ಬೆಂಗಳೂರಿನಲ್ಲಿ ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ 3 ಕೋಟಿಗೆ ಬೇಡಿಕೆ; ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಸಿಸಿಬಿ ವಶಕ್ಕೆ

ಜಿ.ಕೆ.ವೆಂಕಟೇಶ್​ ಯಶವಂತಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್​ ಆಗಿದ್ದು, ಯಶವಂತಪುರ(Yashwantpur) ವಾರ್ಡ್ ಕಾಮಗಾರಿಯನ್ನು ಗುತ್ತಿಗೆದಾರರ ಚಂದ್ರು ಗುತ್ತಿಗೆ ಪಡೆದಿದ್ದರು. ಚಂದ್ರುಗೆ ಗುತ್ತಿಗೆ ಸಿಕ್ಕಿದ ಹಿನ್ನೆಲೆ ಕೆಂಡಾಮಂಡಲವಾಗಿದ್ದ ಜಿ.ಕೆ.ವೆಂಕಟೇಶ್, ನಿನ್ನಿಂದ ನಷ್ಟ ಆಗಿದ್ದು, ಕಾಮಗಾರಿ ಕೈ ತಪ್ಪಿದೆ. ಅದನ್ನು ಭರಿಸುವಂತೆ ಬೆದರಿಕೆ ಒಡ್ಡಿದ್ದರು. 2 ದಿನಗಳ ಹಿಂದೆ ಗುತ್ತಿಗೆದಾರ ಚಂದ್ರು ಕಿಡ್ನ್ಯಾಪ್​ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ.

ಬೆಂಗಳೂರಿನಲ್ಲಿ ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ 3 ಕೋಟಿಗೆ ಬೇಡಿಕೆ; ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಸಿಸಿಬಿ ವಶಕ್ಕೆ
ಪ್ರಾತಿನಿಧಿಕ ಚಿತ್ರ
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 20, 2023 | 2:04 PM

ಬೆಂಗಳೂರು, ಅ.20: ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ 3 ಕೋಟಿ ರೂ. ಬೇಡಿಕೆಯಿಟ್ಟಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಿ.ಕೆ.ವೆಂಕಟೇಶ್​ ಅವರನ್ನು​ ಸಿಸಿಬಿ ವಶಕ್ಕೆ ಪಡೆದಿದೆ. ಹೌದು, ಜಿ.ಕೆ.ವೆಂಕಟೇಶ್​ ಯಶವಂತಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್​ ಆಗಿದ್ದು, ಯಶವಂತಪುರ(Yashwantpur) ವಾರ್ಡ್ ಕಾಮಗಾರಿಯನ್ನು ಗುತ್ತಿಗೆದಾರರ ಚಂದ್ರು ಗುತ್ತಿಗೆ ಪಡೆದಿದ್ದರು. ಚಂದ್ರುಗೆ ಗುತ್ತಿಗೆ ಸಿಕ್ಕಿದ ಹಿನ್ನೆಲೆ ಕೆಂಡಾಮಂಡಲವಾಗಿದ್ದ ಜಿ.ಕೆ.ವೆಂಕಟೇಶ್, ನಿನ್ನಿಂದ ನಷ್ಟ ಆಗಿದ್ದು, ಕಾಮಗಾರಿ ಕೈ ತಪ್ಪಿದೆ. ಅದನ್ನು ಭರಿಸುವಂತೆ ಬೆದರಿಕೆ ಒಡ್ಡಿದ್ದರು. 2 ದಿನಗಳ ಹಿಂದೆ ಗುತ್ತಿಗೆದಾರ ಚಂದ್ರು ಕಿಡ್ನ್ಯಾಪ್​ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ  ಜಿ.ಕೆ.ವೆಂಕಟೇಶ್, 3 ಕೋಟಿ ರೂ. ಚೆಕ್ ಪಡೆದು ಹಲ್ಲೆ ಮಾಡಿ ಬಿಡುಗಡೆ ಮಾಡಲಾಗಿತ್ತು. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಗೆ ಗುತ್ತಿಗೆದಾರ ಚಂದ್ರು ದೂರು ನೀಡಿದ್ದರು. ಈ ಹಿನ್ನಲೆ ಇದೀಗ ಜಿಕೆ ವೆಂಕಟೇಶ್ ಅವರನ್ನು CCB ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಶಾಲಾ ಬಸ್, ಬೈಕ್, ಬುಲೇರೊ ನಡುವೆ ಸರಣಿ ಅಪಘಾತ

ನೆಲಮಂಗಲ: ಶಾಲಾ ಬಸ್, ಬೈಕ್ ಹಾಗೂ ಬುಲೇರೊ ನಡುವೆ ಡಿಕ್ಕಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4 ರ ಬೂದಿಹಾಳ್ ಬಳಿ ನಡೆದಿದೆ. ಬೈಕ್​ನಲ್ಲಿದ್ದ ರಾಜೇಶ್ ಹಾಗೂ ಗಂಗಧರ್​ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಬುಲೋರೋ ವಾಹನ ಡಿಕ್ಕಿಯಾಗಿ ರಸ್ತೆಯಲ್ಲೇ ಬಿದ್ದಿದ್ದರಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಆಗಿದ್ದು, ಬಳಿಕ ಕ್ರೇನ್ ಬಳಸಿ ಮೇಲೆತ್ತಲಾಯಿತು. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮಹಿಳಾ ಕಾನ್ಸ್​ಟೇಬಲ್ ಕಿಡ್ನ್ಯಾಪ್​& ಮರ್ಡರ್ ಕೇಸ್: ಲೇಡಿ ಕಾನ್ಸ್​ಟೇಬಲ್ ಸೇರಿ ಇಬ್ಬರ ಬಂಧನ

ತಡರಾತ್ರಿ ನಾಲ್ವರು ಅಟ್ಯಾಕ್​ ಮಾಡಿ ವ್ಯಕ್ತಿಯೊಬ್ಬನನ್ನ ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು:ತಡರಾತ್ರಿ ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ತೆರಳುತಿದ್ದವನನ್ನ ಅಡ್ಡಗಟ್ಟಿ ಅಟ್ಯಾಕ್​ ಮಾಡಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಪುಲಕೇಶಿಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ಗರ್ ಮೃತ ವ್ಯಕ್ತಿ. ಇತ ಗುಜರಿ ಅಂಗಡಿ ವ್ಯವಹಾರ ನಡೆಸುತಿದ್ದು, ತಡರಾತ್ರಿ  ಈ ದುರ್ಘಟನೆ ನಡೆದಿದೆ. ಮೇಲ್ನೋಟಕ್ಕೆ ಹಣಕಾಸು ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪುಲಕೇಶಿ ನಗರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Fri, 20 October 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ