ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಟೀಕೆ ಬೆನ್ನಲ್ಲೇ ಸಿಎಂ, ಡಿಸಿಎಂ ಭೇಟಿಯಾದ ಕಿರಣ್ ಮಜುಂದಾರ್ ಶಾ!

ಇತ್ತೀಚಿಗೆ ಬೆಂಗಳೂರಿನ ರಸ್ತೆ ಗುಂಡಿಗಳ ಕುರಿತಾಗಿ ಉದ್ಯಮಿ, ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್ ಶಾ ಅವರು ಕಟುವಾಗಿ ಟೀಕೆ ಮಾಡಿದ್ದರು. ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸದ್ಯ ಉದ್ಯಮಿಯ ಈ ನಡೆ ಭಾರೀ ಕುತೂಹಲ ಮೂಡಿಸಿದೆ.

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಟೀಕೆ ಬೆನ್ನಲ್ಲೇ ಸಿಎಂ, ಡಿಸಿಎಂ ಭೇಟಿಯಾದ ಕಿರಣ್ ಮಜುಂದಾರ್ ಶಾ!
ಸಿಎಂ ಸಿದ್ದರಾಮಯ್ಯ, ಉದ್ಯಮಿ ಕಿರಣ್ ಮಜುಂದಾರ್ ಶಾ, ಡಿಸಿಎಂ ಡಿಕೆ ಶಿವಕುಮಾರ್​​
Edited By:

Updated on: Oct 21, 2025 | 12:43 PM

ಬೆಂಗಳೂರು, ಅಕ್ಟೋಬರ್​ 21: ಸದ್ಯ ರಾಜ್ಯದಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ರಸ್ತೆ ಗುಂಡಿ ಸೇರಿದಂತೆ ಕಸದ ಬಗ್ಗೆ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ (Kiran Mazumdar-Shaw) ಮತ್ತು ಮೋಹನ್‌ ದಾಸ್ ಪೈ ಸೇರಿ ಹಲವರು ಕಿಡಿಕಾರಿದ್ದರು. ರಾಜ್ಯ ಸರ್ಕಾರದ ವಿರುದ್ಧ ಉದ್ಯಮಿಗಳು ಟ್ವೀಟ್‌ನಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮಧ್ಯೆ ಇಂದು ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್​​ರನ್ನು ಭೇಟಿ ಮಾಡಿದ್ದಾರೆ. ಸಾಕಷ್ಟು ಟೀಕೆ, ಪ್ರತಿಟೀಕೆಗಳ ಬೆನ್ನಲ್ಲೇ  ಭೇಟಿ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್ ಶಾ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಮೋಹನ್‌ದಾಸ್‌ ಪೈ ಕೂಡ ರಸ್ತೆ ಗುಂಡಿ ಹಾಗೂ ಕಸದ ಸಮಸ್ಯೆ ಬಗ್ಗೆ ಪ್ರಶ್ನೆ ಮಾಡಿದ್ದರು. ಇದೇ ಟ್ವೀಟ್‌ಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಕೂಡ ಕೆಂಡಕಾರಿದ್ದರು. ಇದೆಲ್ಲದರ ಮಧ್ಯೆ ಕಿರಣ್ ಮಜುಂದಾರ್ ಶಾ ಅವರು ಡಿಸಿಎಂ ಡಿಕೆ ಶಿವಕುಮಾರ್​​ರನ್ನು ಭೇಟಿ ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್​​​​


ಈ ಬಗ್ಗೆ ಟ್ವೀಟ್​ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಇಂದು ನನ್ನ ನಿವಾಸದಲ್ಲಿ ಉದ್ಯಮಿ ಮತ್ತು ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್ ಶಾ ಅವರನ್ನು ಭೇಟಿ ಮಾಡಿ
ಸಂತೋಷವಾಯಿತು. ಬೆಂಗಳೂರು ಸೇರಿದಮತೆ ಕರ್ನಾಟಕದ ಬೆಳವಣಿಗೆಯ ಮುಂದಿನ ಹಾದಿ ಬಗ್ಗೆ ಚರ್ಚಿಸಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಇನ್ನು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿರುವ ಕಿರಣ್‌ ಮಜುಂದಾರ್ ಶಾ, ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:42 pm, Tue, 21 October 25