾಕುವ ಕಾರಣ ಅಪಘಾತಗಳ ಸಂಖ್ಯೆ ಹೆಚ್ಚಳದ ಆತಂಕವೂ ಎದುರಾಗಿದೆ.

Loading...

ಇದನ್ನೂ ಓದಿ:  ಸಾಮಾಜಿಕ ಜಾಲತಾಣದಲ್ಲಿ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವಂತಿಲ್ಲ, ಅದು ಮುಕ್ತ ಪರವಾನಗಿ ಅಲ್ಲ: ಕರ್ನಾಟಕ ಹೈಕೋರ್ಟ್

ಇನ್ನು ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೂ ಅರಿವಿದೆ. ನವೆಂಬರ್ 11ರಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಐದು ನಗರ ಪಾಲಿಕೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಪ್ರಮುಖ, ಉಪಪ್ರಮುಖ ರಸ್ತೆಗಳಲ್ಲಿ ಗುಂಡಿಗಳನ್ನು ತ್ವರಿತವಾಗಿ ಮುಚ್ಚುವಂತೆ ಸೂಚನೆ ನೀಡಿದ್ದಾರೆ. ಅರ್ಟಿಯಲ್ ಮತ್ತು ಸಬ್ ಆರ್ಟಿಯಲ್ ರಸ್ತೆಗಳಲ್ಲಿ ಗುಂಡಿಗಳಿರದಂತೆ ನೋಡಿಕೊಳ್ಳಲು ನಿರ್ದೇಶನ ನೀಡಿದ್ದಾರೆ. ಇನ್ನೊಂದೆಡೆ ಬೆಂಗಳೂರಿನ ಸುಮಾರು 2,500 ಕಿಲೋಮೀಟರ್ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಬರೋಬ್ಬರಿ 8 ಸಾವಿರ ಕೋಟಿ ರೂಪಾಯಿ ವೆಚ್ಚದ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಡಾಂಬರೀಕರಣ ಹಾಗೂ ವೈಟ್ ಟಾಪಿಂಗ್ ಮೂಲಕ ರಸ್ತೆಗಳನ್ನು ಸುಧಾರಿಸುವ ಭರವಸೆಯನ್ನೂ ನೀಡಿದೆ. ಆದರೆ ಇಷ್ಟೆಲ್ಲ ಯೋಜನೆಗಳು, ಸಭೆಗಳು, ಸೂಚನೆಗಳ ನಡುವೆಯೂ ನಗರದ ಹೃದಯಭಾಗದಲ್ಲೇ ಗುಂಡಿಗಳು ಕಾಣಿಸಿಕೊಳ್ಳುತ್ತಿರುವುದು ಮಾತ್ರ ವಿಪರ್ಯಾಸವೇ ಸರಿ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More
Loading...
Unable to load recommendations.
Follow Us