ಸಾಮಾಜಿಕ ಜಾಲತಾಣದಲ್ಲಿ ಕಿಲ್​ ಡಿಕೆ ಬ್ರದರ್ಸ್​​ ಎಂದು ಪೋಸ್ಟ್:​ ದೂರು ದಾಖಲು

ಸಾಮಾಜಿಕ ಜಾಲತಾಣದಲ್ಲಿ "KILL Dk brothers" ಎಂದು ಪೋಸ್ಟ್ ಹಾಕಿದ್ದ ರಂಜಿತ್​.​ಆರ್​ ಎಂ ಎಂಬುವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಕಿಲ್​ ಡಿಕೆ ಬ್ರದರ್ಸ್​​ ಎಂದು ಪೋಸ್ಟ್:​ ದೂರು ದಾಖಲು
ಸಾಮಾಜಿಕ ಜಾಲತಾಣದ ಪೋಸ್ಟ್​​
Edited By: ವಿವೇಕ ಬಿರಾದಾರ

Updated on: Nov 15, 2023 | 11:04 AM

ಬೆಂಗಳೂರು ನ.15: ಸಾಮಾಜಿಕ ಜಾಲತಾಣದಲ್ಲಿ (Social Media) “KILL Dk brothers” ಎಂದು ಪೋಸ್ಟ್ ಹಾಕಿದ್ದ ರಂಜಿತ್​.​ಆರ್​ ಎಂ ಎಂಬುವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ರಂಜಿತ್​ ಆರ್ ಎಂ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ತನ್ನನ್ನು ತಾನು ಸೈಬರ್ ಕ್ರೈಂ ಡಿಟೆಕ್ಟೀವ್ at ಬೆಂಗಳೂರು ಸಿಟಿ ಪೊಲೀಸ್ ಎಂದು ಡೀಟೇಲ್ಸ್ ಹಾಕಿಕೊಂಡಿದ್ದನು.

ಈತ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಸಹೋದರರ ಬಗ್ಗೆ, ಕಾಂಗ್ರೇಸ್ ಪಕ್ಷ ಮುಸಲ್ಮಾನರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದನು. ಅಷ್ಟೆ ಅಲ್ಲದೆ ಕಿಕ್ ಔಟ್ ಕಾಂಗ್ರೇಸ್ ಎಂದು ಶಬ್ಧ ಪ್ರಯೋಗ ಮಾಡಿ ಪೋಸ್ಟ್ ಹಾಕಿದ್ದನು. ಈ ಹಿನ್ನೆಲೆಯಲ್ಲಿ ಜಯನಗರ ಯೂತ್ ಕಾಂಗ್ರೇಸ್ ಅಧ್ಯಕ್ಷ ಶರತ್ ಮತ್ತು ಉಪಾಧ್ಯಕ್ಷರು ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಆರೋಪಿ ರಂಜಿತ್​ ಆರ್​. ಎಂನನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:29 am, Wed, 15 November 23

Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Follow Us