AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ವರ್ಷಗಳಿಂದ ವಾಸವಿದ್ದ 29 ಕುಟುಂಬಗಳ ಮನೆ ನೆಲಸಮ: ಕೆಜಿ ಹಳ್ಳಿ, ಡಿಜೆ ಹಳ್ಳಿ‌ ನಿವಾಸಿಗಳಿಗೆ ಇನ್ನೂ ಇಲ್ಲ ಸೂರಿನ ಬಾಗ್ಯ

ಸಿಎಂ ಸಿದ್ದರಾಮಯ್ಯರನ್ನು ಭಾಗ್ಯಗಳ ರಾಮಯ್ಯ, ಕನ್ನಡ ರಾಮಯ್ಯ, ಅಪ್ಪಟ ಕನ್ನಡಾಭಿಮಾನಿ ಎಂದೆಲ್ಲಾ ಕರೆಯುತ್ತಾರೆ. ಆದರೆ, ಕೇರಳ ಸಿಎಂ ಎಕ್ಸ್ ಸಂದೇಶದ ಬೆನ್ನಲ್ಲೇ ಕೋಗಿಲು ಲೇಔಟ್​​ನಲ್ಲಿದ್ದ ಅಕ್ರಮ ನಿವಾಸಿಗಳ ಮೇಲೆ ಮೂಡಿದ ಕನಿಕರ ಕನ್ನಡಿಗರ ಮೇಲೆ ಯಾಕೆ ಮೂಡಿಲ್ಲ ಎಂಬ ಪ್ರಶ್ನೆ ಉದ್ಭವವಾಗಿದೆ. ಇದಕ್ಕೆ ಕಾರಣ ಕೆಜಿ ಹಳ್ಳಿ, ಡಿಜೆ ಹಳ್ಳಿ‌ಯಲ್ಲಿ ರೈಲ್ವೆ ಯೋಜನೆಗೆಂದು ಸ್ವಂತ ಜಾಗದಿಂದ ಒಕ್ಕಲೆಬ್ಬಿಸಿದ ಸಂತ್ರಸ್ತರ ಸಂಕಷ್ಟ.

150 ವರ್ಷಗಳಿಂದ ವಾಸವಿದ್ದ 29 ಕುಟುಂಬಗಳ ಮನೆ ನೆಲಸಮ: ಕೆಜಿ ಹಳ್ಳಿ, ಡಿಜೆ ಹಳ್ಳಿ‌ ನಿವಾಸಿಗಳಿಗೆ ಇನ್ನೂ ಇಲ್ಲ ಸೂರಿನ ಬಾಗ್ಯ
ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಮನೆಗಳನ್ನು ತೆರವು ಮಾಡಿರುವುದು
Ganapathi Sharma
|

Updated on: Jan 01, 2026 | 11:33 AM

Share

ಬೆಂಗಳೂರು, ಜನವರಿ 1: ಮೂರು ದಿನಗಳ ಹಿಂದೆ ಬೆಂಗಳೂರಿನ ಕೋಗಿಲು ಲೇಔಟ್​​ನಲ್ಲಿ (Kogilu Layout) ನೆಲೆಸಿದ್ದ ಅಕ್ರಮ ನಿವಾಸಿಗಳಿಗೆ ಸಿಎಂ ಸಿದ್ದರಾಮಯ್ಯ ಸೂರಿನ ಬಾಗ್ಯ ನೀಡಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಬೀದಿಯಲ್ಲಿ ನಿಂತಿರುವ ಕೆಜಿ ಹಳ್ಳಿ, ಡಿಜೆ ಹಳ್ಳಿ‌ (KG Halli–DJ Halli) ಮೂಲ ನಿವಾಸಿಗಳ ಅಳಲು ಕೇಳುವವರೇ ಇಲ್ಲದಂತಾಗಿದೆ. ಒತ್ತುವರಿ ತೆರವು ಹೆಸರಲ್ಲಿ ರೈಲ್ವೆ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡ ಕನ್ನಡಿಗರು ಈಗ ಸರ್ಕಾರದ ತಾರತಮ್ಯದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಡಿಜೆ ಹಳ್ಳಿಯಲ್ಲಿ ಅಕ್ಟೋಬರ್‌ 31 ರಂದು ರೈಲ್ವೆ ಇಲಾಖೆ ಜಾಗ ಎಂದು ಯಾವುದೇ ನೋಟೀಸ್ ಇಲ್ಲದೆ, ಸೂಚನೆ ಕೂಡಾ ಇಲ್ಲದೆ ಏಕಾಏಕಿ ಮನೆಗಳನ್ನು ನೆಲಸಮ ಮಾಡಲಾಗಿತ್ತು. 150 ವರ್ಷಗಳಿಂದ ವಾಸವಾಗಿದ್ದ 29 ಕುಟುಂಬಗಳ ಮನೆ ನೆಲಸಮ ಮಾಡಲಾಗಿತ್ತು.

ಕೆಜೆ ಹಳ್ಳಿಯ ಸರ್ವೆ ನಂಬರ್ 71 ರಲ್ಲಿ 1 ಎಕರೆ 37 ಗುಂಟೆ ಜಾಗದಲ್ಲಿ ಚೂನಾ ಲೈನ್ ಜನರಿಗಾಗಿ 1984 ರಲ್ಲಿ 1 ಎಕರೆ 28 ಗುಂಟೆ ಸರ್ಕಾರಿಂದಲೇ ನೀಡಿದ ಜಾಗ ಇದಾಗಿದೆ. ತದನಂತರ ಒಂಟಿ ಮನೆ ಯೋಜನೆಯಡಿಯಲ್ಲಿ 2015 ರಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದಿಂದಲೇ ಮನೆ ಒಂಟಿ ಮನೆಗಳ ನಿರ್ಮಾಣ ಕೂಡಾ ಮಾಡಿಕೊಡಲಾಗಿತ್ತು. ಆದರೆ, ಅಕ್ಟೋಬರ್ 31 ರಂದು ಬಿಡಿಎ ಅಭಿವೃದ್ಧಿ ಹೆಸರಲ್ಲಿ ಸ್ಥಳೀಯ ನಿವಾಸಿಗಳನ್ನು ತೆರವು ಮಾಡಿಸಿ ಮನೆ ನೆಲಸಮ ಮಾಡಲಾಗಿದೆ. ಇದೆಲ್ಲ ಆಗಿ ಮೂರು ತಿಂಗಳು ಕಳೆದರೂ ಯಾವುದೇ ಪರಿಹಾರವೂ ಇಲ್ಲ, ಮನೆಯೂ ಇಲ್ಲದೆ ಸಂತ್ರಸ್ಥರು ಪರಡಾಡುವಂತಾಗಿದೆ.

ಇದನ್ನೂ ಓದಿ: ಹೊಸ ವರ್ಷದ ಮರುದಿನವೇ ಕೋಗಿಲು ನಿರಾಶ್ರಿತರಿಗೆ ಮನೆ ಭಾಗ್ಯ: 187 ಮನೆಗಳ ಸರ್ವೆ ಮುಕ್ತಾಯ, ಯಾರಿಗೆ ಸಿಗಲಿದೆ ಸೂರು?

‘ಕೋಗಿಲು ಲೇಔಟ್​​​ನಲ್ಲಿ ಕೇರಳಿಗರ ಮೇಲೆ ತೋರಿದ ಪ್ರೀತಿ ಇಲ್ಲಿಯೂ ತೋರಿ. ನಮಗೆ ಮನೆ ಕೊಡಿ ನಾವೇನು ಪಾಪ ಮಾಡಿದ್ದೇವೆ’ ಎಂಬುದು ಕೆಜಿ ಹಳ್ಳಿ, ಡಿಜೆ ಹಳ್ಳಿ‌ ಕನ್ನಡಿಗರ ಪ್ರಶ್ನೆಯಾಗಿದೆ. ಓಟರ್ ಐಡಿ ಇದೆ, ಆದಾರ್ ಕಾರ್ಡ್ ಇದೆ. ಬಿಪಿಎಲ್ ಕಾರ್ಡ್ ಕೂಡಾ ಇದೆ. ಆದರೆ ಕನ್ನಡಿಗರಿಗೆ ಮನೆ ಇಲ್ಲ. ಕನ್ನಡಿಗರಿಗೇ ನೀಡದ ವಿಶೇಷ ಸೌಲಭ್ಯ ಅಕ್ರಮವಾಗಿ ನೆಲೆಸಿದ್ದ ಕೇರಳಿಗರಿಗೆ ಯಾಕೆ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿಬರುತ್ತಿದೆ. ಸಿಎಂ ಸಿದ್ದರಾಮಯ್ಯ ಇನ್ನಾದರೂ ಈ ಕಡೆ ಗಮನ ಹರಿಸುತ್ತಾರೆಯೇ ಎಂಬುದನ್ನು ಕಾದು ನೋಡ್ಬೇಕಿದೆ.

ವರದಿ: ಅರುಣ್​ ಕುಮಾರ್ ಆರ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು