ಸ್ಮಾರ್ಟ್ ಮೀಟರ್​​ ಭ್ರಷ್ಟಾಚಾರ ಕೇಸ್​​: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ; ಸಚಿವ ಕೆಜೆ ಜಾರ್ಜ್​​ಗೆ ಬಿಗ್ ರಿಲೀಫ್

ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೇ ಪ್ರಕರಣ ಇಂಧನ ಸಚಿವ ಕೆ.ಜೆ.ಜಾರ್ಜೆಗೆ ಸಂಕಷ್ಟಕ್ಕೆ ಸಿಲುಕಿದ್ದರು. ಇತ್ತೀಚೆಗೆ ಹೈಕೋರ್ಟ್ ಪ್ರಕರಣವನ್ನು ರದ್ದುಪಡಿಸಿಗೊತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ನಾಯಕರು ಸುಪ್ರೀಂ ಮೊರೆಹೋಗಿದ್ದರು. ಆದರೆ ಇದೀಗ ಸುಪ್ರೀಂ ಕೂಡ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ಕೆಜೆ ಜಾರ್ಜೆಗೆ ಬಿಗ್​ ರಿಲೀಫ್​ ಸಿಕ್ಕಿದೆ.

ಸ್ಮಾರ್ಟ್ ಮೀಟರ್​​ ಭ್ರಷ್ಟಾಚಾರ ಕೇಸ್​​: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ; ಸಚಿವ ಕೆಜೆ ಜಾರ್ಜ್​​ಗೆ ಬಿಗ್ ರಿಲೀಫ್
ಕೆಜೆ ಜಾರ್ಜ್
Image Credit source: facebook.com

Updated on: Sep 26, 2026 | 8:55 PM

ಬೆಂಗಳೂರು, ಸೆಪ್ಟೆಂಬರ್​​ 26: ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂಧನ ಸಚಿವ ಕೆಜೆ ಜಾರ್ಜ್ ಹಾಗೂ ಬೆಸ್ಕಾಂ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ದೂರು ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪಾರ್ದೀವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ. ಆ ಮೂಲಕ ಕೆಜೆ ಜಾರ್ಜೆಗೆ ಬಿಗ್​ ರಿಲೀಫ್​ ಸಿಕ್ಕಿದೆ.

ಹೈಕೋರ್ಟ್ ತೀರ್ಪನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್

ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ಪ್ರಕರಣ ರದ್ದು ಕೋರಿ ಸಚಿವ ಕೆಜೆ. ಜಾರ್ಜ್​​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ್ದ ಹೈಕೋರ್ಟ್, ಭ್ರಷ್ಟಾಚಾರದ ಆರೋಪಕ್ಕೆ ಯಾವುದೇ ಸೂಕ್ತ ಆಧಾರಗಳಿಲ್ಲ. ಕೆಜೆ. ಜಾರ್ಜ್ ಆರ್ಥಿಕ ಲಾಭ ಪಡೆಕೊಂಡಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಈ ಹಿಂದೆಯೇ ಪ್ರಕರಣವನ್ನು ರದ್ದುಗೊಳಿಸಿತ್ತು.

ಇದನ್ನೂ ಓದಿ: ಸ್ಮಾರ್ಟ್ ಮೀಟರ್ ಅಕ್ರಮ ಆರೋಪ: ಸಚಿವ ಕೆಜೆ ಜಾರ್ಜ್​ಗೆ ಸಂಕಷ್ಟ, ಕೋರ್ಟ್​ ಮೆಟ್ಟಿಲೇರಿದ ಬಿಜೆಪಿ

ಇದನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಇಂದು ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಪೀಠ, ದಾಖಲೆಗಳನ್ನು ಪರಿಶೀಲಿಸಿದ ನಂತರ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಸಕಾರಣಗಳಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ಕೆಜೆ ಜಾರ್ಜೆಗೆ ಬಿಗ್​ ರಿಲೀಫ್​ ಸಿಕ್ಕಿದೆ.

ಪ್ರಕರಣದ ಹಿನ್ನೆಲೆ

ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜ್​ ಸಚಿವ ಕೆಜೆ ಜಾರ್ಜ್ ಹಾಗೂ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಿಮಿನಲ್​​ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಸ್ಮಾರ್ಟ್ ಮೀಟರ್: ಪಕ್ಕದ ರಾಜ್ಯದಲ್ಲಿ 900 ರೂ.ಇಲ್ಯಾಕೆ 10 ಸಾವಿರ: ಸರ್ಕಾರಕ್ಕೆ ಕೋರ್ಟ್ ಪ್ರಶ್ನೆ

ಬಿಜೆಪಿ ಶಾಸಕರು ಮೊದಲು ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ, ನಂತರ ಭ್ರಷ್ಟಾಚಾರ ತಡೆ ಕಾಯ್ದೆ ವಿಶೇಷ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 314, 316, 61 ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಸೆಕ್ಷನ್ 13(1)(a) ಮತ್ತು 13(1)(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us