AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKRDB ಪ್ರಗತಿ ಪರಿಶೀಲನಾ ಸಭೆ; ಈ ಭಾಗದ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಲು ಸಿಎಂ ಸೂಚನೆ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಭೆ ಇಂದು(ಶುಕ್ರವಾರ) ಬೆಂಗಳೂರಲ್ಲಿ ನಡೆದಿದೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಆಡಳಿತ ಇಲಾಖೆಗಳು ಮಂಜೂರಾತಿ ಮತ್ತು ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ಜೊತೆಗೆ ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ತೀವ್ರ ಕೊರತೆ ಇದೆ. ಹೀಗಾಗಿ ಶೀಘ್ರವೇ ಹುದ್ದೆ ಭರ್ತಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

KKRDB ಪ್ರಗತಿ ಪರಿಶೀಲನಾ ಸಭೆ; ಈ ಭಾಗದ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಲು ಸಿಎಂ ಸೂಚನೆ
ಸಿದ್ದರಾಮಯ್ಯ
Anil Kalkere
| Edited By: |

Updated on: Jun 14, 2024 | 3:15 PM

Share

ಬೆಂಗಳೂರು, ಜೂ.14: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಭೆ ಇಂದು(ಶುಕ್ರವಾರ) ಬೆಂಗಳೂರಲ್ಲಿ ನಡೆದಿದೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ‘ಕಲ್ಯಾಣ ಕರ್ನಾಟಕ ಭಾಗ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಹಿಂದುಳಿದಿದೆ. ಮಾನವ ಅಭಿವೃದ್ಧಿ ಸೂಚ್ಯಂಕ ಗಮನದಲ್ಲಿ ಇಟ್ಟುಕೊಂಡು ಸುಧಾರಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ KKRDB ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.‘

ಹಾಸ್ಟೆಲ್, ಅಂಗನವಾಡಿ, ವಸತಿಶಾಲೆಗಳ ವೃದ್ಧಿಗೆ ಆದ್ಯತೆ

‘ಯಾವ ಕ್ಷೇತ್ರದಲ್ಲಿ ಹಿಂದುಳಿದಿದ್ದೇವೆಯೋ ಆ ಕ್ಷೇತ್ರಗಳಿಗೆ ಒತ್ತು ನೀಡಬೇಕು. ಹಾಸ್ಟೆಲ್​​ಗಳು, ಅಂಗನವಾಡಿ ಹಾಗೂ ವಸತಿಶಾಲೆಗಳ ಮೂಲಸೌಕರ್ಯ ವೃದ್ಧಿಗೆ ಆದ್ಯತೆ ನೀಡಬೇಕು. ಲಭ್ಯ ಅನುದಾನವನ್ನು ಆದ್ಯತೆಯ ಮೇರೆಗೆ ವೆಚ್ಚ ಮಾಡಬೇಕು. ರಸ್ತೆ, ಕುಡಿಯುವ ನೀರು, ನೀರಾವರಿ ಮತ್ತಿತರ ಮೂಲಸೌಕರ್ಯಗಳಿಗೆ ಒತ್ತು ನೀಡಿ. ಪ್ರೌಢಶಾಲೆ, ಪದವಿಪೂರ್ವ, ಪದವಿ ಕಾಲೇಜುಗಳ ಸ್ಥಾಪನೆಗೆ ಸೂಚಿಸಿದರು.

ಇದನ್ನೂ ಓದಿ:ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆರೋಗ್ಯ ಸುಧಾರಣೆಗೆ 300 ಕೋಟಿ ರೂ. ಮೀಸಲು

ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ಹುದ್ದೆ ಭರ್ತಿಗೆ ಕ್ರಮ

ಆಡಳಿತ ಇಲಾಖೆಗಳು ಮಂಜೂರಾತಿ ಮತ್ತು ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ಜೊತೆಗೆ ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ತೀವ್ರ ಕೊರತೆ ಇದೆ. ಹೀಗಾಗಿ ಶೀಘ್ರವೇ ಹುದ್ದೆ ಭರ್ತಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು. ಅಂಗನವಾಡಿ, ಹಾಸ್ಟೆಲ್​​​, ಶಾಲೆಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳ ನಡುವೆ ಸಮನ್ವಯಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ