Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಲಪಾಡ್ ಯೂತ್ ಕಾಂಗ್ರೆಸ್ ಹೆಸರೇಳಿಕೊಂಡು ವಿದ್ಯಾರ್ಥಿ ಕಿಡ್ನಾಪ್ ಮಾಡಿ ಕಿರುಕುಳ; 9 ಜನರ ವಿರುದ್ಧ FIR

Student Kidnap: ಕೆಲ ಕಿಡಿಗೇಡಿಗಳು ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ ಮಾಡಿ ಕಿರುಕುಳ ನೀಡಿ ಹಣ ವಸೂಲಿ ಮಾಡಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ನಲಪಾಡ್ ಯೂತ್ ಕಾಂಗ್ರೆಸ್ ಹೆಸರೇಳಿಕೊಂಡು ವಿದ್ಯಾರ್ಥಿ ಕಿಡ್ನಾಪ್ ಮಾಡಿ ಕಿರುಕುಳ; 9 ಜನರ ವಿರುದ್ಧ FIR
ಕೆಂಗೇರಿ ಪೊಲೀಸ್ ಠಾಣೆ
Follow us
Jagadisha B
| Updated By: ಆಯೇಷಾ ಬಾನು

Updated on: Aug 19, 2024 | 9:11 AM

ಬೆಂಗಳೂರು, ಆಗಸ್ಟ್​.19: ನಲಪಾಡ್ ಯೂತ್ ಕಾಂಗ್ರೆಸ್ (Youth Congress) ಹೆಸರೇಳಿಕೊಂಡು ವಿದ್ಯಾರ್ಥಿಗೆ ಕಿರಿಕುಳ ನೀಡಿರುವ ಆರೋಪ ಕೇಳಿ ಬಂದಿದ್ದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ (Kengeri Police Station) 9 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕೆಲ ಕಿಡಿಗೇಡಿಗಳು ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ (Nalapad) ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ (Student Kidnap Case) ಮಾಡಿ ಆತನ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾರೆ. ಸದ್ಯ ಈಗ ಈ ಕುರಿತು ವಿದ್ಯಾರ್ಥಿ ದೂರು ನೀಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್‌ ಜೈನ್‌ ಎಂಬ ವಿದ್ಯಾರ್ಥಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ. ಆದರೆ ಕಾರಣಾಂತರಗಳಿಂದಾಗಿ ಜೀವನ್​ಗೆ ಹೇಳಿದ ಸಮಯಕ್ಕೆ ಹಣ ನೀಡಲು ಆಗಿರಲಿಲ್ಲ. ತಡವಾಗಿ ಸಾಲ ತೀರಿಸಿದ್ದ. ಆದರೆ ಕಿಡಿಗೇಡಿಗಳು ಸಾಲ ತೀರಿಸಿದರೂ ಆತನನ್ನು ಬಿಡದೆ ಮತ್ತಷ್ಟು ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ

ಜೀವನ್​ನನ್ನು ಬಲವಂತ ಬೆಟ್ಟಿಂಗ್ ಬಲೆಗೆ ಬೀಳಿಸಿದ್ದಾರೆ ಎಂಬ ಆರೋಪ‌ ಕೇಳಿ ಬಂದಿದೆ. ಜೊತೆಗೆ ಕಿಡ್ನ್ಯಾಪ್​ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಬೆತ್ತಲೆಗೊಳಿಸಿದ್ದಾರೆ. ಅಷ್ಟೇ ಅಲ್ಲದೆ ಬೆತ್ತಲೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆಹಾಕಿದ್ದಾರೆ. ಆ ಬಳಿಕ 6 ಲಕ್ಷಕ್ಕೆ ಡಿಮ್ಯಾಂಡ್ ಮಾಡಿ ಹಣ ಪಡೆದಿದ್ದಾರೆ. ಅದಾದ ಬಳಿಕವೂ ಮನೆಗೆ ಬಂದು ಸಾಲ ಪಡೆಯುವಂತೆ ಬೆದರಿಕೆ ಹಾಕಿದ್ದಾರೆ. ಸಾಲ ಕೊಟ್ಟು ಹೆಚ್ಚು ಬಡ್ಡಿ ಹಾಕಿ ಕಿರುಕುಳ ನೀಡಿದ್ದಾರೆ ಎಂದು ಯುವಕ ಜೀವನ್ ಆರೋಪ ಮಾಡಿದ್ದಾರೆ.

ಇನ್ನು ಜೀವನ್​​ನನ್ನು ಪದೆ ಪದೇ ಹೋಟೆಲ್​ಗೆ ಕರೆಸಿಕೊಂಡು ಹಲ್ಲೆ ಮಾಡಿದ್ದಾರೆ. ಆರು ಲಕ್ಷ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಅಂತ ಕಿರುಕುಳ ನೀಡಿದ್ದಾರೆ. ಸದ್ಯ ದೂರಿನಲ್ಲಿ ಒಂಬತ್ತು ಜನರ ವಿರುದ್ಧ ಕಿಡ್ನಾಪ್ ಹಾಗೂ ಸುಲಿಗೆ ಮಾಡಿರೋ ಆರೋಪ ಮಾಡಿ ಯುವಕ ದೂರು ನೀಡಿದ್ದಾನೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ