ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ

ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ಬೆಂಗಳೂರಿನ ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಿಸಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಲೋಕಾರ್ಪಣೆ ಮಾರ್ಚ್ 8ರ ಭಾನುವಾರ ನಡೆಯಲಿದೆ. ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ
ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್
Image Credit source: KIMS Group of Hospitals

Updated on: Mar 07, 2026 | 11:04 AM

ಬೆಂಗಳೂರು, ಮಾರ್ಚ್ 7: ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ ನಿಟ್ಟಿನಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಡಲಾಗಿದ್ದು, ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ (KIMS Group of Hospitals) ವತಿಯಿಂದ ನಿರ್ಮಿಸಲಾಗಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮಾರ್ಚ್ 8 ರಂದು ಲೋಕಾರ್ಪಣೆಯಾಗಲಿವೆ. ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಾಣಗೊಂಡಿರುವ ಈ ಆಸ್ಪತ್ರೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಆಸ್ಪತ್ರೆಗಳ ಉದ್ಘಾಟನಾ ಸಮಾರಂಭವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ PES University ಕ್ಯಾಂಪಸ್‌ನ ಎಂಆರ್‌ಡಿ ಆಡಿಟೋರಿಯಂನಲ್ಲಿ ನಡೆಯಲಿದೆ. ಮಹದೇವಪುರದ ಆಸ್ಪತ್ರೆಯಲ್ಲಿ ಬೆಳಗ್ಗೆ 9 ಗಂಟೆಗೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಆಸ್ಪತ್ರೆಯಲ್ಲಿ ಬೆಳಗ್ಗೆ 11 ಗಂಟೆಗೆ ರಿಬ್ಬನ್ ಕಟ್ಟಿಂಗ್ ಮೂಲಕ ಲೋಕಾರ್ಪಣೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್​ನ ಎಂಡಿ ಡಾ. ಬಿ ಭಾಸ್ಕರ ರಾವ್, ಸಿಇಒ ಡಾ. ನಿತೀಶ್ ಶೆಟ್ಟಿ ಸೇರಿದಂತೆ ಸಂಸ್ಥೆಯ ಪ್ರಮುಖರು ಭಾಗವಹಿಸಲಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಆರಂಭವಾಗುತ್ತಿದ್ದು, ಆಧುನಿಕ ವೈದ್ಯಕೀಯ ಸೌಲಭ್ಯಗಳು ಮತ್ತು ತಜ್ಞ ವೈದ್ಯರ ಸೇವೆಗಳನ್ನು ಇಲ್ಲಿ ಒದಗಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ತೆಲುಗು ಚಿತ್ರರಂಗದ ಜನಪ್ರಿಯ ನಟ ಜ್ಯೂನಿಯರ್ ಎನ್​ಟಿಆರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವುದು ವಿಶೇಷ ಆಕರ್ಷಣೆಯಾಗಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 am, Sat, 7 March 26

Follow Us